ಕಲಬುರಗಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕಮಲಾಪುರ ಬಮ್ಮಣ ಪರಿವಾರದಿಂದ ದೇಶದ ಎರಡನೇ ಅತಿ ದೊಡ್ಡ ಭಾರತದ ರಾಷ್ಟ್ರಧ್ವಜ ನಿರ್ಮಿಸಲಾಗಿದ್ದು, ೧೧ ರಿಂದ ೧೭ ರವರೆಗೆ ಕಮಲಾಪುರ ರಾಷ್ಟ್ರೀಯ ಹೆದ್ದಾರಿ ೫೦ರ ಬಾಚನಾಳ ಕ್ರಾಸ್ ಸಮೀಪದ ಕುದುರೆ ಮುಖ ಪರ್ವತದ ಬಳಿ ೨೩ ಎಕರೆ ವಿಶಾಲ ಪ್ರದೇಶದಲ್ಲಿ ಧ್ವಜಾರೋಹಣ ಅನಾವರಣ ಮಾಡಲಾಗುವುದು ಎಂದು ದೇಶಾಭಿಮಾನಿ ವಿನೋದಕುಮಾರ ಬಮ್ಮಣ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರೈತರ ಕೃಷಿ ಭೂಮಿಯಲ್ಲಿ ೭೫ ಅಡಿ ಉದ್ದ, ೫೦ ಅಡಿ ಅಗಲದ ಸುಮಾರು ೧೪೦ ಕೆಜಿ ತೂಕದ ರಾಷ್ಟ್ರಧ್ವಜ ಇದಾಗಿದೆ. ಭಾರತೀಯ ಸೈನ್ಯದಿಂದ ಜಮ್ಮುವಿನ ಲಡಾಖ್ ಪ್ರದೇಶದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ೧೫೦ ಅಡಿ ಎತ್ತರದ ತ್ರಿವರ್ಣ ಧ್ವಜ ಹಾರಿಸಲಾಗಿದೆ. ಈಗ ದೇಶದಲ್ಲಿ ಎರಡನೇ ಬಾರಿಗೆ ಕಮಲಾಪುರದಲ್ಲಿ ತಿರಂಗಾ ಧ್ವಜ ಹಾರಾಟಕ್ಕೆ ಎಲ್ಲ ಸಿದ್ಧತೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಧಾರವಾಡ ಜಿಲ್ಲೆಯ ಗರಗ ಗ್ರಾಮದ ರಾಷ್ಟ್ರಧ್ವಜ ತಯಾರಕ ೩೦೦ ಮಹಿಳೆಯರು ಇಲ್ಲಿಗೆ ಆಗಮಿಸಿ ಶುದ್ಧ ಹತ್ತಿ ಉಪಯೋಗಿಸಿ ನೇಯ್ದ ಖಾದಿ ಬಟ್ಟೆಯಿಂದ ಒಂದೂವರೆ ತಿಂಗಳ ಪ್ರಯತ್ನದ ಫಲವಾಗಿ ಧ್ವಜ ತಯಾರು ಮಾಡಲಾಗಿದೆ. ಅಲ್ಲದೆ ಕೇಂದ್ರ ಸರ್ಕಾರದ ಧ್ವಜ ಸಂಹಿತೆ ಮಂಡಳಿ ಮಾರ್ಗಸೂಚಿ ಪಾಲಿಸಲಾಗಿದ್ದು, ಇಂದಿನ ಯುವ ಪೀಳಿಗೆಯಲ್ಲಿ ದೇಶಾಭಿಮಾನ ಮೂಡಿಸಲು ವಿಶಿಷ್ಟವಾಗಿ ಧ್ವಜಾರೋಹಣ ನೆರವೇರಿಸಲಾಗುತ್ತಿದೆ ಎಂದರು.
೧೧ ರಂದು ಬೆಳಗ್ಗೆ ೧೦: ೩೦ಕ್ಕೆ ಶ್ರೀ ಶರಣಬಸವೇಶ್ವರ ಸಂಸ್ಥಾನದ ಕಾರ್ಯದರ್ಶಿ ಮಾತೋಶ್ರೀ ಡಾ. ದಾಕ್ಷಾಯಣಿ ಅವ್ವಾಜಿ ಅವರು ರಾಷ್ಟ ಧ್ವಜ ನೆರವೇರಿಸಲಿದ್ದಾರೆ. ಹಾರಕೂಡ ಹಿರೇಮಠ ಸಂಸ್ಥಾನದ ಪೂಜ್ಯ ಚನ್ನವೀರ ಶಿವಾಚಾರ್ಯರು, ಕ-ಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ್ ಪಾಟೀಲ್ ಸೇಡಂ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಎಸ್. ನಾಗಾಭರಣ, ಗುಲಬರ್ಗಾ ವಿವಿ ಕುಲಪತಿ ಯಶವಂತ ಗುರುಕರ, ರಾಷ್ಟ್ರಪತಿಯಿಂದ ಶೌರ್ಯ ಪ್ರಶಸ್ತಿ ಪಡೆದ ಡಾ. ಪಿ.ಆರ್. ಎಸ್. ಚೇತನ ಸೇರಿ ಅನೇಕ ಗಣ್ಯರು ಆಗಮಿಸಲಿದ್ದಾರೆ. ಶ್ರೀ ಶರಣಬಸವೇಶ್ವರ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ೧೫ ರಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಆಗಮಿಸಲಿದ್ದಾರೆ. ನಂತರ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಪ್ರಮುಖರಾದ ರವೀಂದ್ರ ಮುತ್ತಿನ, ಬಾಬು ಮಠಪತಿ, ಮಂಜುನಾಥ ಮತ್ತಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…