ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲಾ ಕಸಾಪ ದ ವತಿಯಿಂದ ಮನೆ-ಮನೆಗೆ ರಾಷ್ಟ್ರಧ್ವಜ ವಿತರಣಾ ಅಭಿಯಾನ, ಕವಿಗೋಷ್ಠಿ, ಸ್ವಾತಂತ್ರ್ಯ ಚಳುವಳಿಗೆ ಕರ್ನಾಟಕದ ಕೊಡುಗೆ ಕುರಿತು ವಿಚಾರ ಸಂಕಿರಣ, ಪುಸ್ತಕ ವಿತರಣೆ, ಛಾಯಾಚಿತ್ರಗಳ ಪ್ರದರ್ಶನ ಹೀಗೆ ಅನೇಕ ವೈವಿದ್ಯಮಯ ಕಾರ್ಯಕ್ರಮಗಳು ಆಯೋಜಿಸುವ ಮೂಲಕ ಕಲೆ, ಸಂಗೀತ, ಸಾಹಿತ್ಯದ ಬೆಳವಣಿಗೆಯ ಜತೆಗೆ ಸ್ವಾತಂತ್ರ್ಯಕ್ಕಾಗಿ ಮಡಿದ ಮಹನೀಯರನ್ನು ಸಹ ಸ್ಮರಿಸುವ ಕಾರ್ಯ ಮಾಡುತ್ತಿದ್ದೇವೆ. ಕಸಾಪ ವಿಭಿನ್ನ ಮತ್ತು ವಿನೂತನ ಕಾರ್ಯಕ್ರಮಗಳನ್ನು ಅರ್ಥಪುರ್ಣವಾಗಿ ಆಯೋಜಿಸಲಾಗುತ್ತಿದೆ. – ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಅಧ್ಯಕ್ಷರು, ಜಿಲ್ಲಾ ಕಸಾಪ.
ಕಲಬುರಗಿ: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ಮನೆ ಮೇಲೆ ತಿರಂಗಾ ಧ್ವಜ ಹಾರಾಡಬೇಕು. ಜಿಲ್ಲೆಯಲ್ಲೂ ಕೂಡ ಪ್ರತಿಯೊಬ್ಬ ಭಾರತೀಯ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಾಡಬೇಕು ಎಂದು ಭಾರತ ಸೇವಾ ದಳದ ಜಿಲ್ಲಾಧ್ಯಕ್ಷರೂ ಆದ ಎಂಎಲ್ಸಿ ಶಶೀಲ್ ಜಿ.ನಮೋಶಿ ಕರೆ ನೀಡಿದರು.
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದ ಬಾಪೂಗೌಡ ದರ್ಶನಾಪೂರ ರಂಗಮಂದಿರದಲ್ಲಿ ಆಯೋಜಿಸಿದ ಮನೆ-ಮನೆಗೆ ರಾಷ್ಟ್ರಧ್ವಜ ವಿತರಣಾ ಅಭಿಯಾನ’ ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ೩೦ ಕೋಟಿ ಮನೆಗಳ ಮೇಲೆ ಧ್ವಜ ರಾರಾಜಿಸಬೇಕು ಎಂಬ ಕನಸು ಮೋದಿ ಅವರು ಕಂಡಿದ್ದಾರೆ. ಪ್ರತಿಯೊಬ್ಬರಲ್ಲೂ ದೇಶಭಕ್ತಿ ಜಾಗೃತವಾಗಲಿ ಎಂಬ ಉದ್ದೇಶ ಅವರು ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ರಾಷ್ಟ್ರಧ್ವಜ ವಿತರಣಾ ಕಾರ್ಯ ಶ್ಲಾಘನೀಯವಾದುದು ಎಂದು ಮನದುಂಬಿ ಮಾತನಾಡಿದರು.
ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಪರಿಷತ್ತು ನಿರಂತರ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಎಲ್ಲರಲ್ಲೂ ಸಾಹಿತ್ಯಾಭಿರುಚಿ ಬೆಳೆಸುವ ನಿಟ್ಟಿನಲ್ಲಿ ಪರಿಷತ್ತು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಪ್ರತಿಯೊಬ್ಬರಲ್ಲೂ ರಾಷ್ಟ್ರಾಭಿಮಾನ ಮೂಡಿಸುವ ಉದ್ದೇಶದಿಂದ ರಾಷ್ಟ್ರಧ್ವಜ ವಿತರಣೆ ಕಾರ್ಯ ಮಾಡಲಾಗಿದೆ ಎಂದರು.
ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ರಾಜಕುಮಾರ ಕಡಗಂಚಿ ಮಾತನಾಡಿ, ಶ್ರಾವಣ ಮಾಸದಲ್ಲಿ ಅಮೃತ ಮಹೋತ್ಸವ ಬಂದಿದ್ದರಿಂದ ವಿಶೇಷತೆ ಪಡೆದಿದೆ. ಎಲ್ಲರೂ ಶ್ರಾವಣ ಆಚರಣೆ ಜತೆಗೆ ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳಬೇಕೆಂದರು.
ಸಂಶೋಧಕ ಸಾಹಿತಿ ಮುಡುಬಿ ಗುಂಡೇರಾವ, ಪ್ರಮುಖರಾದ ಬಸಣ್ಣಾ ಗುಣಾರಿ, ವಾಸುದೇವ ಪಾಟೀಲ, ರಾಜೂಗೌಡ ನಾಗನಳ್ಳಿ, ಶಿವರಾಜ ಅಂಡಗಿ, ಯಶ್ವಂತರಾಯ ಅಷ್ಠಗಿ, ವಿನೋದ ಜೇನವೇರಿ, ರವೀಂದ್ರಕುಮಾರ ಭಂಟನಳ್ಳಿ, ನಾಗೇಂದ್ರಪ್ಪ ಮಾಡ್ಯಾಳೆ, ಬಾಬುರಾವ ಪಾಟೀಲ, ಶರಣಬಸಪ್ಪ ನರೂಣಿ, ಶಾಮಸುಂದರ ಕುಲಕರ್ಣಿ, ನಾಗಪ್ಪ ಸಜ್ಜನ್, ಹಣಮಂತರಾಯ ಘಂಟೇಕರ್, ಶಿವಕುಮಾರ ಸಿ.ಎಚ್., ದೇವೇಂದ್ರಪ್ಪ ಗಣಮುಖಿ, ಬಸಯ್ಯಾಸ್ವಾಮಿ ಹೊದಲೂರ, ರಾಜೇಂದ್ರ ಮಾಡಬೂಳ, ಶಕುಂತಲಾ ಪಾಟೀಲ ಜಾವಳಿ, ಸಂಗಮೇಶ ರಘೋಜಿ, ಮಂಜುಳಾ ಸುತಾರ, ಬಸವರಾಜ ತೋಟದ, ಎಸ್.ಎಂ.ಪಟ್ಟಣಕರ್, ಸಂತೋಷ ಕುಡಳ್ಳಿ, ಪ್ರಭುಲಿಂಗ ಮೂಲಗೆ, ಶಿವಯೋಗಪ್ಪ ಬಿರಾದಾರ, ಪ್ರಭವ ಪಟ್ಟಣಕರ್, ಸುನೀಲ ಹಡಪದ, ಬಸವರಾಜ ಹಡಪದ, ಮಲ್ಲಿಕಾರ್ಜುನ ಇಬ್ರಾಹಿಂಪುರ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…