ಕಲಬುರಗಿ: ’ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆರಂಭಿಸಿರುವ ಎರಡನೇ ಹಂತದ ಜನಚೈತನ್ಯ ಯಾತ್ರೆಯು ಸೋಮವಾರ (ಜುಲೈ ೨೫ರಂದು) ಕಲಬುರಗಿಗೆ ಬರಲಿದೆ’ ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಸೈಬಣ್ಣಾ ಜಮಾದಾರ ತಿಳಿಸಿದರು.
ಅಂದು ಕಲಬುರಗಿ ನಗರದ ಹುಮನಾಬಾದ್ ವರ್ತುಲ ರಸ್ತೆ ಬಳಿಯಿಂದ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ನೇತೃತ್ವದಲ್ಲಿ ಆರಂಭವಾಗುವ ಯಾತ್ರೆಯು, ಗಂಜ್, ಸೂಪರ್ ಮಾರ್ಕೆಟ್ ರಸ್ತೆ ಮೂಲಕ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಸಮಾರೋಪಗೊಳ್ಳಲಿದೆ. ಯಾತ್ರೆಯ ಮಾರ್ಗಮಧ್ಯೆ ಬರುವ ತಹಶೀಲ್ದಾರ್ ಕಚೇರಿ, ಆರ್‌ಟಿಒ, ಪೊಲೀಸ್ ಠಾಣೆಗಳ ಬಳಿ ತೆರಳಿ ಲಂಚಮುಕ್ತ ಅಭಿಯಾನ ಕೈಗೊಳ್ಳುವುದರ ಜತೆಗೆ ಅಲ್ಲಿನ ಜನರ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
’ರಾಜ್ಯದ ಇಂದಿನ ದುರಾಡಳಿತ ಹಾಗೂ ಮೂರು ಪಕ್ಷಗಳ ಪರಮಭ್ರಷ್ಟ, ನೀಚ ರಾಜಕಾರಣವನ್ನು ಕೊನೆಗಾಣಿಸಲು ಯಾತ್ರೆ ಕೈಗೊಂಡಿದ್ದು, ಕೆಆರ್‌ಎಸ್ ಪಕ್ಷವು ರಾಜ್ಯವನ್ನು ಸಧೃಢ ಹಾಗೂ ಭ್ರಷ್ಟಾಚಾರ ಮುಕ್ತ ರಾಜ್ಯ ನಿರ್ಮಾಣ ಮಾಡಲು ಶ್ರಮಿಸುತ್ತಿದೆ’ ಎಂದು ಹೇಳಿದರು.
’ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ೩೭೧ (ಜೆ) ಕಾಯ್ದೆಯು ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ. ಹಾಗಾಗಿ ಸರ್ಕಾರಿ ನೌಕರರಿಗೆ ಮುಂಬಡ್ತಿಯಲ್ಲಿ ತೊಂದೆಯಾಗುತ್ತಿದೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ . ಸರ್ಕಾರ ’ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ’ಯ ಹೆಸರನ್ನು ಮಾತ್ರ ಬದಲಾಯಿಸಿದೆ. ನಿಜವಾದ ಅಭಿವೃದ್ಧಿ ಕೆಲಸಗಳೇ ಆಗುತ್ತಿಲ್ಲ. ಕಾಮಗಾರಿಗಳೆಲ್ಲ ಕಳೆಪೆಯಿಂದ ಕೂಡಿ ಭಾರಿ ಅವ್ಯವಹಾರ ನಡೆಯುತ್ತಿದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದರು.
ಜಿಲ್ಲಾಧ್ಯಕ್ಷ ವಿಜಯ ಜಾಧವ, ಕಲಬುರಗಿ ತಾಲ್ಲೂಕು ಅಧ್ಯಕ್ಷ ವಿಜಯಕುಮಾರ ಮಠಪತಿ, ನಗರ ಅಧ್ಯಕ್ಷ ಶಿವಪುತ್ರ ಗರೂರ, ಉಪಾಧ್ಯಕ್ಷ ಅಮರ ಮಹಾಗಾಂವಕರ, ಅಭಿಷೇಕ್ ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…