ಕಲಬುರಗಿ: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಸ್ಸಿನ ಸೌಲಭ್ಯ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಕಾಳಗಿ ತಾಲ್ಲೂಕಿನ ಕೊಡ್ಲಿ ಕ್ರಾಸ್ ಬಳಿ ಸಾರಿಗೆ ಬಸ್ ತಡೆದು ಪ್ರತಿಭಟನೆ ನಡೆಯಿತು.
ರಟಕಲ್, ಹುಲುಸಗುಡ, ಕಂಚನಾಳ, ಸುಂಠಾಣ ಕೊಡ್ಲಿ ಕ್ರಾಸ್ ಮಾರ್ಗವಾಗಿ ಕಾಳಗಿಗೆ ಶಾಲಾ ಕಾಲೆಜುಗಳಿಗೆ ಹೊಗಲು ಬಸ್ಸಿನ ಸೌಕರ್ಯ ವಿಲ್ಲದೆ ವಿಧ್ಯಾರ್ಥಿಗಳು ಪರದಾಡುತ್ತಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳ ಕ್ಲಾಸ್ ಗಳು ತಪ್ಪುತ್ತಿವೆ ಹೀಗಾಗಿ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಬರೆ ಎಳೆದಂತಾಗುತ್ತಿದೆ ಎಂದು ಮಮಶೇಟ್ಟಿ ಅವರು ಸಾರಿಗೆ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಾರಿಗೆ ವ್ಯವಸ್ಥೆ ಇಲ್ಲದೇ ಹಳ್ಳಿಯ ಮಕ್ಕಳು ತುಂಬಾ ಸಂಕಷ್ಟದಲ್ಲಿದ್ದಾರೆ. ಬಸ್ಸಿಗೆ ಜೊತು ಬಿದ್ದು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ತಾಲ್ಲೂಕಿನಲ್ಲಿ ಬಸ್ ಸೌಕರ್ಯ ವ್ಯವಸ್ಥೆಯನ್ನು ತಕ್ಷಣವೇ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿದಂತೆ ಹಲವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…