ಬಿಸಿ ಬಿಸಿ ಸುದ್ದಿ

ರಾಷ್ಟ್ರೀಯ ಶಿಕ್ಷಣ ನೀತಿ ಉದ್ದೇಶ ದೇಶದ ಪರಂಪರೆ ಪರಿಚಯಿಸುವುದು:ಡಾ.ಟಿ.ವಿ ಕಟ್ಟಿಮನಿ

ಕಲಬುರಗಿ: ರಾಷ್ಟ್ರೀಯ ಶಿಕ್ಷಣ ನೀತಿ ಮುಖ್ಯ ಉದ್ಯೇಶ ಮೂಲಜ್ಞಾನವನ್ನು ಪರಿಚಯಿಸುವುದು. ಭಾರತ ದೇಶದ ಪರಂಪರೆ ಸಂಸ್ಕೃತಿ, ಶ್ರೀಮಂತ ಸಂಪ್ರದಾಯವನ್ನು ಅಸ್ತಿತ್ವದಲ್ಲಿರುವ ಶಿಕ್ಷಣ ನೀತಿಗೆ ಪ್ರಮುಖ ಆಧಾರವಾಗಿವೆ. ಎಂದು ಮಧ್ಯಪ್ರದೇಶದ ಇಂದಿರಾಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಉಪಕುಲಪತಿ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಸಮಿತಿ ಸದಸ್ಯ ಪ್ರೊ.ಟಿ.ವಿ. ಕಟ್ಟಿಮನಿ ಹೇಳಿದರು.

ನಗರದ ಶರಣಬಸವ ವಿಶ್ವವಿದ್ಯಾಲಯದ ವಿ.ವಿಯ ದೊಡ್ಡಪ್ಪ ಅಪ್ಪಾ ಸಭಾ ಮಂಟಪದಲ್ಲಿ ಭಾನುವಾರ ಆಯೋಜಿಸಿದ ಎರಡನೇಯ ವಿಚಾರಸಂಕಿರಣದಲ್ಲಿ ’ರಾಷ್ಟ್ರೀಯ ಶಿಕ್ಷಣ ನೀತಿ’ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು ನಮ್ಮ ಹಿರಿಯರು ರಚಿಸಿದ ಶ್ರೀಮಂತ ಸಂಪ್ರದಾಯ ಮತ್ತು ಅದರ ಜ್ಞಾನದ ಮೂಲವು ಪಠ್ಯದಲ್ಲಿ ಸ್ಥಾನ ಪಡೆದಿಲ್ಲ. ಹಿಂದಿನ ಯುಗದ ನಮ್ಮ ಹಿರಿಯರು ಮತ್ತು ವಿಜ್ಞಾನಿಗಳು ಪ್ರತಿಪಾದಿಸಿದ ತತ್ವಗಳು ನಮ್ಮ ಪಠ್ಯದಲ್ಲಿ ಅಳವಡಿಸಿಲ್ಲ. ಪರಿಣಾಮ ನಮ್ಮ ಶಿಕ್ಷಣ ಗುಣಮಟ್ಟ ಕುಸಿಯುತ್ತಿದೆ ಎಂದು ಡಾ.ಕಟ್ಟಿಮನಿ ಬೇಸರ ವ್ಯಕ್ತಪಡಿಸಿದರು.

ಪ್ರಸ್ತುತ ಶಿಕ್ಷಣ ವ್ಯವಸ್ಥೆಯು ನಮ್ಮ ದೇಶದೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಮತ್ತು ಇದು ಬ್ರಿಟಿಷರು ತಮ್ಮ ಅಗತ್ಯಕ್ಕೆ ತಕ್ಕಂತೆ ರಚಿಸಿದ ಶಿಕ್ಷಣವನ್ನು ನಾವು ಅಧ್ಯಯನ ಮಾಡುತ್ತಿದ್ದೇವೆ. ಇದು ಸ್ವಾತಂತ್ರ್ಯದ ನಂತರವೂ ಬದಲಾಗದೆ ಮುಂದುವರಿಯುತ್ತಿರುವುದು ವಿಷಾದದ ಸಂಗತಿ. ಇಂದಿನ ವಿದ್ವಾಂಸರು ಇಂಗ್ಲೆಂಡ್ ಇತಿಹಾಸ ಮತ್ತು ಇಂಗ್ಲೀಷ್ ಲೇಖಕರ ಕೃತಿಗಳ ಬಗ್ಗೆ ಚೆನ್ನಾಗಿ ತಿಳಿದಿದ್ದಾರೆ. ಆದರೆ ಪಂಪ ಮತ್ತು ಭಾರತೀಯ ಲೇಖಕರ ಶ್ರೇಷ್ಠ ಕೃತಿಗಳ ಬಗ್ಗೆ ಅವರಿಗೆ ತಿಳಿದಿಲ್ಲ ಎಂದು ಅಭಿಪ್ರಾಯಪಟ್ಟರು.

ಭಾರತೀಯ ಸಂಶೋಧಕರು ಮೊದಲು ಮೂಲ ಆಯುರ್ವೇದದಂತಹ ಸಂಶೋಧನೆ ಮಾಡಬೇಕಾಗಿದೆ. ಇದರಿಂದ ಭಾರತ ಶ್ರೀಮಂತ ರಾಷ್ಟ್ರವಾಗುತ್ತದೆ. ಇದರ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಪರಿಚಯ ಮಾಡಿಕೊಳ್ಳುವುದಕ್ಕೆ ಸಾಧ್ಯ. ನೋಬೆಲ್ ಪ್ರಶಸ್ತಿ ಬರಬೇಕಾದರೆ ಭಾರತದ ಮೂಲ ಅಧ್ಯಯನ ನಡೆಯಬೇಕಾಗಿದೆ ಎಂದು ಯುವ ಸಂಶೋಧಕರಿಗೆ ಸಲಹೆ ನೀಡಿದರು.

ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ಮಾತೃಭಾಷೆಯಲ್ಲೆ ನೀಡುವುದರಿಂದ ದೇಶದ ಪರಂಪರೆ ತಿಳಿದುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ. ಪರಿಣಾಮ ದೇಶದ ಅಭಿವೃದ್ಧಿಗೆ ಪೂರಕವಾಗುತ್ತದೆ. ಶಿಕ್ಷಕರಿಗೆ ಬೇರೆ ಕೆಲಸ ನೀಡದೇ ಅವರಿಗೆ ಸ್ವಾತಂತ್ರವಾಗಿ ಪಾಠ ಮಾಡುವುದಕ್ಕೆ ಅವಕಾಶ ನೀಡಬೇಕು. ಮತ್ತು ಅವರಿಗೆ ನಿರಂತರ ತರಬೇತಿ ನೀಡಬೇಕು. ಇದು ರಾಷ್ಟ್ರೀಯ ಶಿಕ್ಷಣ ನೀತಿಯ ಮುಖ್ಯ ಉದ್ದೇಶವಾಗಿದೆ. ಹಾಗೂ ಅನ್ಯ ವಿಷಯದ ಮೇಲೆ ಸಂಶೋಧನೆ ಮಾಡುವ ಬದಲು ಈ ಭಾಗದಲ್ಲಿರುವ ಅಶುದ್ಧ ಕುಡಿಯುವ ನೀರಿನ ಸಮಸ್ಯೆ ಕುರಿತು ಸಂಶೋಧನೆ ಮಾಡುವುದಕ್ಕೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಬೇಕು ಎಂದು ಡಾ.ಕಟ್ಟಿಮನಿ ಅಭಿಪ್ರಾಯಪಟ್ಟರು. ವಿಶ್ವವಿದ್ಯಾಲಯದ ಸಮ ಕುಲಪತಿ ಪ್ರೊ.ವಿ.ಡಿ.ಮೈತ್ರಿ ಅಧ್ಯಕ್ಷತೆ ಭಾಷಣ ಮಾಡಿದರು.

ಈ ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಹಾಗೂ ವಿಶ್ವವಿದ್ಯಾಲಯದ ಕುಲಸಚಿವ ಡಾ. ಅನೀಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ, ಡೀನ್ ಡಾ. ಲಕ್ಷ್ಮಿ ಪಾಟೀಲ ಹಾಗೂ ವಿಶ್ವವಿದ್ಯಾಲಯದ ವಿವಿಧ ವಿಭಾಗದ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago