ಆಳಂದ: ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದಎಸ್‌ಆರ್‌ಜಿಆಂಗ್ಲ್ ಮಾಧ್ಯಮ ಶಾಲೆಯಿಂದ ನಗರದ ಪ್ರಮುಖ ಸ್ಥಳಗಳಲ್ಲಿ ಕಾರ್ಗಿಲ್ ವಿಜಯೋತ್ಸವ ದಿನ ಆಚರಣೆ ಮಾಡುವುದರ ಮೂಲಕ ವೀರಯೋಧರಿಗೆಗೌರವ ಸಲ್ಲಿಸಲಾಯಿತು.
ಆಳಂದ ಪಟ್ಟಣದ ಶ್ರೀರಾಮ ಮಾರುಕಟ್ಟೆಆವರಣ ಹಾಗೂ ಹಳೆಯ ತಹಸೀಲ ಕಚೇರಿಯ ಮುಂದೆ ಸೇರಿದ ನೂರಾರು ಸಂಖ್ಯೆಯ ವಿದ್ಯಾರ್ಥಿಗಳು ದೇಶಭಕ್ತಿಯ ಗೀತೆಗಳಿಗೆ ನೃತ್ಯ ಮಾಡುವುದರ ಮೂಲಕ ಯೋಧರಿಗೆಗೌರವ ಸಲ್ಲಿಸಿ ಕಾರ್ಗಿಲ್ ವಿಜಯೋತ್ಸವ ದಿನ ಆಚರಿಸಿದರು.
ವೀರ ಮರಣ ಹೊಂದಿದಯೋಧರ ಭಾವಚಿತ್ರಗಳು ಹಾಗೂ ದೇಶ ಪ್ರೇಮದ ಭಿತ್ತಿ ಪತ್ರಗಳು ಸಾರ್ವಜನಿಕರ ಗಮನ ಸೆಳೆದವು.ಜಿಟಿಜಿಟಿ ಮಳೆಯಲ್ಲೂ ಉತ್ಸಾಹದಿಂದ ನೃತ್ಯ ಮಾಡಿದ ವಿದ್ಯಾರ್ಥಿಗಳನ್ನು ಕಂಡು ಸಾರ್ವಜನಿಕರು ಪ್ರಶಂಸೆಯ ಸುರಿಮಳೆಗೈದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಲಾಡಮುಗಳಿಯ ಅಭಿನವ ಬಸವಲಿಂಗ ಸ್ವಾಮೀಜಿ, ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ದೇಶಪ್ರೇಮ ಬೆಳಸಿದರೆ ಮುಂದೆ ಮಕ್ಕಳು ದೇಶ ಸೇವೆಯಲ್ಲಿಅಭಿಮಾನದಿಂದ ಪಾಲ್ಗೊಳ್ಳುತ್ತಾರೆ ಎಂದುಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹಾಯಕ ಆಡಳಿತಾಧಿಕಾರಿ ಹಾಗೂ ಕಸಾಪ ಅಧ್ಯಕ್ಷ ಹಣಮಂತ ಶೇರಿ, ಶಾಲೆಯ ಪ್ರಾಚಾರ್ಯೆಜ್ಯೋತಿ ವಿಶಾಕ್ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…