ಬಿಸಿ ಬಿಸಿ ಸುದ್ದಿ

ಆಗಸ್ಟ್ 13 ರಂದು ರಾಷ್ಟ್ರೀಯ ಲೋಕ ಅದಾಲತ್

ಕಲಬುರಗಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ರಾಷ್ಟ್ರಮಟ್ಟಕ್ಕೆ ಸಂಬಂಧಿಸಿದಂತೆ “ರಾಷ್ಟ್ರೀಯ ಲೋಕ ಅದಾಲತ್”ನ್ನು 2022ರ ಆಗಸ್ಟ್ 13 ರಂದು ಏರ್ಪಡಿಸಲಾಗಿದೆ ಎಂದು ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೃಷ್ಣಾಜೀ ಬಾಬುರಾವ ಪಾಟೀಲ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸುಶಾಂತ್ ಎಮ್. ಚೌಗಲೆ ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕಲಬುರಗಿ ಮತ್ತು ಕಲಬುರಗಿ ಜಿಲ್ಲೆಗೆ ಒಳಪಟ್ಟ ಎಲ್ಲಾ ತಾಲೂಕು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥವಾಗುವಂತಹ ಪ್ರಕರಣಗಳನ್ನು ಪ್ರತಿದಿನ ನಡೆಸುತ್ತಿರುವ ಲೋಕ ಅದಾಲತ್ / ಖಾಯಂ ಜನತಾ ನ್ಯಾಯಾಲಯಗಳಲ್ಲಿ ಎಲ್ಲಾ ಕಕ್ಷಿದಾರರು, ಸಾರ್ವಜನಿಕರು ಹಾಗೂ ಸಂಬಂಧಪಟ್ಟವರು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಿಕೊಳ್ಳಬಹುದಾಗಿದೆ.

ಕಲಬುರಗಿ ಜಿಲ್ಲಾ ನ್ಯಾಯಾಲಯಗಳಲ್ಲಿ ಹೆಚ್ಚಿನ ಪ್ರಕಣಗಳು ಬಾಕಿ ಇದ್ದು, ಸದರಿ ಜಿಲ್ಲೆಯಲ್ಲಿ ಗರಿಷ್ಠ ಪ್ರಮಾಣದ ಪ್ರಕರಣಗಳು ರಾಜಿ ಸಂಧಾನ ಮಾಡುವುದರ ಮೂಲಕ ಇತ್ಯರ್ಥಪಡಿಸುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವ ಉಭಯ ಪಕ್ಷಗಾರರಿಗೆ ಈ ಕೆಳಕಂಡಂತೆ ಲಾಭವನ್ನು ದೊರೆಯಲಿದೆ.

ಜನತಾ ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜಿ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುತ್ತದೆ. ಜನತಾ ನ್ಯಾಯಾಲಯದಲ್ಲಿ ಕೊಡುವ ತೀರ್ಪು ನ್ಯಾಯಾಲಯದಲ್ಲಿ ಕೊಡುವ ತೀರ್ಪಿನಷ್ಟು ಪರಿಣಾಮಕಾರಿಯಾಗಿರುತ್ತದೆ. ಯಾವುದೇ ಮೇಲ್ಮನವಿ ಅಥವಾ ಖರ್ಚು ವೆಚ್ಚ ಇರುವುದಿಲ್ಲ. ತಮ್ಮ ವ್ಯಾಜ್ಯವನ್ನು ಜನತಾ ನ್ಯಾಯಾಲಯದ ಮೂಲಕ ಕಡಿಮೆ ಖರ್ಚಿನಲ್ಲಿ ಮತ್ತು ಶೀಘ್ರವಾಗಿ ಇತ್ಯರ್ಥಗೊಳಿಸಿಕೊಳ್ಳಬಹುದಾಗಿದೆ.

ಜನತಾ ನ್ಯಾಯಾಲಯದಲ್ಲಿ ತಾವು ವಕೀಲರ ಮುಖಾಂತರ ಅಥವಾ ತಾವೇ ನೇರವಾಗಿ ಭಾಗವಹಿಸಬಹುದು. ಸೌಹಾರ್ಧಯುತವಾಗಿ ಪ್ರಕರಣ ಇತ್ಯರ್ಥಗೊಳ್ಳುವುದರಿಂದ ಉತ್ತಮ ಬಾಂಧವ್ಯ ಉಳಿಯುವುದರ ಜೊತೆಗೆ ನೆಮ್ಮದಿಯು ಸಹ ಉಳಿಯುವುದು. ಜನತಾ ನ್ಯಾಯಾಲಯದಲ್ಲಿ ಎಲ್ಲ ರೀತಿಯ ವ್ಯಾಜ್ಯಪೂರ್ವ ಪ್ರಕರಣಗಳನ್ನು ಪ್ರತಿ ನಿತ್ಯ ನಡೆಯುತ್ತಿರುವ ಜನತಾ ನ್ಯಾಯಾಲಯದಲ್ಲಿ ಸಂಧಾನದ ಮುಖೇನ ಇತ್ಯರ್ಥಪಡಿಸಿಕೊಳ್ಳಲು ಅತ್ಯುತ್ತಮ ಅವಕಾಶವಿದೆ.

ರಾಜಿ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯದ ಶುಲ್ಕವನ್ನು ಪೂರ್ಣವಾಗಿ ಹಿಂದಿರುಗಿಸಲಾಗುವುದು. ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡ ಪ್ರಕರಣಗಳಿಗೆ ಮೇಲ್ಮನವಿಯ ಅವಕಾಶವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಅಥವಾ ಜಿಲ್ಲೆಯ ಯಾವುದೇ ತಾಲೂಕು ಕಾನೂನು ಸೇವಾ ಸಮಿತಿಯನ್ನು ಹಾಗೂ ಅದೇ ರೀತಿ ಖಾಯಂ ಜನತಾ ನ್ಯಾಯಾಲಯ ಕಚೇರಿಯನ್ನು ಸಹ ಸಂಪರ್ಕಿಸಲು ಕೋರಲಾಗಿದೆ.

ಕಲಬುರಗಿ ಜಿಲ್ಲೆಯ ಹೆಚ್ಚಿನ ಕಕ್ಷಿದಾರರು ಮತ್ತು ಸಾರ್ವಜನಿಕರು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

6 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

8 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

15 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

15 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

16 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago