ಬಿಸಿ ಬಿಸಿ ಸುದ್ದಿ

300 ಸಸಿ ನೆಟ್ಟು ಖರ್ಗೆ ಜನುಮ ದಿನ ಆಚರಣೆ

ಕಲಬುರಗಿ: ಮಹೇಂದ್ರ ಫೌಂಡೇಶನ್ ಕಲಬುರ್ಗಿ, ಸಾರಿಪುತ್ರ ಬುದ್ಧ ವಿಹಾರ ಧಮ್ಮಗಿರಿ ಶಹಪುರ ಹಾಗೂ ನಗರಸಭೆ ಶಹಾಪುರ ಇವುಗಳ ಸಂಯುಕ್ತಾಶ್ರಯದಲ್ಲಿ ರಾಜ್ಯಸಭೆಯ ಪ್ರತಿಪಕ್ಷದ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆಜಿ ಅವರ ೮೦ನೇ ಹುಟ್ಟು ಹಬ್ಬದ ನಿಮಿತ್ಯ ಶಹಾಪುರ ನಗರದ ಸಾರಿಪುತ್ರ ಬುದ್ಧವಿಹಾರ ಆವರಣದಲ್ಲಿ ಸುಮಾರು ಮುನ್ನೂರಕ್ಕೂ ಹೆಚ್ಚು ಗಿಡಗಳನ್ನು ನೆಡಲಾಯಿತು.

ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ ಅವರು ಗಿಡ ನೆಟ್ಟು ನೀರೆರೆವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಕೇಕ್ ಕತ್ತರಿಸುವ ಮೂಲಕ ಉದ್ಘಾಟಿಸಿದ ನಗರಸಭೆಯ ಅಧ್ಯಕ್ಷರಾದ ಚಂದ್ರಶೇಖರ ಲಿಂಗದಳ್ಳಿ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆಜಿ ಅವರು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಜನಪರವಾದ, ಅಭಿವೃದ್ಧಿಪರವಾದ ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದು ಜನನಾಯಕರು ಎನಿಸಿಕೊಂಡಿದ್ದಾರೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಾಂಗ್ರೆಸ್ ಮುಖಂಡರಾದ ಶರಣಪ್ಪ ಸಲಾದಪೂರ ಅವರು ಕಲ್ಯಾಣ ಕರ್ನಾಟಕಕ್ಕೆ ೩೭೧ ಜೆ ಕಲಂ ಜಾರಿಗೊಳಿಸಿ ಈ ಭಾಗದ ಅಭಿವೃದ್ಧಿಗೆ ಶ್ರಮಿಸಿದ ಮಹಾನಾಯಕ ಮಲ್ಲಿಕಾರ್ಜುನ ಖರ್ಗೆ ಎಂದರು. ದೇವೇಂದ್ರ ಹೆಗ್ಗಡೆ, ನೀಲಕಂಠ ಬಡಿಗೇರ, ಮಲ್ಲಿಕಾರ್ಜುನ ಪೂಜಾರಿ, ಮುಸ್ತಾಪ ದರ್ಬಾನ ಮುಂತಾದವರು ಖರ್ಗೆಜಿಯವರ ವ್ಯಕ್ತಿತ್ವದ ಗುಣಗಾನ ಮಾಡಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಲಬುರ್ಗಿ ವಿಭಾಗದ ಅಧಿಕಾರಿಗಳಾದ ಡಾ.ಚಂದ್ರಶೇಖರ್ ದೊಡ್ಡಮನಿ ಮಾತನಾಡಿ, ಪರಿಸರವು ಮಾನವ ಸಮಾಜಕ್ಕೆ ತಾಯಿಯಿದ್ದಂತೆ ಪ್ರಾಣಿ-ಪಕ್ಷಿ ಮತ್ತು ಮನುಷ್ಯರಿಗೆ ಹೂವು ಹಣ್ಣು ನೆರಳು ನೀಡುವ ಗಿಡಗಳನ್ನು ನೆಟ್ಟು ಬೆಳೆಸಿ ಪೋಷಿಸುವ ಜವಾಬ್ದಾರಿ ಪ್ರತಿಯೊಬ್ಬರು ಅನುಸರಿಸಬೇಕೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೂಜ್ಯ ಭಂತೆ ಸಾರಿಪುತ್ತ ವಹಿಸಿದ್ದರು. ಸಾಯಿಬಣ್ಣ ಪುರ್ಲೆ, ರಾಮಣ್ಣ ಸಾದ್ಯಾಪುರ, ಶ್ರೀಶೈಲ್ ಹೊಸಮನಿ, ಭೀಮರಾಯ ತಳವಾರ, ಡಾ. ರವೀಂದ್ರನಾಥ ಹೊಸಮನಿ, ಮರೆಪ್ಪ ಬುಕ್ಕಲ್, ಬಾಬುರಾವ್ ಭೂತಾಳಿ, ನಾಗಣ್ಣ ಬಡಿಗೇರ್, ಶರಣಬಸವ ಹೆಗ್ಗಡೆ, ಮಲ್ಲು ಆರಬೋಳ್,ಅಶೋಕ ತಳವಾರ, ಬಸವರಾಜ ಚಲವಾದಿ ಮುಂತಾದವರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago