ಕಲಬುರಗಿ: ನಗರದ ಶರಣಬಸವ ವಿಶ್ವವಿದ್ಯಾಲಯದ ದ್ವಿತೀಯ ಸಂಸ್ಥಾಪನ ದಿನಾಚರಣೆಯನ್ನು ಶತಮಾನೋತ್ಸವ ಸಭಾಂಗಣದಲ್ಲಿ (ಸೆಂಟನೇರಿ ಹಾಲ್)ದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದೆ.
ಕಲಬುರಗಿ ಲೋಕಸಭಾ ಮತಕ್ಷೇತ್ರದಿಂದ ನೂತನವಾಗಿ ಆಯ್ಕೆಯಾದ ಸಂಸದ ಡಾ.ಉಮೇಶ ಜಾಧವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಯಾದ ಪರಮ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ ಎಂದು ಶನಿವಾರ ಕುಲಸಚಿವ ಡಾ. ಅನೀಲಕುಮಾರ ಬಿಡವೆ ತಿಳಿಸಿದ್ದಾರೆ.
ಹೈದಾರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಭೀಮಾಶಂಕರ ಬಿಲಗುಂದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವಿವಿಧ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಮತ್ತು ಗಣ್ಯರಿಂದ ಸನ್ಮಾನಿಸಲಾಗುವುದು.
ಈ ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಮಾತೋಶ್ರೀ ದಾಕ್ಷಾಯಿಣಿ ಅವ್ವಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ್ ನಿಷ್ಠಿ, ಸಮ ಕುಲಪತಿ ಪ್ರೊ.ವಿ.ಡಿ.ಮೈತ್ರಿ, ಸಮ ಕುಲಪತಿ ಎನ್.ಎಸ್.ದೇವರಕಲ್, ವಿವಿ ಕುಲಸಚಿವ ಡಾ. ಅನೀಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ, ಡೀನ್ ಡಾ. ಲಕ್ಷ್ಮಿ ಪಾಟೀಲ ಹಾಗೂ ವಿಶ್ವವಿದ್ಯಾಲಯದ ವಿವಿಧ ವಿಭಾಗದ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ಕುಲಸಚಿವ ಡಾ. ಅನೀಲಕುಮಾರ ಬಿಡವೆ ತಿಳಿಸಿದ್ದಾರೆ.