ಬಿಸಿ ಬಿಸಿ ಸುದ್ದಿ

ಸರಿಯಾದ ಸಮಯಕ್ಕೆ ಬಸ್ ಓಡಿಸಲು ರಜಾಕ್ ಪಟೇಲ್ ಆಗ್ರಹ

ಚಿಂಚೋಳಿ : ಸಾರಿಗೆ ಇಲಾಖೆ ಜನರಿಗೆ ಪ್ರಯಾಣಿಸಲು ಅನೂಕೂಲವಾಗಲಿಎಂಬ ಉದ್ದೇಶದಿಂದ ಪ್ರಾರಂಭಿಸಿದ್ದಾರೆ ಆದರೆ ಚಿಂಚೋಳಿ ತಾಲೂಕಿನಲ್ಲಿ ಬಸ್ ಗಳು ಸರಿಯಾದ ಸಮಯಕ್ಕೆ ಓಡಿಸದ ಕಾರಣ ಜನರು ಹಾಗೂ ಪ್ರಯಾಣಿಕರು ಪರದಾಡುತಿದ್ದಾರೆ ಎಂದು ಸುಲೇಪೇಟ ಗ್ರಾಮದ ಕಾಂಗ್ರೆಸ್ ಯುವ ಮುಖಂಡ ರಜಾಕ್ ಪಟೇಲ್ ದೂರಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ದಿನನಿತ್ಯ ಚಿಂಚೋಳಿ ಯಿಂದ ಕಲಬುರಗಿಗೆ ನೂರಾರು ಜನ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ನೌಕರರು. ರೈತರು. ರೋಗಿಗಳು ಚಿಕಿತ್ಸೆಗೆ ಕಲಬುರಗಿಗೆ ಹೋಗುತ್ತಾರೆ ಆದರೆ ಚಿಂಚೋಳಿಯಿಂದ ಬೆಳಿಗ್ಗೆ 7 ಗಂಟೆಗೆ ಬಸ್ ಹೋದರೆ ನಂತರ 9ಗಂಟೆಯವರೆಗೆ ಒಂದು ಬಸ್ ಕಲಬುರಗಿಗೆ ಹೋಗುವುದಿಲ್ಲ ನಂತರ 9ಗಂಟೆಯಿಂದ 10 ಗಂಟೆ ಮಧ್ಯೆ ಒಂದೆ ಬಾರಿ 4 ರಿಂದ 5 ಬಸ್ ಪ್ರಯಾಣಿಕರಿಲ್ಲದೆ ಖಾಲಿ ಓಡಿಸುತ್ತಾರೆ ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆ ಆಗುತ್ತಿದೆ. ಎಂದು ಅವರು ಆರೋಪಿಸಿದರು.

ಕೂಡಲೇ ಬೆಳಿಗ್ಗೆ 7 ಗಂಟೆ ಹಾಗೂ 8 ಗಂಟೆಗೆ ಚಿಂಚೋಳಿ ಯಿಂದ ಕಲಬುರಗಿಗೆ ತಡೆರಹಿತ ಬಸ ಓಡಿಸಬೇಕು. ಮತ್ತು ಪ್ರತಿ 15 ನಿಮಿಷಕ್ಕೆ ಒಂದು ಬಸ್ ಓಡಿಸಬೇಕು ಎಂದು ಆಗ್ರಹಿಸಿದ್ದಾರೆ.

emedialine

Recent Posts

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

10 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

10 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

10 hours ago

ಕನ್ನಡ ದೀಪೋತ್ಸವ: ವಿಜಯೀಭವ ಕೃತಿ ಜನಾರ್ಪಣೆ 24 ರಂದು

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…

10 hours ago

ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಿಂದ ವಿಭಾಗಿಯ ಮಟ್ಟಕ್ಕೆ ಆಯ್ಕೆ

ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…

10 hours ago

ಅಭಿವೃದ್ಧಿ ಪರ ಚಿಂತನೆಯಳ್ಳ ಪ್ರಬುದ್ದ ರಾಜಕಾರಣಿ ಪ್ರಿಯಾಂಕ್ ಖರ್ಗೆ

ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…

10 hours ago