ಕಲಬುರಗಿ: ಅಂಗಡಿಗಳನ್ನು ತೆರವುಗೊಳಿಸಿರುವುದನ್ನು ಖಂಡಿಸಿ ಬೀದಿಬದಿ ವ್ಯಾಪಾರಿಗಳು ಸೋಮವಾರ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಟ್ರಾಫಿಕ್‌ಕಿರಿಕಿರಿ ಸರಿಪಡಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಸಿಬ್ಬಂದಿ ನಗರದ ಸೂಪರ್ ಮಾರ್ಕೆಟ್‌ನಲ್ಲಿ ಪುಟ್ಬಾತ್ ಹಾಗೂ ರಸ್ತೆಯ ಬದಿಯಲ್ಲಿಗೂಡಂಗಡಿ ಹಾಗೂ ತಳ್ಳು ಬಂಡಿಗಳನ್ನು ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳನ್ನು ತೆರವುಗೊಳಿಸಿದಕ್ಕೆ ಆಕ್ರೋಶಗೊಂಡ ವ್ಯಾಪರಸ್ಥರುಜೆಡಿಎಸ್ ಪಕ್ಷದ ನೇತೃತ್ವದಲ್ಲಿ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಅಸಮಾಧಾನ ಹೊರಹಾಕಿದರು.
ಕಳೆದ ಹಲವು ವರ್ಷಗಳಿಂದ ನಾವುಗಳು ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ತಳ್ಳುಬಂಡಿಯಲ್ಲಿ ಸಣ್ಣಪುಟ್ಟ ವ್ಯಾಪಾರ ನಡೆಸಿಕೊಂಡು ಜೀವನ ನಡೆಸುತ್ತಿದ್ದೆವೆ. ಏಕಾಏಕಿ ಅಂಗಡಿಗಳನ್ನು ತೆರವುಗೊಳಿಸಿದರೆ ನಾವು ಜೀವನ ನಡೆಸುವುದುತುಂಬ ಕಷ್ಟವಾಗುತ್ತದೆ.ಹೀಗಾಗಿ ನಮ್ಮಗೆ ವ್ಯಾಪಾರ ನಡೆಸಲು ಅವಕಾಶ ಮಾಡಿಕೊಡಿ.ಇಲ್ಲವಾದರೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಎಂದು ಆಗ್ರಹಿಸಿದರು.