ಬಿಸಿ ಬಿಸಿ ಸುದ್ದಿ

ವಕೀಲರ ಸಂಘದಿಂದ ಪ್ರತಿಭಟನೆ: ತಹಸೀಲ್ದಾರರಿಗೆ ಮನವಿ

ಶಹಾಬಾದ: ರಾಜ್ಯ ಸರಕಾರದ ಜನನ ಮತ್ತು ಮರಣ ನೋಂದಣಿ ಕಾಯಿದೆಯ ತಿದ್ದುಪಡಿ ವಿರೋಧಿಸಿ ನಗರದ ವಕೀಲರ ಸಂಘ ಸೋಮವಾರ ಪ್ರತಿಭಟನೆ ನಡೆಸಿ ರಾಜ್ಯದ ಮುಖ್ಯಮಂತ್ರಿಗಳಿಗೆ ಬರೆದ ಮನವಿಪತ್ರವನ್ನು ಗ್ರೇಡ್-೨ ತಹಸೀಲ್ದಾರ ಗುರುರಾಜ ಸಂಗಾವಿ ಅವರ ಮುಖಾಂತರ ಸಲ್ಲಿಸಲಾಯಿತು.

ಜನನ ಮತ್ತು ಮರಣ ನೋಂದಣಿ ವಿಳಂಬದ ಸಂಬಂಧ ವಿವಾದಗಳು ಏರ್ಪಟ್ಟಲ್ಲಿ ಅಥವಾ ತಿದ್ದುಪಡಿ ಅವಶ್ಯಕವಿದ್ದಲ್ಲಿ ವ್ಯಕ್ತಿಗಳು ಜನನ ಮತ್ತು ನೋಂದಣಿ ಕಾಯ್ದೆ ಕಲಂ: ೧೩ ರ ಪ್ರಕಾರ ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ದಾಖಲಾತಿಗಳನ್ನು ನೀಡಿ ನ್ಯಾಯಾಲಯದ ಆದೇಶದ ನಂತರ ಸಂಬಂಧಪಟ್ಟ ಪ್ರಾಧಿಕಾರಗಳು ಈ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ನೀಡುತ್ತಿದ್ದರು.

ಆದರೆ ಕರ್ನಾಟಕ ಸರಕಾರ ಈ ಮೇಲೆ ಹೇಳಿದ ಆದೇಶದ ಅನ್ವಯ ಈಗಿರುವ ಜೆಎಮ್‌ಎಫ್‌ಸಿ ನ್ಯಾಯಾಲಯದ ಅಧಿಕಾರವನ್ನು ತೆಗೆದು ಉಪ-ವಿಭಾಗಾಧಿಕಾರಿಗಳ ನ್ಯಾಯಾಂಗಕ್ಕೆ ನೀಡಿದೆ. ಇದು ಜನ ಸಂದಣಿಗೆ ತೊಂದರೆ ನೀಡುವ ಮತ್ತು ಕ್ರಮಬದ್ದ ರೀತಿಯಲ್ಲಿ ಜನನ ಮತ್ತು ಮರಣ ಪ್ರಮಾಣಪತ್ರವನ್ನು ಪಡೆಯಲು ಕ? ಸಾಧ್ಯವಾಗುತ್ತದೆ.

ಈಗಾಗಲೇ ರೆವಿನ್ಯೂ ನ್ಯಾಯಾಲಯಗಳಲ್ಲಿ ಪ್ರಭಾವ, ಅಸಂಬದ್ದ ಆದೇಶಗಳು ನೀಡುವ ಮೂಲಕ ಜನರಿಗೆ ಸೂಕ್ತ ನ್ಯಾಯ ದೊರೆಯುತ್ತಿಲ್ಲ. ಒಂದೊಮ್ಮೆ ಉಪ-ವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ಈ ಅಧಿಕಾರವನ್ನು ನೀಡಿದ್ದಲ್ಲಿ ದೂರದ ಕಕ್ಷಿದಾರರು ಎಸಿ ಕಚೇರಿಗೆ ಬರಬೇಕಾಗಿದ್ದು, ಇದರಿಂದ ಜನಸಾಮಾನ್ಯರು ಓಡಾಡಿ ಹರಸಾಹಸ ಪಡಬೇಕಾಗುತ್ತದೆ. ಅಲ್ಲದೇ ಈ ಎಸಿ ಕಚೇರಿಗೆ ಈ ಜನನ ಮತ್ತು ಮರಣ ಪ್ರಮಾಣಪತ್ರವನ್ನು ಕೊಡಿಸಲು ಮಧ್ಯವರ್ತಿಗಳು ಹುಟ್ಟಿಕೊಳ್ಳುತ್ತಾರೆ. ಮತ್ತು ಮುಂದೊಂದು ದಿನ ಅಭದ್ರತೆಗೆ ಕಾರಣವಾಗುತ್ತದೆ.

ಆದ್ದರಿಂದ ತಾವುಗಳು ಈ ಸಂಬಂಧ ಕರ್ನಾಟಕ ಸರಕಾರ ಈಗ ಹೊರಡಿಸಿರುವ ಜನನ ಮತ್ತು ಮರಣ ನೋಂದಣಿ ಸಂಬಂಧ ಕರ್ನಾಟಕ ರಾಜ್ಯ ಸರಕಾರದ ಅಧಿಸೂಚನೆ ವಾಪಿಸು ಪಡೆದು ಈ ಹಿಂದಿನಂತೆ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿ ಮುಂದುವರೆಸುವಂತೆ ಮನವಿಯಲ್ಲಿ ಒತ್ತಾಯಿಸಿದರು.

ದೇವಪ್ಪ ಕುಲಕುಂದಿ, ಜ್ಯೋತಿ, ರವೀಂದ್ರ ಕಟ್ಟಿಮನಿ, ರಮೇಶ ರಾಠೋಡ, ನಾಗೇಶ ಧನ್ನೇಕರ್, ತಿಮ್ಮಯ್ಯ ಮಾನೆ, ರಘುವೀರಸಿಂಗ ಠಾಕೂರ ಇತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

21 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago