ಕಲಬುರಗಿ : ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯವು ಪ್ರತಿವರ್ಷ ಕೊಡಮಾಡುವ ೨೦೨೧-೨೨ ಶೈಕ್ಷಣಿಕ ಸಾಲಿನ ಅವ್ವ ಪ್ರಶಸ್ತಿಯನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪರಮಪೂಜ್ಯ ಡಾ.ಶರಣಬಸವಪ್ಪ ಅಪ್ಪ ಮತ್ತು ಪೂಜ್ಯ ಡಾ.ದಾಕ್ಷಾಯಣಿ ಎಸ್.ಅಪ್ಪ ಅವರ ಮಾರ್ಗದರ್ಶನದಂತೆ ಕಲಬುರಗಿ ಮೂಲದ ಖ್ಯಾತ ವೈದ್ಯರಾದ ಬೆಂಗಳೂರಿನ ಕಿದ್ವಾಯಿ ಮೆಮೋರಿಯಲ್ ಇನ್ಸಿಟ್ಯೂಟ್ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ನಿವೃತ್ತ ಮುಖ್ಯಸ್ಥರಾದ ಡಾ.ವಿಜಯಲಕ್ಷ್ಮೀ ದೇಶಮಾನೆ ಅವರಿಗೆ ನೀಡಲಾಗುತ್ತಿದೆ ಎಂದು ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ನೀಲಾಂಬಿಕಾ ಶೇರಿಕಾರ ತಿಳಿಸಿದ್ದಾರೆ.
ಮಹಾವಿದ್ಯಾಲಯದಲ್ಲಿ ಶನಿವಾರ ನಡೆಯುವ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ೨೧ ಸಾವಿರ ರೂ.ನಗದು ಮತ್ತು ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು. ಇದೇ ಸಂದರ್ಭದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಮನ್ ಪೂಜ್ಯ ಡಾ.ದಾಕ್ಷಾಯಣಿ ಎಸ್.ಅಪ್ಪ ಅವರಿಗೆ ನೇಪಾಳದ ಬಸವ ಇಂಟರನ್ಯಾಷನಲ್ ಕಾನ್ಸರೆನ್ಸ್ ಕಮಿಟಿಯವರು ’ದಾಸೋಹ ರತ್ನ’ ಪ್ರಶಸ್ತಿ ನೀಡಿರುವುದಕ್ಕಾಗಿ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಕಾರ್ಯಕ್ರಮದ ಸಾನಿಧ್ಯವನ್ನು ಪೂಜ್ಯ ಡಾ.ದಾಕ್ಷಾಯಣಿ ಎಸ್.ಅಪ್ಪ ವಹಿಸಲಿದ್ದಾರೆ.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ತುಳಸಿಮಾಲಾ, ಸಿಂಡಿಕೇಟ್ ಸದಸ್ಯರಾದ ಡಾ.ಡಿ.ಬಿ.ಕಂಬಾರ ಭಾಗವಹಿಸಲಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…