ಬಿಸಿ ಬಿಸಿ ಸುದ್ದಿ

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ: ಅಧ್ಯಕ್ಷ ದತ್ತಾತ್ರೆಯ ಪಾಟೀಲ ರೇವೂರ ಜೊತೆ ಸಮಾಲೋಚನೆ

ಕಲಬುರಗಿ : ದಸರಾ ಮೈಸೂರು ಉತ್ಸವ ಮದರಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿಕ್ಷಣ ಇಲಾಖೆ  ಸೇರಿದಂತೆ ಆಯಾ ಇಲಾಖೆಗಳಿಂದ ಮತ್ತು ಅಕಾಡೆಮಿಗಳ ಮೂಲಕ ಜನರ ಸಂಯೋಗ ದೊಂದಿಗೆ  ಅದ್ಧೂರಿಯಾಗಿ ಕಾರ್ಯಕ್ರಮ ಗಳನ್ನು ಹಮ್ಮಿಕ್ಕೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಲಕ್ಷ್ಮಣ ದಸ್ತಿಯವರು ಕೆ.ಕೆ.ಆರ್.ಡಿ.ಬಿ.ಯ ಅಧ್ಯಕ್ಷರಾದ ದತ್ತಾತ್ರೇಯ ಚಂದ್ರಶೇಖರ ಪಾಟೀಲ ರೇವೂರ ರವರೊಂದಿಗೆ ವಿವರವಾಗಿ ಚರ್ಚಿಸಿ ಮನವಿ ಮಾಡಿದರು.

ನಮ್ಮ ದೇಶದ ಸ್ವತಂತ್ರ ನಂತರ ಒಂದು ವರ್ಷ ಒಂದು ತಿಂಗಳು ಎರಡು ದಿವಸಗಳ ಕಾಲ ವಿಳಂಬವಾಗಿ ಆಸಫ್‌ಜಾಹಿ ನಿಜಾಮ್ ಆಡಳಿತದಿಂದ ವಿಮುಕ್ತಿಗೊಂಡು ಅಖಂಡ ಭಾರತದಲ್ಲಿ ೧೭ನೇ ಸೆಪ್ಟೆಂಬರ ೧೯೪೮ ರಂದು ವಿಲೀನವಾದ ಕಲ್ಯಾಣ ಕರ್ನಾಟಕ ಪ್ರದೇಶದ ಅಮೃತ ಮಹೋತ್ಸವ ಬರುವ ೧೭ನೇ ಸೆಪ್ಟೆಂಬರ ೨೦೨೨ರಿಂದ ಆರಂಭವಾಗಿ ೧೭ನೇ ಸೆಪ್ಟೆಂಬರ್ ೨೦೨೩ಕ್ಕೆ ಸಮಾರೋಪಗೊಳ್ಳುವದು.

ಕಲ್ಯಾಣ ಕರ್ನಾಟಕ ಪ್ರದೇಶದ ಪ್ರತಿಯೊಬ್ಬ ನಾಗರಿಕನಿಗೆ ಸ್ವಾಭಿಮಾನದ ಪ್ರತೀಕವಾದ ಈ ಅಮೃತ ಮಹೋತ್ಸವ ಕಲ್ಯಾಣದ ನೆಲ, ಜಲ, ಸಂಸ್ಕೃತಿ, ಇತಿಹಾಸ ಅಭಿವೃದ್ಧಿ ಪಥದ ವಿಶೇಷ ಬೆಳಕು ಚೆಲ್ಲುವ ಮುಖಾಂತರ ವರ್ಷವಿಡೀ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಕೆ.ಕೆ.ಆರ್.ಡಿ.ಬಿ.ಯ ಅಧ್ಯಕ್ಷರು ವಿಶೇಷ ಮುತುವರ್ಜಿ ವಹಿಸಿರುವಂತೆ ಮನವಿ ಮಾಡಿದರು.

ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷರು, ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಬಗ್ಗೆ ಉತ್ಸವ ಸಮಿತಿ ಸೇರಿದಂತೆ ಕಲ್ಯಾಣ ಕರ್ನಾಟಕ ಪ್ರದೇಶದ ಸಚಿವರು, ಜನಪ್ರತಿನಿಧಿಗಳು ಮತ್ತು ಉನ್ನತ ಅಧಿಕಾರಿ ಗಳೊಂದಿಗೆ, ನಿರಂತರವಾಗಿ ಸಭೆಗಳನ್ನು ನಡೆಸಿ ಕಲ್ಯಾಣ ಅಮೃತ ಮಹೋತ್ಸವವನ್ನು ಜನಮಾನಸದ ಉತ್ಸವದ ರೂಪದಲ್ಲಿ ಆಚರಣೆಗೆ ತಮ್ಮ ಬದ್ಧತೆ ಪ್ರದರ್ಶಿಸುವದಾಗಿ ತಿಳಿಸಿದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

1 hour ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

12 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

12 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

14 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

14 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

14 hours ago