ಬಿಸಿ ಬಿಸಿ ಸುದ್ದಿ

ಡೈರಿ ಉತ್ಪನ್ನ ತೆರಿಗೆ ಹೆಚ್ಚಳ: ಎಸ್‌ಯುಸಿಐ ಖಂಡನೆ

ವಾಡಿ: ಹಾಲು ಉತ್ಪನ್ನಗಳ ಮೇಲೆ ಕೇಂದ್ರ ಜಿಎಸ್‌ಟಿ ಮಂಡಳಿ ಶೇ.೫ ರಷ್ಟು ತೆರಿಗೆ ವಿಧಿಸಿದ ಕ್ರಮವನ್ನು ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷ ಖಂಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಎಸ್‌ಯುಸಿಐ (ಸಿ) ಪಕ್ಷದ ನಗರ ಸಮಿತಿ ಕಾರ್ಯದರ್ಶಿ ಕಾಮ್ರೇಡ್ ವೀರಭದ್ರಪ್ಪ ಆರ್.ಕೆ, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ನಿಯಂತ್ರಣ ಹಾಕದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ಕಿ, ಜೋಳ, ರಾಗಿ ಸೇರಿದಂತೆ ಇತರ ಆಹಾರ ಧಾನ್ಯಗಳ ಮೇಲೆ ತೆರಿಗೆ ವಿಧಿಸುವ ಜತೆಗೆ ಮೊಸರಿನಂತಹ ಡೈರಿ ಉತ್ಪನ್ನಗಳ ಮೇಲೆ ಜಿಎಸ್‌ಟಿ ಹೊಡೆತ ಬಿದ್ದಿದೆ. ಹಣದುಬ್ಬರದಿಂದ ಜನತೆ ತತ್ತರಿಸಿದ್ದಾರೆ. ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಬೆಲೆ ಏರಿಕೆಯ ಪ್ರಮಾಣದಲ್ಲಿ ಜನಸಾಮಾನ್ಯರ ಆದಾಯ ಹೆಚ್ಚಳವಾಗಿಲ್ಲ. ಈಗ ತಿನ್ನುವ ಅನ್ನದ ಮೇಲೂ ತೆರಿಗೆ ವಿಧಿಸುವ ಮೂಲಕ ಕ್ರೂರ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ದೂರಿದ್ದಾರೆ.

ಹೆಚ್ಚಿಸಲಾದ ತೆರಿಗೆ ಆದಾಯ ಜು.೧೮ ರಿಂದ ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. ಇದರಿಂದ ಕಿಲೋ ಅಕ್ಕಿಗೆ ರೂ.೩ ರಿಂದ ೪ಕ್ಕೆ ಏರಿಕೆಯಾಗಲಿದೆ. ಪ್ರತಿ ಲೀಟರ್ ಮೊಸರಿಗೆ ರೂ.೨ ರಿಂದ ರೂ.೩ಕ್ಕೆ ಏರಿಕೆಯಾಗಲಿದೆ. ಇದರಿಂದ ರೈತರು ಮತ್ತು ಗ್ರಾಹಕರು ತೊಂದರೆ ಅನುಭವಿಸಬೇಕಾಗುತ್ತದೆ. ಆಹಾರ ಪದಾರ್ಥಗಳ ವ್ಯಾಪಾರದಲ್ಲೂ ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲ ಮಾಡುವುದಕ್ಕಾಗಿ ಈ ತೀರ್ಮಾನ ಕೈಗೊಂಡು ಜನರಿಗೆ ದ್ರೋಹ ಬಗೆಯಲಾಗಿದೆ ಎಂದು ನೇರವಾಗಿ ಆಪಾದಿಸಿರುವ ಕಾಮ್ರೇಡ್ ವೀರಭದ್ರಪ್ಪ, ಜೀವನಾವಶ್ಯಕ ವಸ್ತುಗಳ ಮೇಲಿನ ಈ ತೆರಿಗೆಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

emedialine

Recent Posts

ನಾಡೋಜ ಪಾಟೀಲ್ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರದಾನ: ಜುಲೈ 7ರಂದು

ಬೆಂಗಳೂರು: ಜಗತ್ತಿನ ಪ್ರಚಲಿತ ವಿದ್ಯಮಾನಗಳ ಮಾಹಿತಿ ನೀಡುವ ಪತ್ರಕರ್ತರು ಹಗಲುರಾತ್ರಿ ಎನ್ನದೇ ಕಷ್ಟವಾದರೂ ಇಷ್ಟಪಟ್ಟು ವರದಿ ಮಾಡುವ ಮಾಧ್ಯಮ ಮಿತ್ರರಿಗೆ,…

16 mins ago

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

11 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

11 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

11 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

11 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

12 hours ago