ಬಿಸಿ ಬಿಸಿ ಸುದ್ದಿ

ಕಟ್ಟಡ ಕಾರ್ಮಿಕರ ಬೇಡಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಕಲಬುರಗಿ : ನವಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕ ಸಂಘ ಮತ್ತು ಸೆಂಟ್ರಿಂಗ್ ಕಾರ್ಮಿಕ ಸಂಘದ ಸಂಯುಕ್ತ ಆಶ್ರಯದಲ್ಲಿ ಕಟ್ಟಡ ಕಾರ್ಮಿಕರಿಗೆ ನ್ಯಾಯಯುತವಾದ ಕೂಲಿ ದರ ನಿಗದಿ ಮಾಡಬೇಕೆಂದು ಆಗ್ರಹಿಸಿ ನಗರದ ನೇಹರು ಗಂಜ್ ನಗರೇಶ್ವರ ಶಾಲೆಯಿಂದ ಬೃಹತ್ ಮೆರವಣಿಗೆ ಮುಖಾಂತರ ಜಗತ್ ಮಾರ್ಗವಾಗಿ ಸರ್ದಾರ ಪಟೇಲ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಮನವಿ ಪತ್ರ ಸಲ್ಲಿಸಲಾಯಿತು.

ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ನವಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷರಾದ ಭೀಮರಾಯ ಕಂದಳ್ಳಿ, ಸೆಂಟ್ರಿಂಗ್ ಸಂಘದ ಅಧ್ಯಕ್ಷ ಅಲ್ಲಾವುದ್ದೀನ್ ರವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಾರಿ ಪ್ರಮಾಣದಲ್ಲಿ ಕಟ್ಟಡ ಕಾರ್ಮಿಕರು ಜಮಾಯಿಸಿ ಕಟ್ಟಡ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚಿಸಲಾಯಿತು.

ಕಟ್ಟಡ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಲಕ್ಷ್ಮಣ ದಸ್ತಿಯವರು ಕಳೆದ ಒಂದು ದಶಕದಿಂದ ಕಲಬುರಗಿ ಮತ್ತು ಜಿಲ್ಲೆಯ ಆಯಾ ಕ್ಷೇತ್ರದ ಕಟ್ಟಡ ಕಾರ್ಮಿಕರ ದರಗಳು ವೈಜ್ಞಾನಿಕ ಆಧಾರದ ಮೇಲೆ ನಿಗದಿಯಾಗದೆ ತಾರತಮ್ಯ ಮಾಡಲಾಗುತ್ತಿದೆ.ಸಿವಿಲ್ ಇಂಜಿನಿಯರಿಂಗ್ ಮತ್ತು ವಾಸ್ತುಶಿಲ್ಪ (ಆರ್ಕಿಟೆಕ್ಚರ ಇಂಜಿನಿಯರಿಂಗ್) ಸಂಘ ಹಾಗೂ ಬಿಲ್ಡರ್ಸ ಅಸೋಸಿಯೇಶನ್ ಮುಖಂಡರು ಕಟ್ಟಡ ಕಾರ್ಮಿಕರ ನೋವಿಗೆ ಸ್ಪಂದಿಸದೆ ತಾರತಮ್ಯ ಮಾಡುತ್ತಿರುವುದು ಸರಿಯಲ್ಲ. ಏಕರೂಪದ ದರ ನಿಗದಿ ಮಾಡಿ ಸಮಾನಾಂತರವಾಗಿ ಪ್ರಸ್ತುತ ಸಂದರ್ಭಕ್ಕೆ ಅನುಸಾರವಾಗಿ ಕಟ್ಟಡ ಕಾರ್ಮಿಕರು ಕೇಳುತ್ತಿರುವ ನ್ಯಾಯಯುತವಾದ ಬೇಡಿಕೆಗಳಿಗೆ ಸ್ಪಂದಿಸಿ ದರ ನಿಗದಿ ಮಾಡುವುದು, ಅತಿ ಅವಶ್ಯವಾಗಿದೆ. ಈ ವಿಷಯವಾಗಿ ಉಭಯ ಸಂಘದವರು ಗಂಭೀರವಾಗಿ ಪರಿಗಣಿಸಬೇಕು. ಮಾನ್ಯ ಜಿಲ್ಲಾಧಿಕಾರಿಗಳು, ಈ ವಿಷಯಕ್ಕೆ ಸಂಬಂಧಿಸಿ, ಮಧ್ಯ ಪ್ರವೇಶ ಮಾಡಿ ತಕ್ಷಣ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿದರು.

ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷರಾದ ಭೀಮರಾಯ ಅವರು ಮಾತನಾಡಿ, ನಮ್ಮ ನ್ಯಾಯಯುತವಾದ ಬೇಡಿಕೆಗಳಿಗೆ ಆಗ್ರಹಿಸಿ ನಾವು ಎರಡನೇ ಪ್ರತಿಭಟನೆ ಮಾಡುತ್ತಿದ್ದೇವೆ. ಈ ಹೋರಾಟಕ್ಕೆ ಸ್ಪಂದನೆ ಸಿಗದಿದ್ದರೆ ಬರುವ ದಿನಗಳಲ್ಲಿ ನಿರಂತರ ಉಗ್ರ ರೂಪದ ಹೋರಾಟ ಅನಿವಾರ್ಯವಾಗುತ್ತದೆ ಎಂದು ತಿಳಿಸಿದರು. ಇದೇ ಧಾಟಿಯಲ್ಲಿ ಮಾತನಾಡಿದ ಸೆಂಟ್ರಿಂಗ್ ಸಂಘದ ಅಧ್ಯಕ್ಷರಾದ ಅಲ್ಲಾವುದ್ದಿನ್‌ರವರು ಕಲಬುರಗಿ ನಗರದಲ್ಲಿ ಸುಮಾರು ಎಂಬತ್ತು ಸಾವಿರ ಕಟ್ಟಡ ಕಾರ್ಮಿಕರಿದ್ದು ಜಿಲ್ಲಾಧಿಕಾರಿಗಳು ಮನಸ್ಸು ಮಾಡಿ ತಕ್ಷಣ ನ್ಯಾಯ ಒದಗಿಸಿಕೊಡಬೇಕು. ಇಲ್ಲವಾದಲ್ಲಿ ಕಟ್ಟಡ ಕಾರ್ಮಿಕರು ಮನೆ ಮನೆಗೆ ತಿರುಗಿ ಬರುವ ದಿನಗಳಲ್ಲಿ ಯಾವುದೇ ಗತ್ಯಂತರವಿಲ್ಲದೇ ನಿರಂತರ ಹೋರಾಟ ಮಾಡಲಾಗುವದೆಂದು ತಿಳಿಸಿದರು.

ಕಟ್ಟಡ ಕಾರ್ಮಿಕರ ಬೇಡಿಕೆಗಳ ಬಗ್ಗೆ ಸಕರಾತ್ಮಕವಾಗಿ ಸ್ಪಂದಿಸಿದ ಅಪರ ಜಿಲ್ಲಾಧಿಕಾರಿಗಳಾದ ತೆಗ್ಗಳ್ಳಿಯವರು ಬರುವ ೨೮ ಇಲ್ಲವೇ ೨೯ನೇ ತಾರೀಕಿನ ದಿವಸ ಕಟ್ಟಡ ಕಾರ್ಮಿಕರ ಮುಖಂಡರನ್ನೊಳ ಗೊಂಡು ಸಿವಿಲ್ ಇಂಜಿನಿಯರಿಂಗ್, ಆರ್ಕಿಟೆಕ್ಚರ್ ಇಂಜಿನಿಯರಿಂಗ ಮತ್ತು ಬಿಲ್ಡರ ಸಂಘದ ಸಭೆ ನಡೆಸಿ ಸಮಸ್ಯೆ ಬಗೆ ಹರಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ, ಮರೆಪ್ಪ ರೊಟ್ನಡಗಿ, ರಮೇಶ ಮಾಹವರಕರ, ಶಿವಕುಮಾರ ಬೆಳಗೇರಿ, ಮಹಾಂತೇಶ ದೊಡ್ಡಮನಿ, ಶರಣು ಬಳಿಚಕ್ರ, ದೇವಿಂದ್ರ ಉಳ್ಳಾಗಡ್ಡಿ, ಚಂದ್ರಕಾಂತ ತುಪ್ಪದಕಲ್ ಸೇರಿದಂತೆ ಮುಂತಾದವರು ಮಾತನಾಡಿದರು. ಈ ಬೃಹತ್ ಜಾಥಾದಲ್ಲಿ ಸುಮಾರು ಎರಡು ಸಾವಿರ ಕಟ್ಟಡ ಕಾರ್ಮಿಕರು ಭಾಗವಹಿಸಿದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

2 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

2 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

4 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

4 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

4 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

4 hours ago