ಶಹಾಬಾದನಲ್ಲಿ ಪತ್ರಿಕಾ ದಿನಾಚರಣೆ

0
100

ಶಹಾಬಾದ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾ ಘಟಕದ ವತಿಯಿಂದ ಅಗಸ್ಟ್ ೦೫ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಪತ್ರಿಕಾ ದಿನಾಚರಣೆ ಆಯೋಜಿಸಲಾಗಿದೆ ಎಂದು ಸಂಘದ ಪ್ರದಾನ ಕಾರ್ಯದರ್ಶಿ ಲೋಹಿತ್ ಕಟ್ಟಿ ತಿಳಿಸಿದ್ದಾರೆ.

ಈ ಕಾರ್ಯಕ್ರಮವನ್ನು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಚಿತ್ತಾಪೂರ ಶಾಸಕ ಪ್ರಿಯಾಂಕ್ ಖರ್ಗೆ, ಈಕರಸಾ ಸಂಸ್ಥೆಯ ಮಾಜಿ ಅಧ್ಯಕ್ಷ ಇಲಿಯಾಸ ಬಾಗವಾನ್, ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ ಆಗಮಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ, ರಾಜ್ಯ ಕಾರ್ಯಕಾರಿಣಿ ಸದಸ್ಯರು ಡಾ.ಶಿವರಂಜನ್ ಸತ್ಯಂಪೇಟೆ, ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ ಠಾಕೂರ ಗೌರವ ಉಪಸ್ಥಿತರಿರುವರು.

Contact Your\'s Advertisement; 9902492681

ಅತಿಥಿಗಳಾಗಿ ತಹಸೀಲ್ದಾರ ಸುರೇಶ ವರ್ಮಾ, ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಜಿಪಂ ಮಾಜಿ ಸದಸ್ಯ ಶಿವಾನಂದ ಪಾಟೀಲ, ನಗರ ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್, ಉದ್ಯಮೆದಾರ ರಾಜೇಶ ವರ್ಮಾ, ಕಾಂಗ್ರೆಸ್ ಮುಖಂಡ ರವಿ ಚವ್ಹಾಣ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್, ಜೆಡಿಎಸ್ ಅಧ್ಯಕ್ಷ ರಾಜಮಹ್ಮದ್ ರಾಜಾ, ಅಡತ್ ಹಾಗೂ ದಾಲಮಿಲ್ ಸಂಘದ ಅಧ್ಯಕ್ಷ ಶಿವಕುಮಾರ ಇಂಗಿನಶೆಟ್ಟಿ, ಎಪಿಎಂಸಿ ಸದಸ್ಯ ವಿಶ್ವರಾಧ್ಯ ಬಿರಾಳ ಆಗಮಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾ ಘಟಕದ ಅಧ್ಯಕ್ಷ ರಘುವೀರಸಿಂಗ್ ಠಾಕೂರ್ ವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ನಗರದ ಹಿರಿಯ ಪತ್ರಕರ್ತರಿಗೆ ಸನ್ಮಾನ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here