ಕಲಬುರಗಿ: ಇತ್ತೀಚೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಹು ನಿರೀಕ್ಷಿತ ಕನ್ನಡ ಸಾಹಿತ್ಯ ಪರಿಷತ್ತಿನ ವಿನೂತನ ತಂತ್ರಜ್ಞಾನವುಳ್ಳ ಮೊಬೈಲ್ ಆ್ಯಪ್ ಲೋಕಾರ್ಪಣೆ ಮಾಡಿದರು. ವಿಶೇಷವಾಗಿ ಭಾರತೀಯ ಸೈನಿಕರಿಗೆ/ಮಾಜಿ ಸೈನಿಕರಿಗೆ ಹಾಗೂ ದಿವ್ಯಾಂಗಚೇತನರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ಉಚಿತವಾಗಿ ಸದಸ್ಯತ್ವವನ್ನು ನೀಡುವುದರ ಮೂಲಕ ಕಸಾಪ ಜನಸಾಮಾನ್ಯರ ಪರಿಷತ್ತನ್ನಾಗಿಸಿದ್ದಾರೆ ಎಂದು ಡಿಸೆಬಲ್ಡ್ ಹೆಲ್ಪಲೈನ್ ಫೌಂಡೆಶನನ ರಾಜ್ಯ ಸಂಯೋಜಕ ಬಸವರಾಜ ಹೆಳವರ ಯಾಳಗಿ ಹರ್ಷ ವ್ಯಕ್ತಪಡಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ವಿಶೇಷಚೇತನರು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವದ ಅರ್ಜಿಯನ್ನು ಉಚಿತವಾಗಿ ಮೊಬೈಲ್ ಅಪ್ಲಿಕೇಶನನಲ್ಲಿ ಹಾಕುವುದರ ಮೂಲಕ ಕಸಾಪ ರಾಜ್ಯಾಧ್ಯಕ್ಷರ ಕೋಟಿ ಸದಸ್ಯತ್ವದ ಕನಸು ನನಸಾಗಿಸೋಣ ಎಂದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…