ಕಲಬುರಗಿ: ಸಮಾಜದಲ್ಲಿರು ಕ್ಷಯರೋಗದ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ ಸಮಾಜದಲ್ಲಿರುವ ಪ್ರತಿಯೊಬ್ಬರ ಸಹಕಾರದಿಂದ ಕ್ಷಯದಂತಹ ಸಾಂಕ್ರಾಮಿಕ ರೋಗಗಳನ್ನು ನಿರ್ಮೂಲನೆ ಮಾಡಲು ಸಾದ್ಯವೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುನಂದಾ ನಾವಿ ಹೇಳಿದರು.
ರಾವೂರ ಗ್ರಾಮದ ಶ್ರಿ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಾರ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಸಕ್ರೀಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಕರ್ನಾಟಕವನ್ನು ಕ್ಷಯರೋಗ ಮುಕ್ತಗೊಳಿಸಲು ಆರೋಗ್ಯ ಇಲಾಖೆಯು ಜುಲೈ ೧೮ ರಿಂದ ಅಗಸ್ಟ ೧೫ ಅ ವರೆಗೆ ಶಾಲಾ ಕಾಲೇಜುಗಳಲ್ಲಿ, ಸಮುದಾಯಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಅರಿವನ್ನು ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಕ್ಷಯರೋಗವನ್ನು ಎಲ್ಲರ ಸಹಕಾರದಿಂದ ಮುಕ್ತಗೊಳಿಸಬಹುದು. ಇದೊಂದು ಸಾಂಕ್ರಾಮಿಕ ರೋಗವಾಗಿದ್ದು ಬೇಗ ಪತ್ತೆ ಹಚ್ಚಿ ಚಿಕಿತ್ಸೆ ಕೊಡಿಸಿದರೆ ಖಂಡಿತ ಗುಣಮುಖರಾಗುತ್ತಾರೆ.
ಎರಡು ವಾರಕ್ಕಿಂತ ಹೆಚ್ಚು ಕೆಮ್ಮು, ಜ್ವರ,ಕಫ ಜೊತೆಗೆ ರಕ್ತ ಬೀಳುವುದು. ಹಸಿವಾಗದೇ ಇರುವುದು, ತೂಕ ಕಡಿಮೆ ಆಗುವುದು ಇವು ಕ್ಷಯರೋಗದ ಲಕ್ಷಣಗಳಾಗಿವೆ. ಆಶಾ ಕಾರ್ಯಕರ್ತೆಯರು ನಿಮ್ಮ ಮನೆಗೆ ಬಂದಾಗ ಯಾರಿಗಾದರೂ ದೀರ್ಘ ಕೆಮ್ಮು ಇದ್ದರೆ ಅಂತವರಿಗೆ ಕಫದ ಬಾಕ್ಸ ಕೊಡಲಾಗುತ್ತದೆ. ನಿಮ್ಮ ಕಫವನ್ನು ನೀಡಿದರೆ ಅದನ್ನು ಪರೀಕ್ಷೆಗೆ ಕಳಿಸಲಾಗುತ್ತದೆ. ಕ್ಷಯರೋಗ ಖಾತ್ರಿಯಾದರೆ ಅಂತವರಿಗೆ ಆರು ತಿಂಗಳವರೆಗೆ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತದೆ. ಇದೆ ಚಿಕಿತ್ಸೆ ಖಾಸಗಿಯಲ್ಲಿ ಪಡೆದರೆ ೪೦ ರಿಂದ ೫೦ ಸಾವಿರ ಖರ್ಚಾಗುತ್ತದೆ. ದಯವಿಟ್ಟು ಕೆಮ್ಮುವಾಗ,ಸೀನುವಾಗ ಮುಖಕ್ಕೆ ಕರವಸ್ತ್ರವಿರಲಿ. ರೋಗ ನೀರೋಧಕ ಶಕ್ತಿ ಕಡಿಮೆ ಇರುವವರಿಗೆ ಬಹಳ ಬೇಗ ವೈರಸ್ ಹರಡುತ್ತದೆ ಎಂದು ಹೇಳಿದರು.
ಸಂವಾದ ರೂಪದಲ್ಲಿ ಮಕ್ಕಳು ತಮ್ಮ ಕುತೂಹಲದ ಪ್ರಶ್ನೆಗಳನ್ನು ಆರೋಗ್ಯ ಅಧಿಕಾರಿಗಳಿಎ ಕೇಳಿ ಉತ್ತರ ಪಡೆದರು. ವೇದಿಕೆಯ ಮೇಲೆ ರಾವೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕಿ ವಿಜಯಕುಮರಿ, ಆಶಾ ಕಾರ್ಯಕರ್ತೆಯರಾದ ಚಂದ್ರಕಲಾ, ರಾಜೇಶ್ವರಿ ಇದ್ದರು. ಮುಖ್ಯಗುರು ವಿಧ್ಯಾಧರ ಖಂಡಾಳ ಅದ್ಯಕ್ಷತೆಯನ್ನು ವಹಿಸಿದ್ದರು.ಈಶ್ವರಗೌಡ ಪಾಟೀಲ, ಶಿವಕುಮಾರ ಸರಡಗಿ, ಸುಗುಣಾ ಕೋಳ್ಕೂರ, ಭುವನೇಶ್ವರಿ.ಎಂ, ರಾಧಾ ರಾಠೋಡ, ಜ್ಯೋತಿ ತೆಗನೂರ, ಮಂಜುಳಾ ಪಾಟೀಲ ಸೇರಿದಂತೆ ಮಕ್ಕಳು ಉಪಸ್ಥಿತರಿದ್ದರು. ಶಿಕ್ಷಕ ಸಿದ್ದಲಿಂಗ ಬಾಳಿ ನಿರೂಪಿಸಿ ವಂದಿಸಿದರು.
ಪ್ರತಿಯೊಬ್ಬರ ಸಹಕಾರದಿಂದ ಕ್ಷಯದಂತಹ ಸಾಂಕ್ರಾಮಿಕ ರೋಗಗಳನ್ನು ನಿರ್ಮೂಲನೆ ಮಾಡಲು ಸಾದ್ಯವೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುನಂದಾ ನಾವಿ ಹೇಳಿದರು.ರಾವೂರ ಗ್ರಾಮದ ಶ್ರಿ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಾರ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಸಕ್ರೀಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಕರ್ನಾಟಕವನ್ನು ಕ್ಷಯರೋಗ ಮುಕ್ತಗೊಳಿಸಲು ಆರೋಗ್ಯ ಇಲಾಖೆಯು ಜುಲೈ ೧೮ ರಿಂದ ಅಗಸ್ಟ ೧೫ ಅ ವರೆಗೆ ಶಾಲಾ ಕಾಲೇಜುಗಳಲ್ಲಿ, ಸಮುದಾಯಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಅರಿವನ್ನು ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇವೆ.
ಕ್ಷಯರೋಗವನ್ನು ಎಲ್ಲರ ಸಹಕಾರದಿಂದ ಮುಕ್ತಗೊಳಿಸಬಹುದು. ಇದೊಂದು ಸಾಂಕ್ರಾಮಿಕ ರೋಗವಾಗಿದ್ದು ಬೇಗ ಪತ್ತೆ ಹಚ್ಚಿ ಚಿಕಿತ್ಸೆ ಕೊಡಿಸಿದರೆ ಖಂಡಿತ ಗುಣಮುಖರಾಗುತ್ತಾರೆ. ಎರಡು ವಾರಕ್ಕಿಂತ ಹೆಚ್ಚು ಕೆಮ್ಮು, ಜ್ವರ,ಕಫ ಜೊತೆಗೆ ರಕ್ತ ಬೀಳುವುದು. ಹಸಿವಾಗದೇ ಇರುವುದು, ತೂಕ ಕಡಿಮೆ ಆಗುವುದು ಇವು ಕ್ಷಯರೋಗದ ಲಕ್ಷಣಗಳಾಗಿವೆ. ಆಶಾ ಕಾರ್ಯಕರ್ತೆಯರು ನಿಮ್ಮ ಮನೆಗೆ ಬಂದಾಗ ಯಾರಿಗಾದರೂ ದೀರ್ಘ ಕೆಮ್ಮು ಇದ್ದರೆ ಅಂತವರಿಗೆ ಕಫದ ಬಾಕ್ಸ ಕೊಡಲಾಗುತ್ತದೆ.
ನಿಮ್ಮ ಕಫವನ್ನು ನೀಡಿದರೆ ಅದನ್ನು ಪರೀಕ್ಷೆಗೆ ಕಳಿಸಲಾಗುತ್ತದೆ. ಕ್ಷಯರೋಗ ಖಾತ್ರಿಯಾದರೆ ಅಂತವರಿಗೆ ಆರು ತಿಂಗಳವರೆಗೆ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತದೆ. ಇದೆ ಚಿಕಿತ್ಸೆ ಖಾಸಗಿಯಲ್ಲಿ ಪಡೆದರೆ ೪೦ ರಿಂದ ೫೦ ಸಾವಿರ ಖರ್ಚಾಗುತ್ತದೆ. ದಯವಿಟ್ಟು ಕೆಮ್ಮುವಾಗ,ಸೀನುವಾಗ ಮುಖಕ್ಕೆ ಕರವಸ್ತ್ರವಿರಲಿ. ರೋಗ ನೀರೋಧಕ ಶಕ್ತಿ ಕಡಿಮೆ ಇರುವವರಿಗೆ ಬಹಳ ಬೇಗ ವೈರಸ್ ಹರಡುತ್ತದೆ ಎಂದು ಹೇಳಿದರು.
ಸಂವಾದ ರೂಪದಲ್ಲಿ ಮಕ್ಕಳು ತಮ್ಮ ಕುತೂಹಲದ ಪ್ರಶ್ನೆಗಳನ್ನು ಆರೋಗ್ಯ ಅಧಿಕಾರಿಗಳಿಎ ಕೇಳಿ ಉತ್ತರ ಪಡೆದರು. ವೇದಿಕೆಯ ಮೇಲೆ ರಾವೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕಿ ವಿಜಯಕುಮರಿ, ಆಶಾ ಕಾರ್ಯಕರ್ತೆಯರಾದ ಚಂದ್ರಕಲಾ, ರಾಜೇಶ್ವರಿ ಇದ್ದರು. ಮುಖ್ಯಗುರು ವಿಧ್ಯಾಧರ ಖಂಡಾಳ ಅದ್ಯಕ್ಷತೆಯನ್ನು ವಹಿಸಿದ್ದರು. ಈಶ್ವರಗೌಡ ಪಾಟೀಲ, ಶಿವಕುಮಾರ ಸರಡಗಿ, ಸುಗುಣಾ ಕೋಳ್ಕೂರ, ಭುವನೇಶ್ವರಿ.ಎಂ, ರಾಧಾ ರಾಠೋಡ, ಜ್ಯೋತಿ ತೆಗನೂರ, ಮಂಜುಳಾ ಪಾಟೀಲ ಸೇರಿದಂತೆ ಮಕ್ಕಳು ಉಪಸ್ಥಿತರಿದ್ದರು. ಶಿಕ್ಷಕ ಸಿದ್ದಲಿಂಗ ಬಾಳಿ ನಿರೂಪಿಸಿ ವಂದಿಸಿದರು.
ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…
ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…
ಕಲಬುರಗಿ : ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯಲ್ಲಿ ಎನ್.ಎಸ್.ಎಸ್, ರೆಡ್‍ಕ್ರಾಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕøತಿಕ ಘಟಕಗಳ…
ಕಲಬುರಗಿ; ಶಿಶು ಮಗುವಿಗೆ ಅಪಹರಣಕಾರರನ್ನು ಬಂಧಿಸಿದ ಕಲಬುರಗಿ ಪೆÇೀಲೀಸ್ ಇಲಾಖೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಭಿನಂದನೆ ವ್ಯಕ್ತಪಡಿಸಿದೆ.…
ಕಲಬುರಗಿ; ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಅಫಜಲಪೂರ, ಸೇಡಂ, ಆಳಂದ, ಚಿಂಚೋಳಿ ತಾಲೂಕಿನಲ್ಲಿ ಜಂಗಲ್ ಕಟಿಂಗ್ ಹಾಗೂ ಮೆಂಟನೆನ್ಸ್…