ಶಹಾಬಾದ: ಲೇಬಲ್ ಹಾಕಿದ ಮೊಸರು, ಮಜ್ಜಿಗೆ ಜಿಎಸ್‌ಟಿ ವಿಧಿಸುವ ಹಾಗೂ ಡೈರಿ ಉತ್ಪನ್ನಗಳಿಗೆ ಜಿಎಸ್‌ಟಿ ಹೆಚ್ಚಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಬುಧವಾರ ಎಸ್.ಯು.ಸಿ.ಐ ಪಕ್ಷದ ವತಿಯಿಂದ ಸಾಯಂಕಾಲ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಎಸ್.ಯು.ಸಿ.ಐ. (ಸಿ) ಪಕ್ಷದ ಸ್ಥಳೀಯ ಸಮಿತಿ ಕಾರ್ಯದರ್ಶಿ ಗಣಪತರಾವ ಮಾನೆ ಮಾತನಾಡಿ, ಇತ್ತೀಚಿಗೆ ಪತ್ರಿಕೆಗಳಲ್ಲಿ ವರದಿಯಾಗಿರುವಂತೆ, ’ಮೊದಲೇ ಲೇಬಲ್ ಹಚ್ಚಿದ’ ಮತ್ತು ಪ್ಯಾಕೆಟ್ ಮಾಡಿರುವ ಮೊಸರು, ಲಸ್ಸಿ ಹಾಗೂ ಮಜ್ಜಿಗೆಯ ಮೇಲೆ ಶೇ.೫ ಜಿಎಸ್‌ಟಿ ವಿಧಿಸಲು ಮತ್ತು ಡೈರಿ ಯಂತ್ರೋಪಕರಣಗಳಿಗೆ ಹಾಗೂ ಹಾಲು ಕರೆಯುವ ಯಂತ್ರಗಳಿಗೆ ಜಿಎಸ್‌ಟಿಯನ್ನು ಶೇ.೧೨ ರಿಂದ ಶೇ.೧೮ ಕ್ಕೆ ಏರಿಸಲು, ಚಂಡೀಗಢದಲ್ಲಿ ನಡೆದ ೪೭ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಂಡಿರುವ ಅತ್ಯಂತ ರೈತ ವಿರೋಧಿ ಹಾಗೂ ಜನ ವಿರೋಧಿ ನಿರ್ಧಾರವನ್ನು ಎಸ್.ಯು.ಸಿ.ಐ ಉಗ್ರವಾಗಿ ಖಂಡಿಸುತ್ತದೆ ಮತ್ತು ಕೂಡಲೇ ವಾಪಸ್ ತೆಗೆದುಕೊಳ್ಳಬೇಕೆಂದು ಈ ಪ್ರತಿಭಟನೆ ಮೂಲಕ ಒತ್ತಾಯಿಸುತ್ತದೆ ಎಂದರು.
ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ದವಸಧಾನ್ಯಗಳು, ಔಷಧಿಗಳು, ಕಟ್ಟಡ ಸಾಮಾಗ್ರಿಗಳು, ಪೇಪರ್ ದರ, ವಿದ್ಯುತ್ ದರ, ಇನ್ನಿತರೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯು ನಿರಂತರವಾಗಿ ತೀವ್ರವಾಗಿ ಏರಿಕೆ ಮಾಡುತ್ತಿರುವುದು ಖಂಡನೀಯ. ಜಾಗತೀಕರಣ ನೀತಿಗಳು ಜಾರಿಯಾದಾಗಿನಿಂದ ಇಲ್ಲಿಯವರೆಗೂ ಆಳಿರುವ ಎಲ್ಲಾ ರಾಜಕೀಯ ಪಕ್ಷಗಳು ಜನವಿರೋಧಿ ನೀತಿಗಳನ್ನೇ ಜಾರಿಗೆ ತಂದಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಎಸ್.ಯು.ಸಿ.ಐ ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ರಾಮಣ್ಣ ಎಸ್. ಇಬ್ರಾಹಿಂಪೂರ ಮಾತನಾಡಿ, ಹೈನುಗಾರಿಕೆಯು ಭಾರತದಲ್ಲಿ ವಿಪರೀತವಾಗಿ ಏರುತ್ತಿರುವ ನಿರುದ್ಯೋಗ, ಬೆಲೆ ಏರಿಕೆ, ಬಡತನಗಳ ಬೇಗೆಯಿಂದ ಬಡ ಗ್ರಾಮೀಣ ಜನರನ್ನು ಸ್ವಲ್ಪಮಟ್ಟಿಗೆ ಕಾಪಾಡಿದೆ. ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಹೈನುಗಾರಿಕೆಯೇ ಗ್ರಾಮೀಣ ಜನರ ಜೀವ ಉಳಿಸಿದ್ದು. ಕೇಂದ್ರ ಸರ್ಕಾರದ ಜಿಎಸ್‌ಟಿ ಹೇರಿಕೆಯು ಇದರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದು ಖಂಡಿತ.ಆದ್ದರಿಂದ ಡೈರಿ ಉತ್ಪನ್ನಗಳಿಗೆ ಜಿಎಸ್‌ಟಿ ಹೆಚ್ಚಿಸುವ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಕೈಬಿಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಸದಸ್ಯರಾದ ರಾಘವೇಂದ್ರ ಎಂ.ಜಿ, ಜಗನ್ನಾಥ.ಎಸ್.ಎಚ್. ಸಿದ್ದು ಚೌಧರಿ, ಗುಂಡಮ್ಮ ಮಡಿವಾಳ, ರಾಜೇಂದ್ರ ಅತನೂರ, ಮಹಾದೇವಿ ಮಾನೆ, ಮಹಾದೇವಿ ಅತನೂರ, ಅಂಬಿಕಾ ಗುರುಜಾಲಕರ್, ರಮೇಶ ದೇವಕರ್. ಅಜಯ್ ಎ. ರಘು ಪವಾರ, ಸೇರಿದಂತೆ ನಾಗರಿಕರು ಭಾಗವಹಿಸಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…