ಆಹಾರ ಧಾನ್ಯದ ಮೇಲಿನ ಜಿಎಸ್‍ಟಿ ಹಿಂಪಡೆಯಿರಿ: ಮೊಬಿನ್ ಅಹಮದ್ ಆಗ್ರಹ

0
56

ಕಲಬುರಗಿ: ಕೇಂದ್ರ ಸರ್ಕಾರ‌ ಆಹಾರ ಪದಾರ್ಥ ಹಾಗೂ ಅಗತ್ಯ ವಸ್ತುಗಳ ಮೇಲೆ ಜಿಎಸ್‍ಟಿ ವಿಧಿಸಿರುವ ಕ್ರಮವನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಮೊಬಿನ್ ಅಹಮದ್ ಖಂಡಿಸಿದ್ದಾರೆ.

ಅಕ್ಕಿ, ಜೋಳ ರಾಗಿ ಮುಂತಾದ ಆಹಾರ ಧಾನ್ಯಗಳ ಮೇಲೆ, ಡೈರಿ ಉತ್ಪನ್ನಗಳ ಮೇಲೆ ಕೇಂದ್ರ ಜಿಎಸ್‍ಟಿ ಮಂಡಳಿಯು ಶೇ 5ರಷ್ಟು ತೆರಿಗೆ ವಿಧಿಸಿದ್ದು ಸರಿಯಲ್ಲ. ಈಗಾಗಲೇ ಜನರು ಬೆಲೆ ಏರಿಕೆಯಿಂದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ ಆದಾಯವೂ ಹೆಚ್ಚಳವಾಗಿಲ್ಲ. ಈಗ ತಿನ್ನುವ ಅನ್ನದ ಮೇಲೂ ತೆರಿಗೆ ವಿಧಿಸುವ ಮೂಲಕ ಕೇಂದ್ರ ಸರ್ಕಾರವು ಕ್ರೂರ ಕ್ರಮಕ್ಕೆ ಮುಂದಾಗಿದೆ ಎಂದು ದೂರಿದರು.

Contact Your\'s Advertisement; 9902492681

ಆಹಾರ ಪದಾರ್ಥಗಳ ವ್ಯಾಪಾರದಲ್ಲಿಯೂ ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲ ಮಾಡಿರುವ ಈ ತೀರ್ಮಾನ ಮಾಡುವ ಜನರನ್ನು ಸಂಕಷ್ಟಕ್ಕೀಡು ಮಾಡಿದೆ. ಕೂಡಲೇ ಆಹಾರ ಪದಾರ್ಥಗಳ ಮೇಲೆ ವಿಧಿಸಿರುವ ತೆರಿಗೆಯನ್ನು ಕೂಡಲೇ ಹಿಂಪಡೆಯಬೇಕು. ಈ ಬಗ್ಗೆ ನಿರ್ಲಕ್ಷ್ಯವಹಿಸಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here