ಆಳಂದ: ವಚನ ಸಾಹಿತ್ಯಕ್ಕೆಅಪಾರಕೊಡುಗೆ ನೀಡಿರುವ ಫ ಗುಹಳಕಟ್ಟಿಯವರು ಕೇವಲ ಸಂಶೋಧಕಆಗಿರದೆ ಅವರೊಬ್ಬ ಕನ್ನಡ ಸಾಹಿತ್ಯದ ಅಮೂಲ್ಯರತ್ನರಾಗಿದ್ದರು ಎಂದು ಉಪನ್ಯಾಸಕ ಸಂಜಯ ಪಾಟೀಲ ಅಭಿಪ್ರಾಯಪಟ್ಟರು.
ಬುಧುವಾರ ಆಳಂದ ಪಟ್ಟಣದ ಸರ್ಕಾರಿ ಪ್ರಥಮದರ್ಜೆಕಾಲೇಜಿನಲ್ಲಿತಾಲೂಕುಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಫ.ಗು ಹಳಕಟ್ಟಿಯವರ ಬದುಕು ಬರಹದ ವಿಶೇಷ ಉಪನ್ಯಾಸಕಾರ್ಯಕ್ರಮದಲ್ಲಿಅವರು ಮಾತನಾಡಿದರು.
ಅಂದು ವಚನಸಾಹಿತ್ಯದ ಹಸ್ತಪ್ರತಿಗಳಿಗಾಗಿ, ಓಲೆಗರಿ ಗ್ರಂಥಗಳಿಗಾಗಿ ಹುಡುಕಾಡದ ಊರುಗಳಿಲ್ಲ, ತಡಕಾಡದ ಕೇರಿಗಳಿಲ್ಲ, ಅನ್ವೇ?ಣೆಗೈಯದ ಆಲಯಗಳಿಲ್ಲ, ಸಂಶೋಧನೆ ನಡೆಸದ ಸ್ಥಳಗಳಿಲ್ಲವೆನ್ನಬಹುದು. ದುರೀತಿಯಲ್ಲಿಇದಕ್ಕಾಗಿದೇಶಸುತ್ತಿದವರಿವರು. ಜಗತ್ತನ್ನೇಅಲೆದವರಿವರು. ಹೀಗೆ ತಿರುತಿರುಗಿತಾವುತಂದು ಸಂಗ್ರಹಿಸಿದ ಹಸ್ತ ಪ್ರತಿರೂಪದ ವಚನರಾಶಿಯನ್ನು ೧೯೨೦ ರಲ್ಲಿ ಬಿಜಾಪುರದಲ್ಲಿ ಪರೀಕ್ಷಿಸಿಇದರ ಮೌಲ್ಯವನ್ನುಇಂಚಿಂಚೂ ಬಿಡದಂತೆಎಲ್ಲರಿಗೂಇವರು ತಿಳಿಸಿದರು ಎಂದು ಹೇಳಿದರು.
ಇದನ್ನೂ ಓದಿ: ಕಳ್ಳಭಟ್ಟಿ ಸರಾಯಿ- ಕಲಬೆರಕಿ ಸೇಂದಿ ವಶಪಡಿಸಿಕೊಂಡ ಅಬಕಾರಿ ಪೊಲೀಸರು
ಆ ಕಾಲದಲ್ಲಿದು ಶರಣರ ನಾಡಿನಲ್ಲಿ ಭಾರಿ ಸಂಚಲನ ಉಂಟುಮಾಡಿತ್ತು.ಆ ನಂತರ ಹಸ್ತಪ್ರತಿರೂಪದಲ್ಲಿದ್ದ ಈ ವಚನಸಂಪತ್ತನ್ನು ಸಂಪಾದಿಸಿ ಮುದ್ರಿಸಿ ಪುಸ್ತಕರೂಪದಲ್ಲಿ ಹೊರತರಲು ಮುಂದಾದಇವರುಇದಕ್ಕಾಗಿ ೧೯೨೫ ರಲ್ಲಿತಮ್ಮ ಸ್ವಂತಮನೆ ಮಾರಿ ಹಿತಚಿಂತಕ ಮುದ್ರಣಾಲಯವನ್ನು ಪ್ರಾರಂಭಿಸಿದರು.ಅಲ್ಲಿಂದ ವಚನ ಸಾಹಿತ್ಯ ಕೃತಿಗಳ ಸುರಿಮಳೆಯೇ ಶುರುವಾಯಿತು.ನಿಜಕ್ಕೂ ಆಗ ಹಳಕಟ್ಟಿಯವರಿಂದ ವಚನಕ್ರಾಂತಿಯೇ ನಡೆದಿತ್ತುಎಂದು ನುಡಿದರು.
ಹಳಕಟ್ಟಿಯವರು ಸಂಪಾದಿಸಿ ಪ್ರಕಟಿಸಿದ ಒಂದೊಂದು ವಚನಸಂಕಲನದಕೃತಿಯೂ ಇಂದಿಗೂ ಸಾರಸ್ವತ ಲೋಕದ ಮಾಣಿಕ್ಯಗಳೇ ಆಗಿವೆ. ಹಳಕಟ್ಟಿಯವರು ತಾಳೆಯೋಲೆಗಳನ್ನು ಸಂಗ್ರಹಿಸುವುದಕ್ಕೆ ಮೊದಲು ಕವಿ ಚರಿತೆಕಾರರು ಗುರುತಿಸಿದ್ದು ಕೇವಲ ೫೦ ವಚನಕಾರರನ್ನು ಮಾತ್ರ.ಫ.ಗು. ಹಳಕಟ್ಟಿಯವರು ತಮ್ಮ ಸಂಶೋಧನೆಯ ಮೂಲಕ ೨೫೦ಕ್ಕೂ ಹೆಚ್ಚು ವಚನಕಾರರನ್ನು ಬೆಳಕಿಗೆ ತಂದರು. ಜೊತೆಗೆ ಹರಿಹರನ ೪೨ ರಗಳೆಗಳನ್ನು ಸಂಶೋಧಿಸಿ ಪ್ರಕಟಿಸಿದ ಸಾಧನೆ ಹಳಕಟ್ಟಿಯವರಿಗೆ ಸಲ್ಲುತ್ತದೆಎಂದುಅಭಿಪ್ರಾಯಪಟ್ಟರು.
ಇದನ್ನೂ ಓದಿ: ಕಲಬುರಗಿ-ಸಂಸದರ ಸಹೋದರ ಸರಕಾರಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ : ರಾಜೀನಾಮೆಗೆ ಪಟ್ಟು
ತಾಲೂಕು ಕಸಾಪ ಅಧ್ಯಕ್ಷ ಹಣಮಂತ ಶೇರಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯ ಮೇಲೆ ಡಾ.ರವಿ ಕಂಟೆಕುರೆ, ಪ್ರಭಾಕರ ಸಲಗರೆ, ಶಾಂತಪ್ಪಕೋರೆ ಉಪಸ್ಥಿತರಿದ್ದರು. ಉಪನ್ಯಾಸಕಡಾ.ರಾಜಕುಮಾರ ಹಿರೇಮಠ ನಿರೂಪಿಸಿ ವಂದಿಸಿದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…