ಕಲಬುರಗಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ಪ್ರಸ್ತುತ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವರ 80 ನೇ ವರ್ಷದ ಜನ್ಮದಿನವಾದ ಜುಲೈ 21 ರ ಗುರುವಾರ ನವ ದೆಹಲಿಯ ಅವರ ನಿವಾಸಕ್ಕೆ ತೆರಳಿ, ಜೇವರ್ಗಿ ಶಾಸಕರು ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಆಗಿರುವ ಡಾ. ಅಜಯ್ ಧರ್ಮಸಿಂಗ್ ಅವರು ಪುಷ್ಪಗುಚ್ಛ ನೀಡಿ ಡಾ. ಖರ್ಗೆಯವರ ದೀರ್ಘಾಯುಷ್ಯಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸಿದರು.
ಬುದ್ಧನ ತತ್ವ, ಅಂಬೇಡ್ಕರ್ ಚಿಂತನೆ, ಬಸವಣ್ಣನವರ ಸಮಾನತೆಯ ಆದರ್ಶಗಳನ್ನು ಮೈಗೂಡಿಸಿಕೊಂಡಿರುವ ಡಾ. ಮಲ್ಲಿಕಾರ್ಜುನ ಖರ್ಗೆಯವರು ಜನನಾಯಕರಾಗಿ, ಮುತ್ಸದ್ದಿ ರಾಷ್ಟ್ರ ಚಿಂತಕರಾಗಿ ಹೊರಹೊಮ್ಮುವ ಮೂಲಕ ಕಲಬುರಗಿಯ ಭಾಗದ ಜನಪ್ರೀಯ ನಾಯಕರಾಗಿದ್ದಾರೆ. ಅವರಿಂದ ಇನ್ನೂ ಹೆಚ್ಚಿನ ಸೇವೆ ಈ ದೇಶಕ್ಕೆ, ರಾಜ್ಯಕ್ಕೆ, ಕಲಬುರಗಿ ಭಾಗಕ್ಕೆ ದೊರಕಲಿ, ಡಾ. ಖರ್ಗೆಜಿ ಅವರಿಗೆ ಭಗವಂತ ಶತಾಯುಷ್ಯ ಕರುಣಿಸಲಿ ಎಂದು ಡಾ. ಅಜಯ್ ಸಿಂಗ್ ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರ. ಕಾರ್ಯದರ್ಶಿ ಶರಣು ಮೋದಿ, ಮಾಜಿ ಎಂಎಲ್‍ಸಿ ಅಲ್ಲಂಪ್ರಭು ಪಾಟೀಲ್, ನೀಲಕಂಠ ಮೂಲಗೆ ಹಾಜರಿದ್ದು ಇವರೂ ಡಾ. ಖರ್ಗೆಯವರ ಶತಾಯುಷ್ಯಕ್ಕಾಗಿ ಪರಮಾತ್ಮನಲ್ಲಿ ಪ್ರಾರ್ಥನೆ ಸಲ್ಲಿಸಿ ಶುಭ ಕೋರಿದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…