ಸಂಸದ ಜಾಧವ್ ಅವರಿಂದ ಪತ್ರಕರ್ತರ ಸಂಘಕ್ಕೆ 10 ಲಕ್ಷ ರೂ. ಅನುದಾನ ಘೋಷಣೆ

0
284
ಪತ್ರಿಕಾ ದಿನಾಚರಣೆ; ಐವರು ಪತ್ರಕರ್ತರಿಗೆ ಕಾಗಲ್ಕರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಕಾರ್ಯನಿರತ ಪತ್ರಕರ್ತರ ಸಂಘದ ಅಭಿವೃದ್ಧಿ ಕಾರ್ಯಗಳಿಗೆ ಅನುಕೂಲ ಆಗುವಂತೆ ಸಂಸದರ ನಿಧಿಯಿಂದ ರೂ.10 ಲಕ್ಷ ಅನುದಾನ ನೀಡುವುದಾಗಿ ಸಂಸದ ಡಾ.ಉಮೇಶ್ ಜಾಧವ್ ಘೋಷಿಸಿದರು.

Contact Your\'s Advertisement; 9902492681

ಇಲ್ಲಿನ ಪತ್ರಿಕಾ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಕರ್ತರ ಪ್ರಾಮಾಣಿಕ ಸೇವೆಯ ಕಾರಣದಿಂದ ಅಭಿವೃದ್ಧಿಗೆ ವೇಗ ದೊರೆಯುತ್ತದೆ. ಈ ನಿಟ್ಟಿನಲ್ಲಿ ಕಲಬುರಗಿ ಜಿಲ್ಲಾ ಪತ್ರಕರ್ತರ ಕೊಡುಗೆ ಅಪಾರ ಎಂದು ಅವರು ಬಣ್ಣಿಸಿದರು.

ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಅವರು
ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರ ಜಯತೀರ್ಥ ಪಾಟೀಲ್, ಕನ್ನಡ ಪ್ರಭ ಪತ್ರಿಕೆಯ ಹಿರಿಯ ವರದಿಗಾರ ಶೇಷಮೂರ್ತಿ ಅವಧಾನಿ, ಕಲ್ಯಾಣನಾಡು ಪತ್ರಿಕೆಯ ಸಿದ್ದಣ್ಣ ಮಾಲಗಾರ, ಈರಣ್ಣಗೌಡ ಪಾಟೀಲ್ ಯಡ್ಡಳ್ಳಿ, ಬುದ್ದಲೋಕ ಪತ್ರಿಕೆಯ ದೇವಿಂದ್ರಪ್ಪ ಕಪನೂರ್ ಅವರಿಗೆ ದಿವಂಗತ ವಿ.ಎನ್.ಕಾಗಲಕರ್ ಪ್ರಶಸ್ತಿ ಪ್ರದಾನ ಮಾಡಿದರು.

ಇದೇವೇಳೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗೆ ಪಾತ್ರರಾದ ಪತ್ರಕರ್ತರಾದ ಮಲ್ಲಿಕಾರ್ಜುನ ಗೌರ್, ಇಂದ್ರಜಿತ್ ರಾಠೋಡ್, ಪ್ರಭುಲಿಂಗ ನೀಲೂರೆ, ಮನೋಜ್ ಕುಮಾರ್ ಗುದ್ದಿ, ಅನಿಲ್ ಸ್ವಾಮಿ, ಪ್ರವೀಣ ಪಾರಾ, ಛಾಯಾಗ್ರಾಹಕ ರಾಜು ಕೋಷ್ಠಿ, ಬಿ.ವಿ.ಚಕ್ರವರ್ತಿ, ಚಂದ್ರಶೇಖರ ಕವಲಗಾ, ಭೀಮಾಶಂಕರ ಫಿರೋಜಾಬಾದ್, ವೆಂಕಟೇಶ ಹರವಾಳ, ಸೂರ್ಯಕಾಂತ ಜಮಾದಾರ್, ಮೊಹ್ಮದ್ ಜಾವೇದ್ ಅವರಿಗೆ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು‌.

ಇನ್ನು ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಮಂಡಳಿ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಜಿಲ್ಲಾಧ್ಯಕ್ಷ ಬಾಬುರಾವ್ ಯಡ್ರಾಮಿ, ಕಾರ್ಯದರ್ಶಿ ಸಂಗಮನಾಥ ರೇವತಗಾಂವ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಶಿವರಂಜನ ಸತ್ಯಂಪೇಟ ವೇದಿಕೆಯಲ್ಲಿದ್ದರು.

ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಪತ್ರಕರ್ತರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಕಲಬುರಗಿ ಜಿಲ್ಲೆಯ ಪತ್ರಕರ್ತರಿಗೆ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿವೇಶನ ನೀಡುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಹಾಗೂ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ನುಡಿದರು. ಪತ್ರಿಕಾ ದಿನಾಚರಣೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು‌.

ಪತ್ರಿಕಾ ಧರ್ಮಕ್ಕೆ ಬುದ್ಧ ಬಸವ ಅಂಬೇಡ್ಕರ್ ಮಾತ್ರ ಮಾದರಿ ಆಗಿರಬೇಕು ಎಂದು ಹಿರಿಯ ಪತ್ರಕರ್ತ ಶಶಿಧರ ಭಟ್ ನುಡಿದರು. ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಪ್ರಮುಖ ಭಾಷಣಕಾರರಾಗಿ ಮಾತನಾಡಿದ ಅವರು, ಇಂದಿನ ಬಹುತೇಕ ಪತ್ರಕರ್ತರಿಗೆ ಈ ಮೂವರೂ ಮಹನೀಯರು ಆದರ್ಶ ಎನಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here