ಕಲಬುರಗಿ: ಖೇಲೋ ಇಂಡಿಯಾ ಯೋಜನೆಯಡಿ ಅಥ್ಲೇಟಿಕ್ ಕ್ರೀಡೆಯ ತರಬೇತಿಗಾಗಿ ಆಯ್ಕೆ ಮಾಡಲು ಆಸಕ್ತಿಯುಳ್ಳ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸಣ್ಣ ಖೇಲೋ ಇಂಡಿಯಾ ಯೋಜನೆಯಡಿ ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಅಥ್ಲೇಟಿಕ್ಸ್ ಕ್ರೀಡೆಯು ಮಂಜೂರಾಗಿದ್ದು, ೧೪ ರಿಂದ ೨೦ ವರ್ಷದೊಳಗಿನ ೧೫ ಜನ ಬಾಲಕ/ಯುವಕರು ಹಾಗೂ ೧೫ ಜನ ಬಾಲಕಿಯರು/ಯುವತಿಯರಿಗೆ ತರಬೇತಿ ನೀಡಲಾಗುತ್ತದೆ.
ಆಸಕ್ತ ಕ್ರೀಡಾಪಟುಗಳು ಭರ್ತಿ ಮಾಡಿದ ಅರ್ಜಿಗಳನ್ನು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ೨೦೨೨ರ ಆಗಸ್ಟ್ ೧೦ ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ