ಕಲಬುರಗಿ ಕಸಾಪ ಕಾರ್ಯಚಟುವಟಿಕೆ ಪ್ರಶಂಸಾರ್ಹ

0
44

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅತ್ಯುತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಹಿತಿಗಳ ಹಾಗೂ ಕನ್ನಡಾಭಿಮಾನಿಗಳ ಪ್ರಶಂಸಾರ್ಹವಾಗಿ ಕಾರ್ಯಚಟುವಟಿಕೆ ಮಾಡುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನ ರಾಜ್ಯ ಗೌರವ ಕಾರ್ಯದರ್ಶಿ ನೇ. ಭ. ರಾಮಲಿಂಗಶೆಟ್ಟಿ ಅಭಿಪ್ರಾಯಪಟ್ಟರು.

ಇಂದು ಬೆಂಗಳೂರಿನಲ್ಲಿ ಕಸಾಪ ರಾಜ್ಯ ಕೋಶಾಧ್ಯಕ್ಷ ಪಟೇಲ್ ಪಾಂಡು ಹಾಗೂ ನೆ.ಭ.ರಾಮಲಿಂಗಶೆಟ್ಟಿ ಯವರನ್ನು ಭೇಟಿ ಮಾಡಿದ ಕಲಬುರಗಿ ಕಸಾಪ ಅಧ್ಯಕ್ಷರಾದ ವಿಜಯಕುಮಾರ ಪಾಟೀಲ ತೆಗಲತಿಪ್ಪಿ, ಜಿಲ್ಲಾ ಗೌರವ ಕಾರ್ಯದರ್ಶಿಗಳಾದ, ಶಿವರಾಜ ಅಂಡಗಿ, ಪ್ರೊ.ಯಶವಂತರಾಯ ಅಷ್ಠಗಿ, ಸಾಹಿತಿ ಹಾಗೂ ಚಿತ್ತಾಪೂರ ಕಸಾಪ ಮಹಿಳಾ ಪ್ರತಿನಿಧಿ ಪೂಜಾ ಭಂಕಲಗಿ ಯವರಿದ್ದ ನಿಯೋಗವನ್ನುದ್ದೇಶಿಸಿ ಮಾತನಾಡಿದರು.

Contact Your\'s Advertisement; 9902492681

ಕಲಬುರ್ಗಿಯಲ್ಲಿ ನಡೆಯುತ್ತೀರುವ ಕಾರ್ಯಕ್ರಮಗಳು ಕನ್ನಡ ಸಾಹಿತ್ಯ ಪರಿಷತ್ ನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾಡುವ ನಿಟ್ಟಿನಲ್ಲಿ ವಿನೂತನ ಕಾರ್ಯಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದು ರಾಜ್ಯ ಕಸಾಪ ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತದೆ ಎಂದರು.

ಇತ್ತೀಚೆಗೆ ರಾಜ್ಯ ಸರ್ಕಾರದಿಂದ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಯವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿರುವ ಪ್ರಯುಕ್ತ ಅವರ ಅನುಪಸ್ಥಿತಿಯಲ್ಲಿ ಕಸಾಪ ರಾಜ್ಯ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗಶೆಟ್ಟಿ ಹಾಗೂ ಕೋಶಾಧ್ಯಕ್ಷ ಪಟೇಲ್ ಪಾಂಡು ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ನನ್ನ ಅವಧಿಯಲ್ಲಿ ಕಲಬುರಗಿಯನ್ನು ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಜಿಲ್ಲೆಯನ್ನಾಗಿ ಮಾಡಲಾಗುವುದು ಎಂದು ತೇಗಲತಿಪ್ಪಿ ಹೇಳಿದರು.

ಈ ಸಂದರ್ಭದಲ್ಲಿ ಕಸಾಪ ರಾಜ್ಯ ಕೋಶಾಧ್ಯಕ್ಷರಾದ ಪಟೇಲ್ ಪಾಂಡು, ಕಸಾಪ ಕಲಬುರಗಿ ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ,ಪ್ರೊ ಯಶವಂತರಾಯ ಅಷ್ಠಗಿ, ಬರಹಗಾರ್ತಿ ಪೂಜಾ ಭಂಕಲಗಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here