ಬಿಸಿ ಬಿಸಿ ಸುದ್ದಿ

ಪ್ರತಿದಿನ ೧೦,೦೦೦ ಎಬಿ-ಎಆರ್‌ಕೆ ಕಾರ್ಡ್ ವಿತರಿಸಿ: ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್.

ಕಲಬುರಗಿ: ದಿನಕ್ಕೆ ೧೦,೦೦೦ ಸಾವಿರದಷ್ಟು ಆಯುಷ್ಯಾನ್ ಭಾರತ್- ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನು ವಿತರಿಸುವ ಗುರಿ ಸಾಧಿಸಬೇಕೆಂದು ಜಿಲ್ಲಾಧಿಕಾರಿಗಳಾದ ಯಶವಂತ್ ವಿ.ಗುರುಕರ್ ಅವರು ಸೂಚಿಸಿದರು.

ಶುಕ್ರವಾರದಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ, ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆಯ ಜಿಲ್ಲಾ ಸಮಿತಿ ಚಲನಾ ಸಭೆ, ಜಿಲ್ಲಾ ಆರೋಗ್ಯ ಅಭಿಯಾನ ಸಭೆ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡುತ್ತಿದ್ದರು.

ವಿವಿಧ ಇಲಾಖೆಗಳ ನೆರೆವಿನೊಂದಿಗೆ ಕಲಬುರಗಿ ಜಿಲ್ಲೆಯಲ್ಲಿನ ಎಲ್ಲಾ ಗ್ರಾಮಗಳಲ್ಲಿ ಎಬಿ-ಎಆರ್‌ಕೆ ಕಾರ್ಡ್‌ಗಳನ್ನು ಒಂದು ತಿಂಗಳಲ್ಲಿ ವಿತರಿಸುವ ಗುರಿ ಸಾಧಿಸಬೇಕು. ಗ್ರಾಮ ಮಟ್ಟದಲ್ಲಿ ಕ್ಯಾಂಪ್‌ಗಳ ತೆರೆದು ಕಾರ್ಡ್ ವಿತರಿಸಬೇಕು ಎಂದು ಸಲಹೆ ನೀಡಿದರು.

ಕುಷ್ಠರೋಗ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಲಬುರಗಿ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನವನ್ನು ಸೆಪ್ಟೆಂಬರ್ ೧೨ ರಿಂದ ೨೯ರವರೆಗೆ ಮಾಡುವ ಮೂಲಕ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಬೇಕು. ಈ ಮೂಲಕ ಭಾರತವನ್ನು ಕುಷ್ಠರೋಗ ಮುಕ್ತ ಮಾಡಲು ಸರ್ವ ಪ್ರಯತ್ನ ಮಾಡೋಣ ಎಂದು ಕರೆ ನೀಡಿದರು.

ನಿಮ್ಮ ಮನೆಗೆ ಭೇಟಿ ನೀಡುವ ಆರೋಗ್ಯ ಸಹಾಯಕರು, ಆಶಾ ಮತ್ತು ಸ್ವಯಂ ಸೇವಕರಿಂದ ಪರೀಕ್ಷೆ ಮಾಡಿಸಿಕೊಳ್ಳಿ, ಹೆಚ್ಚಿನ ಮಾಹಿತಿಗಾಗಿ ಉಚಿತ ಆರೋಗ್ಯ ಸಹಾಯವಾಣಿ ೧೦೪ಕ್ಕೆ ಕರೆ ಮಾಡುವಂತೆ ತಿಳಿಸಿದರು.

ಜುಲೈ ೧೮ರಿಂದ ಆಗಸ್ಟ್ ೧೫ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಹಮ್ಮಿಕೊಂಡಿದ್ದು, ಎಲ್ಲರೂ ಒಗ್ಗೂಡಿ ಶ್ರಮಿಸುವ ಮೂಲಕ ಕರ್ನಾಟಕವನ್ನು ಕ್ಷಯ ಮುಕ್ತ ರಾಜ್ಯವನ್ನಾಗಿಸಲು ಎಲ್ಲಾ ಶ್ರಮಿಸಬೇಕು ಎಂದರು.

ಜಂತುಹುಳು: ಆಗಸ್ಟ್ ೧೦ರಂದು ೧ ರಿಂದ ೧೯ ವರ್ಷ ವಯಸ್ಸಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಾಶಕ ಮಾತ್ರೆಯನ್ನು ಎಲ್ಲಾ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತಿದೆ. ದಾಖಲಾಗದ ಹಾಗೂ ಶಾಲೆಯಿಂದ ಹೊರೆಗುಳಿದ ಮಕ್ಕಳಿಗೂ ಜಂತುಹುಳು ನಾಶಕ ಮಾತ್ರೆಯನ್ನು ಅಂಗನವಾಡಿ ಕೇಂದ್ರಗಳಲ್ಲೇ ನೀಡಲಾಗುತ್ತಿದೆ. ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದಂದು ಜಂತುಹುಳು ನಾಶಕ ಮಾತ್ರೆ ನೀಡದೇ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ ೧೭ ರಂದು ನಿರ್ಮೂಲನಾ ದಿನದಂದು ಈ ಮಾತ್ರೆಯನ್ನು ಕಡ್ಡಾಯವಾಗಿ ನೀಡಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಹಾಗೂ ಜಂತುಹುಳು ನಿವಾರಣಾ ದಿನದ ಪೋಸ್ಟರ್‌ಗಳು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜಶೇಖರ್ ಮಾಲಿ, ಆರ್.ಸಿ.ಎಚ್ ಅಧಿಕಾರಿ ಡಾ. ಪ್ರಭುಲಿಂಗ ಮಾನಕರ್, ಜಿಲ್ಲಾ ಸರ್ಜನ್ ಡಾ.ಅಂಬರಾಯ ರುದ್ರವಾಡಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ರಾಜಕುಮಾರ್ ಕುಲಕರ್ಣಿ, ವಿವಿಧ ಇಲಾಖೆ ಅಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು ಮುಂತಾದವರು ಹಾಜರಿದ್ದರು.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ವಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

13 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

1 hour ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago