ಸುರಪುರ:ಇಲ್ಲಿಯ ನಗರಸಭೆಯಿಂದ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ೭೬ನೇ ಸ್ವಾತಂತ್ರ್ಯ ದಿನವನ್ನು ಹಮ್ಮಿಕೊಳ್ಳಲಾಗಿತ್ತು.ಶಾಸಕ ನರಸಿಂಹ ನಾಯಕ ರಾಜುಗೌಡ ಧ್ವಜಾರೋಹಣ ನೆರವೇರಿಸಿದರು.
ನಗರಸಭೆ ಅಧ್ಯಕ್ಷ ಸುಜಾತಾ ವೇಣುಗೋಪಾಲ ಜೇವರ್ಗಿ,ಉಪಾಧ್ಯಕ್ಷ ಮಹೇಶ ಪಾಟೀಲ್,ವಿರೋಧ ಪಕ್ಷದ ನಾಯಕ ರಾಜಾ ಪಿಡ್ಡನಾಯಕ (ತಾತಾ) ಸದಸ್ಯರಾದ ವೇಣುಮಾಧವ ನಾಯಕ,ವಿಷ್ಣು ಗುತ್ತೇದಾರ,ನರಸಿಂಹಕಾಂತ ಪಂಚಮಗಿರಿ,ರಾಜಾ ಮುಕುಂದ ನಾಯಕ,ಪ್ರಕಾಶ ಸಜ್ಜನ್,ಅಬ್ದುಲಗಫೂರ ನಗನೂರಿ,ಶೇಖ ಮಹಿಬೂಬ ಒಂಟಿ,ವೇಣುಗೋಪಾಲ ನಾಯಕ ಜೇವರ್ಗಿ,ಮಹ್ಮದಗೌಸ್ ಕಿಣ್ಣಿ,ಮೌಲಸಾಬ್ ಹಾಗೂ ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ,ವ್ಯವಸ್ಥಾಪಕ ಯಲ್ಲಪ್ಪ ನಾಯಕ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ನಗರಸಭೆ ಕಾರ್ಯಾಲಯ : ಇಲ್ಲಿಯ ನಗರಸಭೆ ಕಾರ್ಯಾಲಯದ ಆವರಣದಲ್ಲಿ ೭೬ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು.ನಗರಸಭೆ ಅಧ್ಯಕ್ಷೆ ಸುಜಾತಾ ವಿ.ಜೇವರ್ಗಿ ಧ್ವಜಾರೋಹಣ ನೆರವೇರಿಸಿದರು,ಶಾಸಕ ರಾಜುಗೌಡ, ಉಪಾಧ್ಯಕ್ಷ ಮಹೇಶ ಪಾಟೀಲ್,ವಿರೋಧ ಪಕ್ಷದ ನಾಯಕ ರಾಜಾ ಪಿಡ್ಡನಾಯಕ (ತಾತಾ),ಸದಸ್ಯರಾದ ವೇಣುಮಾಧವ ನಾಯಕ ಸೇರಿ ಎಲ್ಲಾ ಸದಸ್ಯರು ಹಾಗೂ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ,ವ್ಯವಸ್ಥಾಪಕ ಯಲ್ಲಪ್ಪ ನಾಯಕ ಸೇರಿ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಎಲ್ಲಾ ಪೌರ ಕಾರ್ಮಿಕರಿಗೆ ಮುಖ್ಯಮಂತ್ರಿಗಳ ಅಭಿನಂಧನೆಯ ಪತ್ರಗಳನ್ನು ವಿತರಿಸಲಾಯಿತು.