ಕಲಬುರಗಿ: ಚಿತ್ತಾಪುರ ತಾಲೂಕಿನ ದಂಡಗುಂಡ ಗ್ರಾಮದ ಬಸವಣ್ಣ ದೇವಸ್ಥಾನ ದೊಡ್ಡ ಗೋಡೆ ಮಳೆಗೆ ಕುಸಿದು ಬಿದ್ದಿದ್ದು ಪೂಜಾರಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪವಾಡ ರೀತಿಯಲ್ಲಿ ಪಾರಾದ ಘಟನೆ ಜರುಗಿದೆ.
ಬಸವಣ್ಣ ದೇವಸ್ಥಾನ ಹಿಂಬದಿ ತಡೆಗೋಡೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಘಟನೆಯಲ್ಲಿ ಅಣಿಕೇರಿ ಗ್ರಾಮದ ನಿವಾಸಿ ಬಸವಣ್ಣ ದೇವಸ್ಥಾನ ಅರ್ಚಕ ಬವಸರಾಜ ಹೂಗಾರ ಎನ್ನುವವರಿಗೆ ಗಾಯಗಳಾಗಿದ್ದು ಕಲಬುರಗಿ ಆಸ್ಪತ್ರೆಗೆ ಕೊಂಡಯ್ಯಲಾಗಿದ್ದು, ಅದೃಷ್ಟವಶಾತ್ ಯಾವುದೇ ಅಪಾಯಗಳು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.