ಪತ್ರಿಕಾ ದಿನಾಚರಣೆ ಮತ್ತು ಸಂವಾದ ಕಾರ್ಯಕ್ರಮ 30 ರಂದು

0
60

ಕಲಬುರಗಿ: ಕರ್ನಾಟಕ ರಾಜ್ಯ ಜಿಲ್ಲಾ ಮತ್ತು ಮಾಧ್ಯಮ ಪತ್ರಿಕೆಗಳ ಸಂಪಾದಕರ ಸಂಘ (ರಿ) ಜಿಲ್ಲಾ ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಸಂವಾದ ಕಾರ್ಯಕ್ರಮ ಜುಲೈ 30ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ಹಾವನೂರ, ಉಪಾಧ್ಯಕ್ಷ ವಿ.ಎನ್. ಮಲ್ಲಿಕಾರ್ಜುನ ತಿಳಿಸಿದ್ದಾರೆ.

ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಸಿದ್ಧೇಶ್ವರಪ್ಪ ಬಿ.ಜಿ. ಅತಿಥಿಗಳಾಗಿ ಆಗಮಿಸಲಿದ್ದಾರೆ. ಜಿಲ್ಲಾ ಸಂಪಾದಕರ ಸಂಘದ ಅಧ್ಯಕ್ಷ ಶರಣಬಸಪ್ಪ ಕೆ.ಎಚ್. ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಇದೇವೇಳೆಯಲ್ಲಿ ಸತ್ಯಕಾಮ ಸಂಪಾದಕ ಪಿ.ಎಂ.‌ಮಣ್ಣೂರ, ಜೈ ಭೀಮ ಗಧೆ ಸಂಪಾದಕ ಶಂಕರ ಕೋಡ್ಲಾ, ವಿಶ್ವ ಪ್ರಚಾರ ಸಂಪಾದಕ ವೆಂಕಟರಾವ ಖಮೀತ್ಕರ್, ಬಹಮನಿ ನ್ಯೂಸ್ ಸಂಪಾದಕ ಅಜೀಜುಲ್ಲಾ ಸರಮಸ್ತ್ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here