ಶಹಾಬಾದ: ಮಕ್ಕಳು ಸಮಾಜದ ಆಸ್ತಿ. ಅವರ ಹಕ್ಕುಗಳ ರಕ್ಷಣೆ ಮಾಡಬೇಕು ಮಕ್ಕಳನ್ನು ಸಮಾಜದ ಆಸ್ತಿಯಾಗಿ ರೂಪಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ನಗರದ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲೇಶಿ ಪರಶುರಾಮ ಮೋಹಿತೆ ಹೇಳಿದರು.
ಅವರು ಗುರುವಾರ ನಗರದ ನ್ಯಾಯಾಲಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಚಿತ್ತಾಪೂರ ನ್ಯಾಯವಾದಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕು ಕುರಿತು ಆಯೋಜಿಸಲಾಗಿದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ತಾಯಿಯ ಗರ್ಭದಲ್ಲಿ ಇರುವಾಗಲೆ ಮಗುವಿಗೆ ಪೌಷ್ಟಿಕ ಆಹಾರ ನೀಡುವ ಮೂಲಕ ಮಗುವಿನ ಬೆಳವಣಿಗೆಗೆ ಸರಕಾರ ಸಹಕಾರ ನೀಡುತ್ತಿದೆ. ಮಗು ಹುಟ್ಟಿದ ನಂತರ ನಾನಾ ಸವಲತ್ತುಗಳನ್ನು ನೀಡಿದೆ. ೬ರಿಂದ ೧೪ ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯ ಉಚಿತ ಶಿಕ್ಷಣ ಒದಗಿಸಲಾಗಿದ್ದು, ಅದನ್ನು ಸದುಪಯೋಗಪಡಿಸಿಕೊಂಡು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಶಾಲೆಗೆ ಸೇರಿಸಿದರ? ತಮ್ಮ್ಮ ಜವಾಬ್ದಾರಿ ಮುಗಿಯಿತು ಎಂದುಕೊಳ್ಳದೆ ಪೋ?ಕರು ಹೆಚ್ಚಿನ ಕಾಳಜಿ ವಹಿಸಬೇಕು. ಕೇವಲ ಕಾನೂನಿನಿಂದ ಮಾತ್ರ ಮಕ್ಕಳ ಹಕ್ಕು ಗಳನ್ನು ರಕ್ಷಣೆ ಮಾಡಲು ಸಾಧ್ಯವಿಲ್ಲ. ಇದಕ್ಕೆ ಎಲ್ಲರ ಸಹಕಾರ ಬೇಕು. ಮಕ್ಕಳ ದಿನಾಚರಣೆ ಕೇವಲ ಸಾಂಸ್ಕೃತಿಕವಾಗದೆ ಮಕ್ಕಳನ್ನು ಉತ್ತಮ ಪ್ರಜೆಯಾಗುವತ್ತ್ತ ಎಲ್ಲರೂ ಗಮನ ಹರಿಸಬೇಕು ಎಂದು ಹೇಳಿದರು.
ಜಾಗೃತಿ ಅಗತ್ಯ: ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ನಿರಂತರ ಜಾಗತಿ ಮತ್ತು ನಿಗಾ ಅಗತ್ಯವಾಗಿದೆ. ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡುವ ಮೂಲಕ ಅವರನ್ನು ಎಲ್ಲ ರೀತಿಯಲ್ಲಿ ಬಲಿ?ರನ್ನಾಗಿಸಬೇಕಿದೆ. ಮಕ್ಕಳನ್ನು ಸಮಾಜದ ಆಸ್ತಿಯಾಗಿ ರೂಪಿಸುವ ಹೊಣೆಗಾರಿಕೆ ನಮ್ಮ ಮೇಲಿದೆ. ಎಲ್ಲರೂ ಅದನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದರು.
ನ್ಯಾಯವಾದಿಗಳಾದ ಉಮಾದೇವಿ ಮಲಕೂಡ ಮಾತನಾಡಿ, ಪೋ?ಕರು ಮತ್ತು ಸಮಾಜ ಮಕ್ಕಳನ್ನು ಪ್ರೀತಿಯಿಂದ ಕಾಣಬೇಕೆಂಬುವ ಹಿನ್ನೆಲೆ ಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾ ಗುತ್ತಿದೆ. ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು. ಮಕ್ಕಳಿಗೆ ಕಡ್ಡಾಯ ವಾಗಿ ಶಿಕ್ಷಣ ಕೊಡಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿ ಗೆ ತಂದು ಶಿಕ್ಷಣ ಕೊಡಲಾಗುತ್ತಿದೆ. ಪೋ?ಕರು ಸಹಕರಿಸಿದರೆ ಮಾತ್ರ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಸಾಧ್ಯ ಎಂದರು. ಅಲ್ಲದೇ ಸಂತ್ರಸ್ಥ ಪರಿಹಾರ ಯೋಜನೆ ಬಗ್ಗೆ ಉಪನ್ಯಾಸ ನೀಡಿದರು.
ಮುಖ್ಯ ಅತಿಥಿಗಳಾಗಿ ಹಿರಿಯ ನ್ಯಾಯವಾದಿಗಳಾದ ಅತುಲ್ ಯಲಶೆಟ್ಟಿ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಡಿ.ಸಿ.ಕುಲಕುಂದಿಕರ್ ವೇದಿಕೆಯ ಮೇಲಿದ್ದರು. ವಕೀಲರಾದ ರಮೇಶ ರಾಠೋಡ, ರಘುವೀರಸಿಂಗ ಠಾಕೂರ, ನಾಗೇಶ ಧನ್ನೇಕರ್, ತಿಮ್ಮಯ್ಯ ಮಾನೆ,ರಮೇಶ ಮಲಕೂಡ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…