ಕಲಬುರಗಿ: ಇಲ್ಲಿನ ಹೊರವಲಯದಲ್ಲಿ ಇರುವ ಸೆಂಟ್ರಲ್ ಜೈಲ್ ನಲ್ಲಿ ವಿದ್ಯುತ್ ಅವಘಡ ಸಂಭವಿಸಿ ಇಬ್ಬರು ಖೈದಿಗಳು ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಮೊಹಮ್ಮದ್ ಫಾರುಕ್ ಅಹ್ಮದ್ ಸಾಬ್ (40), ಸಾಹಿಲ್ ಅಲ್ತಾಫ್ ಹುಸೇನ್ (32) ಗಾಯಗೊಂಡ ಖೈದಿಗಳು ಎನ್ನಲಾಗಿದೆ. ಇಬ್ಬರೂ ಹುಬ್ಬಳ್ಳಿ ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ.
ಸಿಡಿಲು ಬಡೆದು ಸೆಂಟ್ರಲ್ ಜೈಲ್ ನ ಮರದ ಮೇಲೆ ವಿದ್ಯುತ್ ತಂತಿಗಳು ಬಿದ್ದಿರುವ ಪರಿಣಾಮ ಇಬ್ಬರು ಗಾಯಗೊಂಡು, ಗಾಯಗೊಂಡ ಖೈದಿಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಓಪಿಡಿ ಮಾಡಿಸಿ ನಂತರ ಡಿಸ್ ಚಾರ್ಜ್ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಈ ಕುರಿತು ಜಿಲ್ಲಾ ಆಸ್ಪತ್ರೆಯ ವೈದ್ಯರು ಯಾವುದೇ ಮಾಹಿತಿ ನಮಗಿಲ್ಲ ಎಂದು ತಿಳಿಸಿದ್ದು, ಸಿಡಿಲು ಬಡೆದಿರುವುದರಿಂದ ಜೈಲ್ ನಲ್ಲಿ ವಿದ್ಯುತ್ ಸಂಪರ್ಕ ನಿಂತು ಹೋಗಿತ್ತು ಎಂದು ಜೈಲು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…