ಬಿಸಿ ಬಿಸಿ ಸುದ್ದಿ

ರಾಜ್ಯದಲ್ಲಿ ಈ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ

ಬೆಂಗಳೂರು: ದಿನಾಂಕ:17-06-2024 ರವರೆಗೆ ಕರ್ನಾಟಕ ವಿಧಾನಪರಿಷತ್ತಿನ ಸದಸ್ಯತ್ವದ ಅವಧಿ ಹೊಂದಿದ್ದ ಸಿ.ಎಂ.ಇಬ್ರಾಹಿಂ, ಕರ್ನಾಟಕ ವಿಧಾನಪರಿಷತ್ತಿನ ಸದಸ್ಯರು, ಇವರು ವಿಧಾನ ಪರಿಷತ್ತಿನ ಸದಸ್ಯತ್ವಕ್ಕೆ 31-03-2022 ರಂದು ರಾಜೀನಾಮೆ ನೀಡಿದ ಕಾರಣಕ್ಕಾಗಿ ತೆರವಾಗಿರುವ ವಿಧಾನಪರಿಷತ್ತಿನ ಒಂದು ಸ್ಥಾನವನ್ನು ತುಂಬಲು ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ಕರ್ನಾಟಕ ವಿಧಾನಪರಿಷತ್ತಿಗೆ ಉಪ ಚುನಾವಣೆಯನ್ನು ನಡೆಸಲು ಭಾರತದ ಚುನಾವಣಾ ಆಯೋಗವು ನಿರ್ಧರಿಸಿದೆ.

ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸುವ ದಿನಾಂಕ 25 ಜುಲೈ, 2022 ಸೋಮವಾರ, ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ 01 ಆಗಸ್ಟ್, 2022 ಸೋಮವಾರ, ನಾಮಪತ್ರ ಪರಿಶೀಲನೆ 02ಆಗಸ್ಟ್, 2022 ಮಂಗಳÀವಾರ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ   04 ಆಗಸ್ಟ್, 2022 ಗುರುವಾರ, ಮತದಾನದ ದಿನಾಂಕ 11 ಆಗಸ್ಟ್ 2022 ಗುರುವಾರ, ಮತದಾನದ ಸಮಯ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ, ಮತಗಳ ಎಣಿಕೆ 11 ಆಗಸ್ಟ್ 2022 ಗುರುವಾರ ಸಂಜೆ 5 ಗಂಟೆಯಿಂದ, ಚುನಾವಣೆ ಮುಕ್ತಾಯವಾಗುವ ದಿನಾಂಕ 16 ಆಗಸ್ಟ್ 2022 ಮಂಗಳವಾರ.

ಈ ಉಪÀ ಚುನಾವಣೆಗೆ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳಾದ ಶ್ರೀಮತಿ ಎಂ.ಕೆ.ವಿಶಾಲಾಕ್ಷಿ ಅವರು ಚುನಾವಣಾಧಿಕಾರಿಯಾಗಿ ಹಾಗೂ ಕರ್ನಾಟಕ ವಿಧಾನಸಭೆಯ   ಉಪಕಾರ್ಯದರ್ಶಿಗಳಾದ ಬಿ.ಎಸ್. ಮಹಾಲಿಂಗೇಶ್ ಅವರು ಸಹಾಯಕ ಚುನಾವಣಾಧಿಕಾರಿಯಾಗಿರುತ್ತಾರೆ.

ಚುನಾವಣೆಗೆ ಸ್ಪರ್ಧಿಸಲಿಚ್ಚಿಸುವ ಅಭ್ಯರ್ಥಿಗಳು ಜುಲೈ 25, 2022 ರಿಂದ ಜುಲೈ 01, 2022 ರವರೆಗೆ ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿಯವರ ಕಛೇರಿಯಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದಾಗಿದ್ದು, 31 ಜುಲೈ 2022 ರಂದು ಭಾನುವಾರ ಸಾರ್ವತ್ರಿಕ ರಜಾ ದಿನವನ್ನು ಹೊರತುಪಡಿಸಿ, ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ.

ಪ್ರತಿಯೊಬ್ಬ ಅಭ್ಯರ್ಥಿಯು ತಮ್ಮ ನಾಮಪತ್ರದ ದಸ್ತಾವೇಜನ್ನು ನಿಗದಿತ ನಮೂನೆ 2ಡಿ ಯಲ್ಲಿ ಸಲ್ಲಿಸಬೇಕು. ಮತ್ತು ಅವರ ಉಮೇದುವಾರಿಕೆಗೆ ಸೂಚಕರಾಗಿ ಕನಿಷ್ಠ ಹತ್ತು ಜನ ಹಾಲಿ ವಿಧಾನಸಭಾ ಸದಸ್ಯರು ಸಹಿ ಮಾಡಿರಬೇಕು. ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ನಾಮಪತ್ರದೊಂದಿಗೆ ರೂ. 5,000/- ಗಳನ್ನು ಹಾಗೂ ಇತರ ಅಭ್ಯರ್ಥಿಗಳು ರೂ. 10,000/- ಗಳನ್ನು ಠೇವಣಿ ಇಡಬೇಕಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಚುನಾವಣಾಧಿಕಾರಿ / ಸಹಾಯಕ ಚುನಾವಣಾಧಿಕಾರಿಯವರನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

7 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

7 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

9 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

9 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

9 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

9 hours ago