ಕಲಬುರಗಿ: ಭಕ್ತಿ, ಶೃದ್ಧೆ, ಕಾಯಕವೆಂಬ ಮೌಲ್ಯಗಳಿಂದ ತಮ್ಮದೇ ಆದ ಸಮಾಜ ಸೇವೆಯನ್ನು ಸಲ್ಲಿಸಿದ ಶರಣ ಹಡಪದ ಅಪ್ಪಣ್ಣನವರು ಅಪ್ರತಿಮ ಕಾಯಕಯೋಗಿದ್ದಾರೆ. ಬಸವಣ್ಣನವರಿಗೆ ಆಪ್ತರಾಗಿ ಇಡೀ ಜೀವನದುದ್ದಕ್ಕೂ ಸಮಾಜ ಸೇವೆ ಮಾಡಿದ್ದಾರೆ. ಕಾಯಕದಲ್ಲಿ ಮೇಲು-ಕೀಳು ಸಲ್ಲದೆಂದು ಕಾಯಕಕ್ಕೆ ದೈವತ್ವದ ಸ್ಥಾನವನ್ನು ದೊರಕಿಸಿಕೊಡಲು ಅಪ್ಪಣ್ಣನವರ ಕೊಡುಗೆ ಅವಿಸ್ಮರಣೀಯವಾಗಿದೆ ಎಂದು ಪ್ರಾಚಾರ್ಯ ಮಹಮ್ಮದ್ ಅಲ್ಲಾವುದ್ದೀನ್ ಸಾಗರ ಅಭಿಪ್ರಾಯಪಟ್ಟರು.
ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ’ಎನ್.ಎಸ್.ಎಸ್ ಘಟಕ’ದ ಸಹಯೋಗದೊಂದಿಗೆ ಬುಧವಾರ ಏರ್ಪಡಿಲಾಗಿದ್ದ ’ಶರಣ ಹಡಪದ ಅಪ್ಪಣ್ಣನವರ ೮೮೮ನೇ ಜಯಂತಿ’ಯಲ್ಲಿ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಅವರು ಮಾತನಾಡುತ್ತಿದ್ದರು.
ಉಪನ್ಯಾಸಕ, ಶರಣ ಚಿಂತಕ ಎಚ್.ಬಿ.ಪಾಟೀಲ ಮಾತನಾಡಿ, ಬಸವಣ್ಣನವರು ವಿಶ್ವದ ಪ್ರಥಮ ಸಂಸತ್ತು ಎಂದೆನಿಸಿಕೊಳ್ಳುವ ’ಅನುಭವ ಮಂಟಪ’ವನ್ನು ಸ್ಥಾಪಿಸಿ, ಎಲ್ಲಾ ಧರ್ಮ, ಜಾತಿ, ಜನಾಂಗದವರನ್ನು ಒಂದೆಡೆ ಸೇರಿಸಿ, ನಾವೆಲ್ಲರೂ ಒಂದೇ ಎಂಬ ಸಂದೇಶವನ್ನು ಸಾರಿದರು. ಅದರಲ್ಲಿ ಅಪ್ಪಣ್ಣ ಶರಣರು ’ಬಸವಪ್ರಿಯ ಕೂಡಲ ಚೆನ್ನಬಸವಣ್ಣ’ ಎಂಬ ಅಂಕಿತನಾಮದೊಂದಿಗೆ ರಚಿಸಿದ ೨೪೩ ವಚನಗಳು ಲಭ್ಯವಾಗಿದ್ದು, ತಮ್ಮ ವಚನಗಳ ಮೂಲಕ ಸಮಾಜದಲ್ಲಿ ತುಂಬಿರುವ ಮೂಢ ನಂಬಿಕೆ, ಕಂದಾಚಾರ, ಅಂದಶೃದ್ದೆ, ಸಾಮಾಜಿಕ ಪಿಡುಗುಗಳನ್ನು ಖಂಡಿಸಿದ್ದಾರೆ. ಅವರ ವಚನಗಳು ಸಮಾಜಕ್ಕೆ ದಾರಿದೀಪವಾಗಿವೆ ಎಂದರು.
ಕಾಲೇಜಿನ ಉಪನ್ಯಾಸಕರಾದ ಚಂದ್ರಪ್ರಭ ಕಮಲಾಪೂರಕರ್, ರವೀಂದ್ರಕುಮಾರ ಬಟಗೇರಿ, ನಯಿಮಾ ನಾಹಿದ್, ಮಂಜುನಾಥ ಎ.ಎಂ., ಶಂಕ್ರೆಪ್ಪ ಹೊಸದೊಡ್ಡಿ, ಪ್ರಕಾಶ ಪಾಟೀಲ, ರೇಣುಕಾ ಚಿಕ್ಕಮೇಟಿ, ಪ್ರ.ದ.ಸ ನೇಸರ ಎಂ.ಬೀಳಗಿ, ನಿಯೋಜಿತ ಉಪನ್ಯಾಸಕರಾದ ಯಶವಂತ ಗಾಣಿಗೇರ್, ಜಮೀಲ್ ಅಹಮ್ಮದ್, ಅತಿಥಿ ಉಪನ್ಯಾಸಕ ರಂಜಿತಾ ಠಾಕೂರ್, ಸೇವಕ ಭಾಗಣ್ಣ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…