ಬಿಸಿ ಬಿಸಿ ಸುದ್ದಿ

ಸರ್ವಕ್ಷೇತ್ರದಲ್ಲಿ ಮಹಿಳೆಯರ ಸಾಧನೆ : ಪೂಜ್ಯ ಅವ್ವಾಜಿ

ಕಲಬುರಗಿ: ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತ ಉನ್ನತಸ್ಥಾನಕ್ಕೇರುತ್ತಿದ್ದಾರೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಮನ್ ಪೂಜ್ಯ ಡಾ.ದಾಕ್ಷಾಯಣಿ ಎಸ್.ಅಪ್ಪ ಹೇಳಿದರು.

ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಶನಿವಾರ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ, ಧ್ಯೆರ್ಯ, ಸತತ ಓದು, ಪರಿಶ್ರಮ, ಛಲ, ತ್ಯಾಗಗಳಿಂದ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ. ತುಳಸೀಮಾಲಾ ಮಾತನಾಡಿ, ಶಿಕ್ಷಣದಿಂದ ಸ್ವಾಭಿಮಾನ ಸಮೃದ್ಧಿ ಜೀವನ ರೂಪಿಸಿಕೊಳ್ಳಬಹುದಾಗಿದೆ. ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣದ ಜೊತೆಗೆ ಕೌಶಲ್ಯ, ಸಾಮರ್ಥ್ಯ, ದಕ್ಷತೆಯೂ ಮುಖ್ಯವಾಗಿದೆ. ನಮ್ಮ ಚಾರಿತ್ರ್ಯ ನಾವೇ ನಿರ್ಮಾಣ ಮಾಡಿಕೊಳ್ಳಬೇಕಾಗಿದೆ. ಆರೋಗ್ಯ ಸಮಾಜಕ್ಕಾಗಿ ಬೇರೆ ಬೇರೆ ಕೋರ್ಸುಗಳನ್ನು ಕಲಿಯುವುದು ಅವಶ್ಯವಾಗಿದೆ ಎಂದು ಹೇಳಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪೂಜ್ಯ ದೊಡ್ಡಪ್ಪ ಅಪ್ಪ ಅವರು ಮಹಿಳೆಯರಿಗಾಗಿ ಶಿಕ್ಷಣ ಸಂಸ್ಥೆ ಆರಂಭಿಸಿ ಈ ಭಾಗ ಶೈಕ್ಷಣಿಕವಾಗಿ ಬೆಳೆಯಲು ಕಾರಣಕರ್ತರಾಗಿದ್ದಾರೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಲ್ಲಿ ಕಲಿತ ಅನೇಕ ಮಹಿಳೆಯರು ಉನ್ನತ ಸ್ಥಾನದಲ್ಲಿದ್ದಾರೆ ಎಂದರು.

ಅವ್ವ ಪ್ರಶಸ್ತಿ ಸ್ವೀಕರಿಸಿದ ಖ್ಯಾತ ವೈದ್ಯರಾದ ಡಾ. ವಿಜಯಲಕ್ಷ್ಮೀ ದೇಶಮಾನೆ ಅವರು ಮಾತನಾಡಿ ತಾವು ಆಸ್ಪತ್ರೆಯ ಸಣ್ಣ ಕೆಲಸದಿಂದ ಕಿದ್ವಾಯಿ ಆಸ್ಪತ್ರೆಯ ನಿರ್ದೇಶಕಿಯಾಗಿರುವುದರ ಹಿಂದೆ ಬಹಳ ಪರಿಶ್ರಮವಿದೆ. ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಓದಿನಲ್ಲಿ ಹೆಚ್ಚು ಸಮಯ ಕೊಡುವುದರ ಮೂಲಕ ತಂದೆತಾಯಿಯವರ ಕನಸ್ಸು ನೆರವೇರಿಸಿ ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯೆ ಡಾ.ನೀಲಾಂಬಿಕಾ ಶೇರಿಕಾರ ಮಾತನಾಡಿದರು, ಅವ್ವ ಪ್ರಶಸ್ತಿಯನ್ನು ಖ್ಯಾತ ವೈದ್ಯರಾದ ಡಾ. ವಿಜಯಲಕ್ಷ್ಮೀ ದೇಶಮಾನೆ ಅವರಿಗೆ ಮತ್ತು ಪೂಜ್ಯ ಡಾ.ದಾಕ್ಷಾಯಣಿ ಎಸ್.ಅಪ್ಪ ಅವರಿಗೆ ನೇಪಾಳದ ಬಸವ ಇಂಟರನ್ಯಾಷನಲ್ ಕಾನ್ಸರೆನ್ಸ್ ಕಮಿಟಿಯವರು ’ದಾಸೋಹ ರತ್ನ’ ಪ್ರಶಸ್ತಿ ನೀಡಿರುವುದಕ್ಕಾಗಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಜಾನಕಿ ಹೊಸುರು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರೆ, ಡಾ.ಸೀಮಾ ಪಾಟೀಲ ವಾರ್ಷಿಕ ವರದಿ ವಾಚನ ಮಾಡಿದರು. ಡಾ.ಪುಟ್ಟಮಣಿ ದೇವಿದಾಸ, ಕು.ರೋಹಿಣಿ , ಕು.ಭಾಗ್ಯವತಿ ಕಾರ್ಯಕ್ರಮ ನಿರೂಪಸಿದರು. ಶ್ರೀಮತಿ ದೀಶಾ ಮೆಹತಾ ವಂದಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

40 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago