ಕಲಬುರಗಿ: ಕಳೆದ ವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅದ್ದೂರಿಯ ಚಾಲನೆ ಕಂಡ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20ಯಲ್ಲಿ ಸ್ಪರ್ಧಿಸಲಿರುವ ಗುಲ್ಬರ್ಗವು ತನ್ನದೇ ಆದ ತಂಡವನ್ನು ಹೊಂದಲಿದೆ ಎ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಗೌರವ ಉಪಾಧ್ಯಕ್ಷ ಜೆ. ಅಭಿರಾಮ್ ತಿಳಿಸಿದರು.
ನಗರದ ಕೈರಿಯಾಡ್ ಹೊಟೇಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡದಿದ ಅವರು ಮೈಸೂರಿನ ಮಹಾರಾಜರು ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಘನತೆವೆತ್ತ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸ್ಮರಣಾರ್ಥ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಪ್ರತಿಷ್ಠಿತ ಟೂರ್ನಿಯನ್ನು ಆಯೋಜಿಸಿದೆ. ಟೂರ್ನಿಯು ಆಗಸ್ಟ್ 7 ರಂದು ಆರಂಭಗೊಂಡು ಆಗಸ್ಟ್ 22ರವರೆಗೆ ನಡೆಯಲಿದ್ದು, “ಯುವ ಕ್ರಿಕೆಟಿಗರಿಗೆ ತಮ್ಮ ಪ್ರತಿಭೆಯನ್ನು ಪ್ರಕಟಿಸಲು ಅವಕಾಶ ನೀಡುವಲ್ಲಿ ಕೆಎಸ್‌ಸಿಎ ಯಾವಾಗಲೂ ಮೊದಲ ಆದ್ಯತೆಯನ್ನು ನೀಡುತ್ತದೆ. ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20ಯಲ್ಲಿ ಶಿವಮೊಗ್ಗ ಜಿಲ್ಲೆಯು ತನ್ನದೇ ಆದ ತಂಡವನ್ನು ಹೊಂದಲಿದೆ ಎಂಬುದನ್ನು ಪ್ರಕಟಿಸಲು ನನಗೆ ಅತೀವ ಸಂತಸವಾಗುತ್ತದೆ, ಈ ಮೂಲಕ ಈ ವಲಯದ ಆಟಗಾರರಿಗೆ ನೇರಪ್ರಸಾರ ಗೊಳ್ಳುವ ಪ್ರತಿಷ್ಠಿತ ಟೂರ್ನಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿದಂತಾಗಿದೆ,” ಎಂದರು.
ಟೂರ್ನಿಯಲ್ಲಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ರಾಯಚೂರು ಮತ್ತು ಮಂಗಳೂರು ಸೇರಿದಂತೆ ಒಟ್ಟು ಆರು ತಂಡಗಳು ಪ್ರತಿಷ್ಠಿತ ಟ್ರೋಫಿಗಾಗಿ ಹೋರಾಟ ನಡೆಸಲಿವೆ. ಮಹಾರಾಜ ಟ್ರೋಫಿ ಟಿ20 ಟೂರ್ನಿಯು ಆಗಸ್ಟ್7 ರಂದು ಮೈಸೂರಿನಲ್ಲಿ ಆರಂಭಗೊಳ್ಳಲಿದೆ. ಮೊದಲ ಹಂತದ ಪಂದ್ಯಗಳು ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅಂಗಣದಲ್ಲಿ ನಡೆಯಲಿದೆ. ಮೈಸೂರಿನಲ್ಲಿ ಒಟ್ಟು 18 ಪಂದ್ಯಗಳು ನಡೆಯಲಿದ್ದು, ಫೈನಲ್ ಸೇರಿಂದತೆ 16 ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.
“ಪ್ರತಿಯೊಂದು ತಂಡವು ಆಯಾ ಪ್ರದೇಶದ ಇಬ್ಬರು ಆಟಗಾರರನ್ನು ಒಳಗೊಂಡಿರಬೇಕಾಗಿರುವುದರಿಂದ ಗುಲ್ಬರ್ಗದ ಆಟಗಾರರಿಗೆ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಇಲ್ಲಿಯ ತಂಡದಲ್ಲಿ ಸ್ಥಾನ ಪಡೆಯುಲು ಉತ್ತಮ ಅವಕಾಶ,” ಎಂದು ರಾಯಚೂರು ವಲಯದ ಸಮನ್ವಯಕಾರ ಸುಧೀಂದ್ರ ಶಿಂಧೆ ಹೇಳಿದರು.
ಎರಡು ವಾರಗಳ ಕಾಲ ನಡೆಯುವ ಟೂರ್ನಿಯ ಪ್ರತಿಯೊಂದು ಪಂದ್ಯವು ಸ್ಟಾರ್ ಸ್ಪೋರ್ಟ್ಸ್2 ಮತ್ತು ಸ್ಟಾರ್ ಸ್ಪೋರ್ಟ್ಸ್ ಕನ್ನಡದಲ್ಲಿ ನೇರ ಪ್ರಸಾರವಾಗೊಳ್ಳಲಿದೆ. ಫ್ಯಾನ್‌ಕೋಡ್ ಆಪ್‌ನಲ್ಲಿಯೂ ನೇರಪ್ರಸಾರವಾಗಲಿದೆ. ಸೈಕಲ್ ಅಗರ್‌ಬತ್ತಿಸ್, ಕಲ್ಯಾಣಿ ಮೋಟಾರ್ಸ್, ಜಿಂದಾಲ್ ಸ್ಟೀಲ್ಸ್, ಫಿಜಾ ಡೆವಲಪ್ಪರ್ಸ್ ಮತ್ತು ಇನ್‌ಫ್ರಾಸ್ಟ್ರಕ್ಚರ್ಸ್ ಪ್ರೈ. ಲಿ., ಗುಲ್ಬರ್ಗಾ ಮೆಗಾಸ್ಪೀಡ್ ಮತ್ತು ಮೈಕಾನ್ ಎಂಜಿನಿಯರ್ಸ್ (ಹುಬ್ಬಳ್ಳಿ) ಇವರು ಅನುಕ್ರಮವಾಗಿ, ಮೈಸೂರು, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ಮತ್ತು ರಾಯಚೂರು ತಂಡಗಳ ಪ್ರಾಯೋಜಕರಾಗಿರುತ್ತಾರೆ.
ಗುಲ್ಬರ್ಗ ಮೆಗಾಸ್ಪೀಡ್ ತನ್ನ ಪ್ರಾಯೋಜಕರು ಮತ್ತು ಸಹಾಯಕರನ್ನು ಪ್ರಕಟಿಸಲು ಉತ್ಸುಕರಾಗಿದ್ದಾರೆ. ಸಯ್ಯದ್ ಮೊಹಮ್ಮದ್ ಆಲಿ ಅಲ್ ಹುಸೈನಿ ಈ ಸಂದರ್ಭದಲ್ಲಿ ಮಾತನಾಡಿ, ಮಹಾರಾಜ ಟ್ರೋಪಿ ಕೆಎಸ್‌ಸಿಎ ಟಿ20ಯಲ್ಲಿ ಸ್ಪರ್ಧಿಸುತ್ತಿರುವ ಗುಲ್ಬರ್ಗ ತಂಡಕ್ಕೆ ಪ್ರಾಯೋಜಕತ್ವ ನೀಡುತ್ತಿರುವುದು ನಿಜವಾಗಿಯೂ ಹೆಮ್ಮೆಯ ಸಂಗತಿ, ಗುಲ್ವರ್ಗದಲ್ಲಿ ಕ್ರಿಕೆಟ್‌ನ ಹಂತವನ್ನು ಉತ್ತಮಪಡಿಸಲು ನಾವು ನೆರವಾಗಲು ಆಶಿಸುತ್ತೇವೆ. ಯುವ ಕ್ರಿಕೆಟಿಗರಿಗೆ ಮಿಂಚುವ ಸಲುವಾಗಿ ವೇದಿಕೆಯನ್ನು ಕಲ್ಪಿಸಲು ನಾವು ಎಲ್ಲ ರೀತಿಯ ನೆರವನ್ನು ನೀಡಲಿದ್ದೇವೆ,” ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿರುವ ಮಹಾರಾಜ ಟ್ರೋಫಿಯನ್ನು ಪ್ರದರ್ಶನ ಮಾಡಲಾಯಿತು. ಕೆಎಸ್‌ಸಿಎ ಅಧ್ಯಕ್ಷರು, ವಿಶ್ವಕಪ್ ವಿಜೇತ ತಂಡದ ಆಟಗಾರ ರೋಜರ್ ಬಿನ್ನಿ ಅವರು ಕಳೆದ ವಾರ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರೋಫಿಯನ್ನು ಅನಾವರಣಗೊಳಿಸಿದ್ದರು. ಲಾಂಚನ ಮತ್ತು ಮಹಾರಾಜ ವಿಷಯಾಧಾರಿತ ಟ್ರೋಫಿಯನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಲೋಹದಲ್ಲಿ ಅತ್ಯಂತ ಸೂಕ್ಮ್ಚವಾಗಿ ಕೆತ್ತಲಾಗಿರುವ ಈ ಟ್ರೋಫಿಯಲ್ಲಿ 11 ರೆಕ್ಕೆಗಳಿದ್ದು, ಇದು ಕ್ರಿಕೆಟ್ ತಂಡದಲ್ಲಿರುವ ಒಟ್ಟು ಆಟಗಾರರನ್ನು ಪ್ರತಿನಿಧಿಸುತ್ತದೆ.
ಕರ್ನಾಟಕ ಶ್ರೇಷ್ಠ ಕ್ರಿಕೆಟಿಗರಾದ ದೇವದತ್ತ ಪಡಿಕ್ಕಲ್, ಶ್ರೇಯಸ್ ಗೋಪಾಲ್, ಕೆ. ಗೌತಮ್, ಮನೀಶ್ ಪಾಂಡೆ, ಜೆ. ಸುಚಿತ್, ಕರುಣ್ ನಾಯರ್, ಮಯಾಂಕ್ ಅಗರ್ವಾಲ್, ಅಭಿನವ್ ಮನೋಹರ್, ಕೆ.ಸಿ. ಕಾರಿಯಪ್ಪ, ಪ್ರವೀಣ್ ದುಬೆ ಮತ್ತು ಅಭಿಮನ್ಯು ಮಿಥುನ್ ಸೇರಿದಂತೆ ಪ್ರಮುಖರು ಮಹಾರಾಜ ಟ್ರೋಫಿಯಲ್ಲಿ ಆಡುವ ನಿರೀಕ್ಷೆ ಇದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…