ಬಿಸಿ ಬಿಸಿ ಸುದ್ದಿ

ಪ್ರಾಮಾಣಿಕತೆಯ ಸೇವೆಯಿಂದ ಸಾರ್ಥಕತೆ ಸಾಧ್ಯ: ನಿವೃತ್ತ ನ್ಯಾಯಾಧೀಶ ಜಿ.ಕೆ.ಗೋಖಲೆ

ನಿವೃತ್ತ ನ್ಯಾಯಾಧೀಶ ಜಿ.ಕೆ.ಗೋಖಲೆ ಅಭಿಪ್ರಾಯ | ಶಿವಪುತ್ರ ಗೊಬ್ಬೂರಕರ್ ವಯೋನಿವೃತ್ತ ಸಮಾರಂಭ

ಕಲಬುರಗಿ: ಸರ್ಕಾರಿ ನೌಕರಿ ಪಡೆಯುವುದು, ದೀರ್ಘ ಕಾಲ ನೌಕರಿ ಮಾಡುವುದೇ ದೊಡ್ಡ ಸಾಧನೆಯಲ್ಲ. ಬದಲಿಗೆ ದೊರೆತ ಹುದ್ದೆಗೆ ಪ್ರಾಮಾಣಿಕತೆ, ನಿಷ್ಠೆ ಹಾಗೂ ಕರ್ತವ್ಯಬದ್ಧತೆಯಿಂದ ಸೇವೆ ಸಲ್ಲಿಸುವುದು ಮುಖ್ಯ. ಅಂತಹ ಸೇವೆ ನಿಜಕ್ಕೂ ಸಾರ್ಥಕತೆ ಪಡೆಯಲು ಸಾಧ್ಯವಿದೆ ಎಂದು ನಿವೃತ್ತ ನ್ಯಾಯಾಧೀಶ ಜಿ.ಕೆ.ಗೋಖಲೆ ಅಭಿಪ್ರಾಯಪಟ್ಟರು.

ನಗರದ ವಿಶ್ವೇಶ್ವರಯ್ಯ ಭವನದಲ್ಲಿ ’ಗೊಬ್ಬೂರಕರ್ ಅಭಿಮಾನಿ ಗೆಳೆಯರ ಬಳಗ’ದ ವತಿಯಿಂದ ಭಾನುವಾರ ಏರ್ಪಡಿಲಾಗಿದ್ದ ’ಶಿವಪುತ್ರ ಗೊಬ್ಬೂರಕರ್ ವಯೋನಿವೃತ್ತ ಸಮಾರಂಭ’ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಉನ್ನತ ಸಾಧನೆಗೆ ನಿರಂತರ ಪ್ರಯತ್ನ ಅಗತ್ಯ. ಸಮಾಜದಲ್ಲಿ ಅನೇಕ ಪ್ರತಿಭಾವಂತರಿದ್ದಾರೆ. ಅವರನ್ನು ಗುರ್ತಿಸಿ, ಪ್ರೋತ್ಸಾಹಿಸಿ ಬೆಳೆಸುವ ಕಾರ್ಯ ಮಾಡಬೇಕು. ಹುಟ್ಟು-ಸಾವಿನ ಮಧ್ಯದ ಅವಧಿಯನ್ನು ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತಾಗಬೇಕು. ಹೆಸರು, ಹುದ್ದೆ, ಪ್ರತಿಷ್ಠೆಗಾಗಿ ಕೆಲಸ ಬೇಡ. ಗೊಬ್ಬೂರಕರ್ ಅವರ ಸೇವೆ ಮಾದರಿಯಾಗಿದೆ. ಸರ್ವರ ಕಲ್ಯಾಣಕ್ಕಾಗಿ ಇಡೀ ತಮ್ಮ ಜೀವನದುದ್ದಕ್ಕೂ ಶ್ರಮಿಸಿದ ಬುದ್ಧ-ಬಸವ-ಅಂಬೇಡ್ಕರ್ ಆದರ್ಶಗಳನ್ನು ಅಳವಡಿಸಿಕೊಂಡು ಒಗ್ಗಟ್ಟಿನಿಂದ ಸಮಾಜ ಸೇವೆ ಮಾಡಬೇಕು ಎಂದು ಅನೇಕ ಸಲಹೆ-ಸೂಚನೆಗಳನ್ನು ನೀಡಿದರು.

ಸಾನಿಧ್ಯ ವಹಿಸಿದ್ದ ಬುದ್ಧ ವಿಹಾರದ ಪೂಜ್ಯ ಸಂಘಾನಂದ ಭಂತೇಜಿ ಮಾತನಾಡಿ, ಪ್ರತಿಯೊಬ್ಬರು ಜ್ಞಾನ ಪಡೆಯಬೇಕು. ಜಾತಿಗಿಂತ ನೀತಿ, ಮಾನವೀಯತೆಗೆ ಪ್ರಾಧಾನ್ಯತೆ ನೀಡಬೇಕು. ಪರಸ್ಪರ ಪ್ರೀತಿ-ಪ್ರೇಮದಿಂದ ಸಹಬಾಳ್ವೆ ಮಾಡಬೇಕು. ಅಂಧಶೃದ್ಧೆಯಿಂದ ಹೊರಬನ್ನಿ. ಬುದ್ಧನ ಪಂಚಶೀಲ ತತ್ವಗಳು ಜೀವನಕ್ಕೆ ಬೆಳಕಾಗಿವೆ. ವ್ಯಕ್ತಿಗಿಂತ ವ್ಯಕ್ತಿತ್ವ ದೊಡ್ಡದು. ನಿಮ್ಮ ನಿವೃತ್ತಿಯ ಸಮಯವನ್ನು ಸಮಾಜದ ಒಳಿತಿಗಾಗಿ ವಿನಿಯೋಗಿಸಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಡಾ.ಸುನೀಲಕುಮಾರ ಎಚ್.ವಂಟಿ, ಶಿವರಾಯ ದೊಡ್ಡಮನಿ, ಎಂ.ಬಿ.ನಿಂಗಪ್ಪ, ಸಂಜೀವಕುಮಾರ ಶೆಟ್ಟಿ, ಎಚ್.ಬಿ.ಪಾಟೀಲ, ನರಸಪ್ಪ ಬಿರಾದಾರ ದೇಗಾಂವ, ಸೂರ್ಯಕಾಂತ ಸಾವಳಗಿ, ಅಶೋಕ ಕಾಳೆ, ಬಸವರಾಜ ಎಸ್.ಪುರಾಣೆ, ಉಮಾದೇವಿ ಎಸ್.ಗೊಬ್ಬೂರಕರ್, ರಮೇಶ ಯಾಳಗಿ, ಎ.ಬಿ.ಹೊಸಮನಿ, ಶಿವಕುಮಾರ, ಅರ್ಜುನ ಗೊಬ್ಬೂರಕರ್, ಪದ್ಮಾವತಿ, ನಾಗೇಂದ್ರಪ್ಪ ಮದನಕರ್, ಶ್ವೇತಾ, ನಾಗವೇಣಿ, ಶಶಿಕಾಂತ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

5 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

16 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

16 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

18 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

18 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

18 hours ago