ಸುರಪುರ: ಜಿಲ್ಲಾ ಕಿಸಾನ್ ಕಾಂಗ್ರೆಸ್ ಘಟಕಕ್ಕೆ ಸುರಪುರ ವಿಧಾನಸಭಾ ಕ್ಷೇತ್ರದ ವಿವಿಧ ಮುಖಂಡರನ್ನು ನೇಮಕಗೊಳಿಸಲಾಗಿದ್ದು,ಮಾಜಿ ಶಾಸಕ ರಾಜಾ ವೆಂಟಕ್ಪಪ ನಾಯಕ ಅವರ ಶಿಫಾರಸ್ಸಿನ ಮೇಲೆ ನೇಮಕಗೊಳಿಸಿ ಎಲ್ಲರಿಗೂ ನೇಮಕ ಆದೇಶ ಪತ್ರವನ್ನು ವಿತರಿಸಿದರು.
ನಗರದ ರಾಜಾ ವೆಂಕಟಪ್ಪ ನಾಯಕ ಅವರ ಗೃಹ ಕಚೇರಿ ಆವರಣದಲ್ಲಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಘಟಕದ ಉಪಾಧ್ಯಕ್ಷರನ್ನಾಗಿ ಬೈಲಪ್ಪಗೌಡ ಸಣ್ಣ ಬಸನಗೌಡ ವಾಗಣಗೇರಿಯವರನ್ನು ಶಾಂತಿಲಾಲ ಸಕ್ರಪ್ಪ ಗೆದ್ದಲಮರಿ ತಾಂಡಾ ಅವರನ್ನು ನೇಮಕಗೊಳಿಸಲಾಯಿತು.ಅಲ್ಲದೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಈರಣ್ಣ ಮಲ್ಲಿಕಾರ್ಜುನರಡ್ಡಿ ಮುದನೂರ ಅವರನ್ನು ನೇಮಕಗೊಳಿಸಿ ನೇಮಕ ಆದೇಶ ಪತ್ರವನ್ನು ವಿತರಿಸಲಾಯಿತು.
ಇದನ್ನೂ ಓದಿ: ಸುರಪುರ:ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ
ಈ ಸಂದರ್ಭದಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಮಾತನಾಡಿ, ಇಂದು ಜಿಲ್ಲೆಯ ಕಿಸಾನ್ ಕಾಂಗ್ರೆಸ್ ಪದಾಧಿಕಾರಿಗಳಾಗಿ ನೇಮಕಗೊಂಡ ತಮ್ಮೆಲ್ಲರಿಗೂ ಅಭಿನಂಧನೆಗಳು,ತಾವೆಲ್ಲರು ಜಿಲ್ಲೆಯಲ್ಲಿನ ಎಲ್ಲಾ ಕಾಂಗ್ರೆಸ್ ಶಾಸಕರು,ಮಾಜಿ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿನ ರೈತರ ಸಮಸ್ಯೆಗಳಿಗೆ ಸ್ಪಂಧಿಸುವ ಜೊತೆಗೆ ಪಕ್ಷ ಸಂಘಟನೆಗೆ ಹೆಚ್ಚೆಚ್ಚು ರೈತರನ್ನು ತೊಡಗಿಸಿಕೊಂಡು ಜಿಲ್ಲೆಯಾದ್ಯಂತ ಕಾಂಗ್ರೆಸ್ ಸಂಘಟನೆಗೆ ಶ್ರಮಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಬಿ.ಮಾಣಿಕರಡ್ಡಿ,ಈರಣ್ಣ ಚೌದ್ರಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
ಇದನ್ನೂ ಓದಿ: ಬೀದರ ಲೋಕಸಭಾ ಕ್ಷೇತ್ರಕ್ಕೆ ಒಟ್ಟು 14 ಕೋಟಿ 65 ಲಕ್ಷ ಅನುದಾನ ಬಿಡುಗಡೆ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…