ಕಲಬುರಗಿ: ಕಾರ್ಗಿಲ್ ವಿಜಯೋತ್ಸವವನ್ನು ಈ ಬಾರಿ ಜೈ ಭಾರತ ಮಾತಾ ಸೇವಾ ಸಮಿತಿ (ರಿ) ನವ ದೆಹಲಿಯ ವತಿಯಿಂದ ಜೇವರ್ಗಿ ಪಟ್ಟಣದಲ್ಲಿ ಸಂಭ್ರಮದಿಂದ ಆಚರಿಸಲು ಸಮಿತಿಯೂ ಸಕಲ ಸಿದ್ಧತೆ ಮಾಡಿಕೊಂಡಿದ್ದು ವಿಶೇಷವಾಗಿ ಈ ಬಾರಿ ಈ ಉತ್ಸವದಲ್ಲಿ ಸುಮಾರು ೧. ಕಿ.ಮೀ. ಉದ್ದದ ರಾಷ್ಟ್ರ ಧ್ವಜದ ಭವ್ಯ ಮೆರವಣಿಗೆ ಮಾಡುವದರ ಮೂಲಕ ಸಕಲ ದೇಶ ಬಾಂಧವರಲ್ಲಿ ಭಾರತದ ರಾಷ್ಟ್ರ ಧ್ವಜದ ಬಗ್ಗೆ ಗೌರವ ಮತ್ತು ಅಭಿಮಾನ ಮೂಡಿಸಲಾಗುವುದು.
ಜೇವರ್ಗಿ ಪಟ್ಟಣವು ಕಲಬುರಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಗಡಿಭಾಗದಲ್ಲಿರುವದರಿಂದ ಈ ಬಾರಿಯ ಕಾರ್ಗಿಲ್ ವಿಜಯೋತ್ಸವ ಜೇವರ್ಗಿ ಪಟ್ಟಣದಲ್ಲಿ ಸಕಲ ದೇಶಬಾಂಧವರ ವತಿಯಿಂದ ಸಮಿತಿಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ಹವಾ ಮಲ್ಲಿನಾಥ ಮಹಾರಾಜ ನಿರಗುಡಿ ಅವರ ನೇತೃತ್ವದಲ್ಲಿ ಆಚರಿಸಲಾಗತ್ತಾಯಿದ್ದು ಈ ದೇಶ ಭಕ್ತಿ ಉತ್ಸವದಲ್ಲಿ ಜೇವರ್ಗಿ, ಕಲಬುರಗಿ, ವಿಜಯಪುರ ಹಾಗೂ ಯಾದಗಿರಿ ಸೇರಿದಂತೆ ವಿವಿಧ ಭಾಗಗಳಿಂದ ಆಪಾರ ಸಂಖ್ಯೆಯಲ್ಲಿ ದೇಶ ಬಾಂಧವರು ಭಾಗವಹಿಸಲಿದ್ದಾರೆಂದು ಸಮಿತಿ ರಾಷ್ಟ್ರೀಯ ವಕ್ತಾರ ವೈಜನಾಥ ಎಸ್.ಝಳಕಿ ಪ್ರಕಟಣೆ ಮೂಲಕ ಕೋರಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…