ಕಲಬುರಗಿ: ಸರ್ಕಾರಿ ಯೋಜನೆಗಳು ನಮಗೆ ತಲುಪಲ್ಲ. ಕಚೇರಿಗಳಿಗೆ ಅಲೆದಾಡಬೇಕಾಗುತ್ತದೆ ಎಂಬಿತ್ಯಾದಿ ಆಲಸ್ಯತನ ಬಿಟ್ಟು ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲರಾಗಬೇಕು ಎಂದು ಡಿ.ಸಿ. ಯಶವಂತ ವಿ. ಗುರುಕರ್ ಕರೆ ನೀಡಿದರು.
ಶನಿವಾರ ಕಮಲಾಪೂರ ತಾಲೂಕಿನ ಮಹಾಗಾಂವ ಗ್ರಾಮದ ಹೈನುಗಾರಿಕೆ ವಿಜ್ಞಾನ ಮಹಾವಿದ್ಯಾಲಯದಲ್ಲಿ ಆಯೋಜಿಸಿದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಡವರ ಶ್ರೇಯೋಭಿವೃದ್ಧಿಗೆ ಸರ್ಕಾರ ಹತ್ತಾರು ಜನಪರ ಯೋಜನೆಗಳು ಜಾರಿಗೆ ತಂದಿದೆ. ಇದರ ಲಾಭ ಪಡೆಯಬೇಕು. ಇಂದಿಲ್ಲಿ ಸ್ವೀಕರಿಸಿದ ಅರ್ಜಿಗಳನ್ನು 15 ದಿನದಲ್ಲಿ ವಿಲೇವಾರಿ ಮಾಡಲಾಗುವುದು ಎಂದರು.
ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿದ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂ. ವರೆಗೆ ಉಚಿತವಾಗಿ ಚಿಕಿತ್ಸೆ ಒದಗಿಸುವ ಆಯುμÁ್ಮನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಜಾರಿಗೆ ತರಲಾಗಿದೆ. ಜಿಲ್ಲೆಯಲ್ಲಿ ಈ ಯೋಜನೆಯಡಿ ಶೇ.22ರಷ್ಟು ಜನ ಆರೋಗ್ಯ ಕಾರ್ಡ್ ಪಡೆದರೆ, ಕಮಲಾಪೂರ ತಾಲೂಕಿನಲ್ಲಿ ಕೇವಲ 23 ಸಾವಿರ ಜನ ಮಾತ್ರ ನೋಂದಣಿ ಮಾಡಿಕೊಂಡಿದ್ದಾರೆ. ಸ್ಥಳೀಯ ಗ್ರಾಮ ಒನ್ ಕೇಂದ್ರ, ಗ್ರಾ.ಪಂ.ಯಲ್ಲಿ 10 ರೂ. ಪಾವತಿಸಿ ಆರೋಗ್ಯ ಕಾರ್ಡ್ ಪಡೆದರೆ ಕಷ್ಟದ ಕಾಲದಲ್ಲಿ ಅದು ನೆರವಿಗೆ ಬರುತ್ತದೆ. ಗ್ರಾಮ ಒನ್ ಸೆಂಟರ್ನಲ್ಲಿ 700ಕ್ಕೂ ಹೆಚ್ಚು ಸೇವೆ ನೀಡುತ್ತಿದ್ದು, ಇನ್ಮುಂದೆ ತಾಲೂಕು, ಜಿಲ್ಲಾ ಸ್ಥಾನಕ್ಕೆ ಅರ್ಜಿ ಹಾಕಲು ಅಲಿಯಬೇಕಿಲ್ಲ. ಬಡವರು ಇಂತಹ ಯೋಜನೆಗಳ ಸೌಲಭ್ಯ ಪಡೆಯಬೇಕು. ತಾವು ಹಿಂದೆ ಏಳೆಂಟು ವರ್ಷ ಕುವೈತ್ ನಲ್ಲಿದಾಗ ಇದೇ ರೀತಿಯ ಅಲ್ಲಿ ಆರೋಗ್ಯ ಕಾರ್ಡ್ ಪಡೆದಿದ್ದೆ ಎಂದರು.
ಜಿಲ್ಲೆಯಲ್ಲಿ ಪಹಣಿ ತಿದ್ದುಪಡಿ, 11ಇ ನಕಾಶೆ ವಿತರಣೆ ಕೆಲಸಕ್ಕೆ ವೇಗ ನೀಡಿದೆ. ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ಹಲವಾರು ಸವಲತ್ತು ನೀಡುತ್ತಿದ್ದು, ಕಾರ್ಮಿಕ ವರ್ಗ ಇದನ್ನು ಪಡೆಯಬೇಕು. ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ ಯೋಜನೆಯಡಿ 18 ರಿಂದ 40 ವಯಸ್ಸಿನ ಇ.ಎಸ್.ಐ, ಪಿ.ಎಫ್ ಸೌಲಭ್ಯ ಇಲ್ಲದ ಅಸಂಘಟಿತ ಕಾರ್ಮಿಕರು ಮಾಸಿಕ 56 ರೂ. ರಿಂದ 200 ರೂ. ವರೆಗೆ ಪ್ರೀಮಿಯಂ ಮೊತ್ತ ಪಾವತಿಸಿದಲ್ಲಿ 60 ವರ್ಷ ನಂತರ 3000 ರೂ. ಪಿಂಚಣಿ ದೊರೆಯಲಿದೆ ಎಂದರು.
ಜಂಟಿ ಕೃಷಿ ನಿರ್ದೇಶಕ ಡಾ.ರತೇಂದ್ರನಾಥ ಸುಗೂರು, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ಸಿರಾಜ್ ಡಿ. ಅವಂಟಿ, ಡಿ.ಡಿ.ಎಲ್.ಆರ್. ಶಂಕರ, ಕಲಬುರಗಿ-ಯಾದಗಿರಿ ಡಿ.ಸಿ.ಸಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶರಣಬಸಪ್ಪ ಬೆಣ್ಣೂರಕರ್, ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ್ ಅವರು ತಮ್ಮ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಗಂಡ ತೀರಿಕೊಂಡು 3 ವರ್ಷವಾಯಿತು, ಪರಿಹಾರ ಸಿಕ್ಕಿಲ್ಲ: ಗ್ರಾಮಸ್ಥರ ಅಹವಾಲು ಸ್ವೀಕಾರ ಸಂದರ್ಭದಲ್ಲಿ ಮಹಾಗಾಂವ ಕ್ರಾಸ್ ನಿವಾಸಿಯಾಗಿರುವ ವಿಧವೆ ಶಾಂತಾಬಾಯಿ ದಿ. ನಾಗಪ್ಪ ನೀರ್ ಅವರು ಬಂದು, ಮನೆಯ ಮೇಲಿನ ವಿದ್ಯುತ್ ತಗುಲಿ ಗಂಡ ತೀರಿ ಮೂರು ವರ್ಷಗಳಾಗಿವೆ. ಶಾಸಕರಿಗೂ ಹಲವಾರು ಬಾರಿ ಮನವಿ ಮಾಡಿದ್ದೇನೆ, ಆದರೆ ನನಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ನೀವಾದರೂ ನನಗೆ ಪರಿಹಾರ ಕೊಡಿಸಿ ಎಂದು ಡಿ.ಸಿ ಬಳಿ ತನ್ನ ಅಳಲು ತೋಡಿಕೊಂಡಳು. ಇದಕ್ಕೆ ಸ್ಪಂದಿಸಿದ ಡಿ.ಸಿ. ಅವರು ಕೂಡಲೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ತಹಶೀಲ್ದಾರ ಸುರೇಶ ವರ್ಮಾ ಅವರಿಗೆ ಸೂಚಿಸಿದರು. ತ್ರಿಚಕ್ರ ವಾಹನ ಒದಗಿಸುವಂತೆ ಬಬಲಾದ ಗ್ರಾಮದ ವಿಕಲಚೇತನ ಯುವತಿ ಪವಿತ್ರಾ ಅವರು ಡಿ.ಸಿ.ಗೆ ಮನವಿ ನೀಡಿದರು.
18 ಲಕ್ಷ ರೂ. ಸಹಾಯಧನ ವಿತರಣೆ: ಡಿ.ಸಿ.ಸಿ ಬ್ಯಾಂಕಿನಿಂದ ಸ್ತ್ರೀ ಶಕ್ತಿ ಗುಂಪುಗಳಿಗೆ ತಲಾ 2 ಲಕ್ಷ ರೂ. ಗಳಂತೆ ಶ್ರೀ ಮಲ್ಲಿಕಾರ್ಜುನ ಮಹಿಳಾ ಸ್ವ-ಸಹಾಯ ಗುಂಪು, ಭಾಗ್ಯವಂತಿ ಮಹಿಳಾ ಸ್ವ-ಸಹಾಯ ಗುಂಪು, ಮಾತೋಶ್ರೀ ಕಲ್ಯಾಣಮ್ಮ ಸ್ವ-ಸಹಾಯ ಗುಂಪು ಸೇರಿದಂತೆ ಒಟ್ಟು 9 ಸಂಘಗಳಿಗೆ 18 ಲಕ್ಷ ರೂ. ಸಹಾಯಧನದ ಚೆಕ್ಗಳನ್ನು ಡಿ.ಸಿ. ಯಶವಂತ ವಿ. ಗುರುಕರ್ ಅವರು ವಿತರಿಸಿದರು. ಇದಲ್ಲದೆ ಕೃಷಿ ಇಲಾಖೆಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಮಹಾಗಾಂವ ಗ್ರಾಮದ ಸುಭದ್ರಬಾಯಿ ಗಂಡ ಸುಭಾಶ್ಚಂದ್ರ ಮತ್ತು ಮಲ್ಲಮ್ಮ ಗಂಡ ಪ್ರಭುದೇವ, ಬೆಳಕೋಟಾ ಗ್ರಾಮದ ಶಿವಲಿಂಗ ಶ್ರೀಮಂತ, ಯಂಕಂಚಿ ಗ್ರಾಮದ ಹಸೀನಾಬಿ, ನಾವದಗಿ(ಬಿ) ಗ್ರಾಮದ ಕರಣ ತಂ. ಅಮೃತ ಅವರಿಗೆ 22,000 ರೂ. ಮೊತ್ತದ ಸ್ಪ್ರಿಂಕ್ಲರ್ ಸೆಟ್ಗೆ 19,930 ರೂ. ಸರ್ಕಾರದ ಸಬ್ಸಿಡಿ ಮಂಜೂರಾತಿಯ ಕಾರ್ಯಾದೇಶ ನೀಡಲಾಯಿತು. ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರ ಮಕ್ಕಳು ಮದುವೆ ಮಾಡಿಕೊಂಡಿದ್ದರಿಂದ ಚಂದ್ರನಗರ ಗ್ರಾಮದ ಲಕ್ಷ್ಮೀಬಾಯಿ ಮತ್ತು ಮಹಾಗಾಂವ ಗ್ರಾಮದ ಜಗದೇವಿ ಅವರಿಗೆ ತಲಾ 50 ಸಾವಿರ ರೂ. ಸಹಾಯಧನ ಮಂಜೂರಾತಿ ಪತ್ರ ಮತ್ತು 40 ಜನರಿಗೆ ಇ-ಶ್ರಮ್ ಕಾರ್ಡ್ ನೀಡಲಾಯಿತು. ಪಶು ಸಂಗೋಪನೆ ಇಲಾಖೆಯಿಂದ ಕುರಿ-ಮೇಕೆಗೆ ವಿಮೆ ಮಾಡಿಸಿದವರಿಗೆ ವಿಮೆ ಪತ್ರ ನೀಡಲಾಯಿತು. ಆರೋಗ್ಯ ಇಲಾಖೆಯಿಂದ ಆಯೋಜಿಸಿದ ಆರೋಗ್ಯ ಶಿಬಿರದಲ್ಲಿ ವೈದ್ಯ ಡಾ.ಶಿವರಾಜ ನೇತೃತ್ವದ ತಂಡ ಸುಮಾರು 60 ಜನರಿಗೆ ಅಧಿಕ ರಕ್ತದೊತ್ತಡ, ಮಧುಮೇಹ ತಪಾಸಣೆ ಮಾಡಿತು.
396 ಅರ್ಜಿ ಸ್ವೀಕಾರ, 244 ವಿಲೇವಾರಿ: ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದ ಒಟ್ಟಾರೆ 396 ಅರ್ಜಿ ಸಲ್ಲಿಕೆಯಾಗಿದ್ದು, ಸ್ಥಳದಲ್ಲಿಯೇ 244 ಅರ್ಜಿಗಳು ವಿಲೇವಾರಿ ಮಾಡಲಾಗಿದೆ. ಉಳಿದ 152 ಅರ್ಜಿಗಳ ವಿಲೇವಾರಿಗೆ ಸಂಬಂಧಪಟ್ಟ ಇಲಾಖೆಗೆ ರವಾನಿಸಲಾಗಿದೆ.
ಇದೇ ಸಂದರ್ಭದಲ್ಲಿ ವಿಜ್ಞಾನ ಪ್ರಾಯೋಗಿಕ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದ ಇನ್ಸ್ಪೈರ್ ಅವಾರ್ಡ್ ಪಡೆದ ತಾಲೂಕಿನ ಭೂಸಣಗಿ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರಾದ ತನುಜಾ, ಪೂಜಾ ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲೂಕಿಗೆ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಕೇಂದ್ರ, ಪಡಿತರ ಚೀಟಿ ವಿತರಣಾ ಕೇಂದ್ರ, ಪಹಣಿ ತಿದ್ದುಪಡಿ ಕೇಂದ್ರ, ಕಾರ್ಮಿಕ ಕಾರ್ಡ್ ನೋಂದಣಿ ಕೇಂದ್ರ ತೆಗೆಯಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಮಾಜಿ ಅಧ್ಯಕ್ಷ ಶಿವಪ್ರಭು ಪಾಟೀಲ, ಮಹಾಗಾಂವ ಗ್ರಾಮ ಪಂಚಾಯತಿ ಅಧ್ಯಕ್ಷೆ ಮನಿμÁ ನಂದಕುಮಾರ ಹರಸೂರ, ಸಹಾಯಕ ಅಯುಕ್ತೆ ಮೋನಾ ರೋಟ್, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶಾಂತಗೌಡ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂ.ಎಸ್.ಅಲ್ಲಾಭಕμï, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನವೀನ್ ಯು., ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ್, ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ ಕುಲಸಚಿವ ಡಾ.ಬಿ.ವಿ.ಶಿವಪ್ರಕಾಶ, ಮಹಾಗಾಂವ ಹೈನುಗಾರಿಕೆ ಮಹಾವಿದ್ಯಾಲಯದ ಮಂಜುನಾಥ, ರಾಮಪ್ಪ ಹೆಚ್.ಕೆ, ಗ್ರೇಡ್ 2 ತಹಶೀಲ್ದಾರ ಗಂಗಾಧರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು. ತಹಶೀಲ್ದಾರ ಸುರೇಶ ವರ್ಮಾ ಸ್ವಾಗತಿಸಿದರು.
ಇದಕ್ಕೂ ಮುನ್ನ ಗ್ರಾಮಸ್ಥರ ಅಹವಾಲು ಆಲಿಸಲು ಗ್ರಾಮಕ್ಕೆ ಆಗಮಿಸಿದ ಡಿ.ಸಿ. ಯಶವಂತ ವಿ. ಗುರುಕರ್ ಅವರಿಗೆ ಗ್ರಾಮಸ್ಥರು ಮತ್ತು ನೂರಾರು ಸಂಖ್ಯೆಯಲ್ಲಿ ಶಾಲಾ ಮಕ್ಕಳು ಸಂಭ್ರಮದ ಸ್ವಾಗತ ಕೋರಿದರು. ಮಹಿಳೆಯರು ಕುಂಭ ಕಳಸದೊಂದಿಗೆ ಡಿ.ಸಿ. ಅವರಿಗೆ ಆರತಿ ಬೆಳಗಿ ಸಾಂಪ್ರದಾಯಿಕವಾಗಿ ಬರಮಾಡಿಕೊಂಡರು. ತದನಂತರ ಡಿ.ಸಿ. ಯಶವಂತ ವಿ. ಗುರುಕರ್ ಮತ್ತು ತಹಶೀಲ್ದಾರ ಸುರೇಶ ವರ್ಮಾ ಅವರನ್ನು ಎತ್ತಿನ ಚಕಡಿಯಲ್ಲಿ ಕೂರಿಸಿ ಮಹಾಗಾಂವ ಕ್ರಾಸ್ ನಿಂದ ಮೆರವಣಿಗೆ ಮೂಲಕ ವೇದಿಕೆ ಸ್ಥಳಕ್ಕೆ ಕರೆತರಲಾಯಿತು. ಡೊಳ್ಳು, ಹಲಗೆ ವಾದನ, ಲಂಬಾಣಿ ಮಹಿಳೆಯರ ನೃತ್ಯ, ಶಾಲಾ ಮಕ್ಕಳ ಲೇಜಿಮ್ ನೃತ್ಯ ಮೆರವಣಿಗೆಗೆ ಕಳೆ ತಂದಿತು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…