ಸುರಪುರ: ನಗರದ ಜನನಿ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರಿಗೆ ಜೀವನ ಕೌಶಲ್ಯ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮಕ್ಕೆ ತರಬೇತಿ ನೀಡಲು ಆಗಮಿಸಿದ್ದ ಬೆಂಗಳೂರಿನ ರಾಷ್ಟ್ರೀಯ ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ನ ಡಾ.ಹರೀಶ್ ಮಾತನಾಡಿ, ವಿದ್ಯಾರ್ಥಿನಿಯರು ಶೈಕ್ಷಣಿಕ ಪ್ರಗತಿಯನ್ನು ಸಾಧಿಸಲು ಮತ್ತು ಒತ್ತಡ ರಹಿತ ಜೀವನವನ್ನು ಸಾಗಿಸಬೇಕಾದರೆ ಅವರು ಮಾನಸಿಕವಾಗಿ ಸದೃಢವಾಗಿರಬೇಕು ಅಂದಾಗಮಾತ್ರ ಬದುಕಿನಲ್ಲಿ ಎದುರಾಗಬಹುದಾದ ಪ್ರತಿಯೊಂದು ಸವಾಲುಗಳನ್ನು ಅತ್ಯಂತ ಆತ್ಮವಿಶ್ವಾಸದಿಂದ ಎದುರಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತನಾಡಿದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಮಲ್ಲಿಕಾರ್ಜುನ ಕಮತಗಿ, ಬದುಕೆ ಒಂದು ಕೌಶಲ್ಯ ಅದನ್ನು ಅರ್ಥಪೂರ್ಣವಾಗಿ ಸಾಗಿಸಿದಾಗ ಮಾತ್ರ ಮಾನವನ ಬದುಕಿಗೊಂದು ಬೆಲೆ ಆದ್ದರಿಂದ ತಮ್ಮಲ್ಲಿ ಅಡಗಿರುವ ಕೌಶಲ್ಯಗಳನ್ನು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಹೊರಹಾಕಿ ಧನಾತ್ಮಕ ಜೀವನವನ್ನು ಸಾಗಿಸಬೇಕು ಎಂದರು.
ಯಾದಗಿರಿಯ ಯುವ ಸ್ಪಂದನದ ಯುವ ಸಮಾಲೋಚಕರಾದ ರಮೇಶ ಹಾಗೂ ಯಂಕೋಬ ರವರು ಪಾಲ್ಗೊಂಡು ವಿದ್ಯಾರ್ಥಿನಿಯರಿಗೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿ ಅವರಲ್ಲಿರುವ ಹಲವು ಕೌಶಲ್ಯಗಳನ್ನು ತಿಳಿಸಿಕೊಟ್ಟರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ವೆಂಕಟೇಶ ಜಾಲಗಾರ ವಹಿಸಿಕೊಂಡಿದ್ದರು. ಉಪನ್ಯಾಸಕರಾದ ಸುವರ್ಣಾ ಅಂಟೋಳಿ, ಮರೆಮ್ಮ ಕಟ್ಟಿಮನಿ, ಬಸವರಾಜೇಶ್ವರಿ, ಬೀರೇಶ ದೇವತ್ಕಲ್, ಚಂದ್ರಶೇಖರ್ ನಾಯಕ್, ಮಹೇಶ ಗಂಜಿ, ಶಿವು ಕ್ವಾಟಿ ಹಾಗು ಅನೇಕ ಜನ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…