ಶಹಾಬಾದ: ಸಮಾಜ ಹಾಗೂ ದೇಶವನ್ನು ಹಾಳು ಮಾಡುವ ದುಶ್ಚಟಗಳು, ದ್ರವ್ಯವಸನಿಗಳ ಹಾಗೂ ದುರಾಚಾರಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಪರಿವರ್ತಿಸಿ ಜನರಲ್ಲಿನ ದುಶ್ಚಟಗಳನ್ನು ತಮ್ಮ ಜೋಳಿಗೆಯಲ್ಲಿ ಭೀಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯವಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಇಲಕಲ್ಲಿನ ಲಿಂ. ಡಾ.ಮಹಾಂತ ಶಿವಯೋಗಿಗಳು ಎಂದು ಗ್ರೇಡ್-೨ ತಹಶೀಲ್ದಾರ ಗುರುರಾಜ ಸಂಗಾವಿ ಹೇಳಿದರು.
ಅವರು ಸೋಮವಾರ ತಹಸೀಲ್ದಾರ ಕಚೇರಿಯಲ್ಲಿ ತಾಲೂಕ ಆಡಳಿತದಿಂದ ಹಮ್ಮಿಕೊಂಡ ಪೂಜ್ಯ ಶ್ರೀ ಮ.ನಿ.ಪ್ರ ಡಾ.ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಇಂದಿನ ಅಧುನಿಕ ಯುಗವು ಸಂಪೂರ್ಣ ಯುವಕರ ಮೇಲೆ ನಿಂತಿದೆ. ಅವರೇ ವ್ಯಸನಿ ಗಳಾದರೆ ದೇಶದ
ಅಥ್ಯವ್ಯವಸ್ಥೆಗೆ ತೊಂದರೆ ಯಾಗಲಿದೆ. ಮಾದಕ ವಸ್ತುಗಳ ಮೇಲೆ ಹಾನಿಕಾರಕ ಎಂಬ ಮಾಹಿತಿ ಇದ್ದರೂ ಸಹಿತ ಅದರಿಂದ ಯುವಜನತೆ ದೂರವಾಗ ದಿರುವುದು ವಿ?ದನೀಯ ಸಂಗತಿ.ಇದರಿಂದ ದೇಶದಲ್ಲಿ ಅನೇಕ ಕುಟುಂಬಗಳು ಬೀದಿಪಾಲಾಗುತ್ತಿವೆ ಎಂದು ಹೇಳಿದ ಅವರು, ಸ್ವಚ್ಚಂದ ಸಮಾಜ ನಿರ್ಮಾಣಕ್ಕೆ ಯುವಕರು ಸನ್ನದ್ದರಾಗಬೇಕು ಎಂದು ಹೇಳಿದರು.
ಉಪತಹಸೀಲ್ದಾರ ಮಲ್ಲಿಕಾರ್ಜುನ ರೆಡ್ಡಿ ಮಾತನಾಡಿ, ಯುವ ಪೀಳಿಗೆಯ ದುಶ್ಚಟಗಳನ್ನು ಬಿಡಿಸಿ ಸದೃಡ ಸಮಾಜ ನಿರ್ಮಾಣಕ್ಕೆ ನಿರಂತರ ಹೋರಾಟ ಮಾಡಿದ ಇಲಕಲ್ಲದ ಡಾ. ಮಹಾಂತ ಶಿವಯೋಗಿಗಳ ಜಯಂತಿ ನಿಮಿತ್ಯ ಅ.೧ ರಂದು ರಾಜ್ಯಾಧ್ಯಂತ ವ್ಯವಸನ ಮುಕ್ತ ದಿನಾಚರಣೆ ಆಚರಿಸಲಾಗುತ್ತಿದೆ. ಡಾ.ಮಹಾಂತ ಶಿವಯೊಗಿಗಳು ಸಮಾಜವನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯುವುದರ ಜೊತೆಗೆ ಜನ ಸಾಮಾನ್ಯರ ದುಶ್ಚಟ ಗಳನ್ನು ದೂರಾಗಿಸಲು ಮಹಾಂತ ಜೋಳಿಗೆ ಎಂಬ ಚಿಂತನೆ ಜಾರಿಗೊಳಿಸಿದ್ದು,ಇದರಿಂದ ಅನೇಕರು ತಮ್ಮ ದುಶ್ಚಟಗಳನ್ನು ಬಿಟ್ಟು ಉತ್ತಮ ಬದುಕನ್ನು ಸಾಗಿಸುತ್ತಿದ್ದಾರೆ ಎಂದು ಹೇಳಿದರು. ಸಾರ್ವಜನಿಕರು,ಯುವಕರು ದುಶ್ಚಟಗಳನ್ನು ಬಿಟ್ಟು ಸುಂದರ ಸಮಾಜ ನಿರ್ಮಾಣಕ್ಕೆ ಕೈಜೊಡಿಸಬೇಕು ಎಂದು ಹೇಳಿದರು.
ಶಿರಸ್ತೆದಾರರಾದ ಸಯ್ಯದ್ ಹಾಜಿ, ರವಿಕುಮಾರ, ಕಂದಾಯ ಅಧಿಕಾರಿ ಹಣಮಂತರಾವ ಪಾಟೀಲ,ಸಯ್ಯದ್ ಖಾದ್ರಿ, ಪಾರ್ವತಿ, ಶ್ರೀನಿವಾಸ, ಗಂಗಾಧರ, ಮಹ್ಮದ್ ಮುನೀರ್,ಗ್ರಾಮ ಲೆಕ್ಕಿಗ ಶಿವಾನಂದ ಹೂಗಾರ, ಬಸವರಾಜ, ಆಹಾರ ನಿರೀಕ್ಷಕ ಶ್ರೀಕಾಂತ,ರಂಗನಾಥ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…