ವಾಡಿ: ಅಡುಗೆ ಅನಿಲ, ಆಹಾರ ಮತ್ತು ಹಾಲು ಉತ್ಪನ್ನಗಳ ಮೇಲೆ ವಿಧಿಸಲಾದ ಜಿಎಸ್‌ಟಿ ಖಂಡಿಸಿ ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌ಯುಸಿಐ) ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ರವಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಎಸ್‌ಯುಸಿಐ (ಸಿ) ಪಕ್ಷದ ಕಾಮ್ರೇಡರು, ಕೇಂದ್ರ ಬಿಜೆಪಿ ಸರ್ಕಾರದ ಜನವಿರೋಧಿ ಕ್ರಮದ ವಿರುದ್ಧ ಘೋಷಣೆ ಕೂಗುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಸ್‌ಯುಸಿಐ ಪಕ್ಷದ ಕಾರ್ಯದರ್ಶಿ ಕಾಮ್ರೇಡ್ ವೀರಭದ್ರಪ್ಪಾ ಆರ್.ಕೆ, ಜಿಎಸ್‌ಟಿ ಎಂಬ ತಿಗಣೆ ಬಡವರ ದೇಹದ ರಕ್ತ ಹೀರುತ್ತಿದೆ. ದುಡಿಯುವ ಜನರ ಬದುಕಿನ ಮೇಲೆ ಬರೆ ಎಳೆದಿರುವ ಸರ್ಕಾರ ಅತ್ಯಂತ ಕೆಟ್ಟ ದಿನಗಳನ್ನು ಉಡುಗೊರೆಯಾಗಿ ಕೊಟ್ಟಿದೆ. ಮಕ್ಕಳು ಕುಡಿಯುವ ಹಾಲಿನ ಮೇಲೂ ಈ ಭ್ರಷ್ಟ ಸರ್ಕಾರದ ಕೆಂಗಣ್ಣು ಬಿದ್ದಿರುವುದು ಅಮಾನವೀಯವಾಗಿದೆ. ಬಡವರ ಕಷ್ಟ ಅರಿಯದ ಹೃದಯಹೀನ ಸರ್ಕಾರ ನಮ್ಮನ್ನಾಳುತ್ತಿದ್ದು, ಜನರು ಎಚ್ಚೆತ್ತುಕೊಳ್ಳಬೇಕು ಎಂದರು.
ಇದನ್ನೂ ಓದಿ: ಪ್ರಾಮಾಣಿಕತೆಯ ಸೇವೆಯಿಂದ ಸಾರ್ಥಕತೆ ಸಾಧ್ಯ: ನಿವೃತ್ತ ನ್ಯಾಯಾಧೀಶ ಜಿ.ಕೆ.ಗೋಖಲೆ
ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ದವಸದಾನ್ಯ, ಔಷಧಗಳು, ಕಟ್ಟಡ ಸಾಮಾಗ್ರಿಗಳು, ಪೇಪರ್ ದರ, ವಿದ್ಯುತ್ ದರ, ಜೀವನಾವಶ್ಯಕ ವಸ್ತುಗಳ ಬೆಲೆ ನಿರಂತರವಾಗಿ ಗಗನಕ್ಕೇರುತ್ತಿರುವುದು ಜನದ್ರೋಹಿ ಸರ್ಕಾರದ ಸಾಧನೆಯಾಗಿದೆ. ಅಪೌಷ್ಠಿಕತೆಯಿಂದ ನರಳುತ್ತಿರುವ ಮಕ್ಕಳಿಗೆ ಮತ್ತು ಗ್ರಾಮೀಣ ಪ್ರದೇಶಗಳ ಮಹಿಳೆಯರಿಗೆ ಪೌಷ್ಠಿಕಾಂಶದ ಆಹಾರ ಒದಗಿಸಬೇಕಾದ ಕೇಂದ್ರ ಸರ್ಕಾರ, ಜಿಎಸ್‌ಟಿ ಹೆಚ್ಚಿಸಿ ಹಸಿದವರ ಹೊಟ್ಟೆಗೆ ಹೊಡೆದಿದೆ. ಅಕ್ಕಿ, ಗೋದಿ, ಹಾಲು, ಮೊಸರಿನ ಮೇಲೆ ಜಿಎಸ್‌ಟಿ ಹೇರಿ ಬಡಜನರ ಮೇಲೆ ಕ್ರೂರ ಪ್ರಹಾರ ನಡೆಸಿದೆ ಎಂದು ಹರಿಹಾಯ್ದ ಕಮ್ಯುನಿಸ್ಟ್ ನಾಯಕ ಕಾಮ್ರೇಡ್ ವೀರಭದ್ರಪ್ಪಾ, ಜಿಎಸ್‌ಟಿ ರದ್ಧುಗೊಳಿಸದಿದ್ದರೆ ಉಗ್ರ ಹೋರಾಟ ಎದಿರಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಎಸ್‌ಯುಸಿಐ (ಸಿ) ಸದಸ್ಯರಾದ ಗುಂಡಣ್ಣ ಕುಂಬಾರ, ಮಲ್ಲಿನಾಥ ಹುಂಡೇಕಲ್, ಶರಣು ಹೇರೂರ, ಗೌತಮ ಪರತೂರಕರ, ಶಿವುಕುಮಾರ ಆಂದೋಲಾ, ಮಲ್ಲಣ್ಣ ದಂಡಬಾ, ವಿಠ್ಠಲ ರಾಠೋಡ, ವೆಂಕಟೇಶ ದೇವದುರ್ಗಾ, ಗೋವಿಂದ ಯಳವಾರ, ಅರುಣ ಹಿರೆಬಾನರ್, ರಾಜು ಒಡೆಯರ್, ಗೋದಾವರಿ, ಜಯಶ್ರೀ, ಶರಣಮ್ಮ, ಕೋಕಿಲಾ, ರೇಣುಕಾ, ಚೌಡಪ್ಪ ಗಂಜಿ, ದತ್ತು ಹುಡೇಕರ, ಸಿದ್ದು ಮದ್ರಿಕಿ, ಅವಿನಾಶ ಒಡೆಯರ, ಶ್ರೀಶೈಲ ಹಾಗೂ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ: ಕಲಬುರಗಿಯಲ್ಲಿ KRS ರಾಜ್ಯ ಅಧ್ಯಕ್ಷ ಕೃಷ್ಣಾ ರೆಡ್ಡಿ ಸನ್ಮಾನ
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…