ಕಲಬುರಗಿ: ನಗರದ ಎಂ.ಎನ್.ದೇಸಾಯಿ ಪದವಿ ಮಹಾವಿದ್ಯಾಲಯದಲ್ಲಿ ಸೋಮವಾರ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಆಯುಷ್ಮನ ಕಾರ್ಡ್ ಮಾಡಿಕೊಡಲಾಯಿತು.
ಕಾಲೇಜಿನ ಅಧ್ಯಕ್ಷ ಸಂದೀಪ ದೇಸಾಯಿ ಅವರು ಮಾತನಾಡಿ ರಾಜ್ಯದ ಎಲ್ಲ ನಿವಾಸಿಗಳಿಗೆ ಆರೋಗ್ಯ ಕರ್ನಾಟಕ ಎಂಬ ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆಯನ್ನು ಕರ್ನಾಟಕ ಸರ್ಕಾರವು ದಿನಾಂಕ: ೦೨.೦೩.೨೦೧೮ ರಿಂದ ಅನುಷ್ಠಾನಗೊಳಿಸುತ್ತಿತ್ತು. ನಂತರ ಭಾರತ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿರುತ್ತದೆ. ಈ ಎರಡೂ ಯೋಜನೆಗಳ ಉದ್ದೇಶ, ವ್ಯಾಪ್ತಿಗಳಲ್ಲಿ ಹೋಲಿಕೆ ಇರುವುದರಿಂದ ಎರಡೂ ಯೋಜನೆಗಳನ್ನು ಸಂಯೋಜಿಸಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಎಂಬ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಬಿಪಿಎಲ್ ಪಡಿತರ ಕಾರ್ಡು ಹೊಂದಿರುವವರು ಹಾಗೂ ರಾಷ್ರ್ಟೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ ರೂ.೫.೦೦ ಲಕ್ಷಗಳವರೆಗೆ ಉಚಿತ ಚಿಕಿತ್ಸೆ ಲಭ್ಯ. ಎಪಿಎಲ್ ಕಾರ್ಡುದಾರರು ಆಥವಾ ಬಿಪಿಎಲ್ ಕಾರ್ಡು ಹೊಂದಿಲ್ಲದವರಿಗೆ ಸಹ-ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ ೩೦% ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ.೧.೫೦ ಲಕ್ಷ ಇರುತ್ತದೆ.
ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು ದೇಸಾಯಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಡಾ. ವೀಣಾ ಕಾಳಪೂರ, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ಸ್ವಪ್ನಾ.ಎಸ್. ಚಕ್ರವರ್ತಿ, ಕು.ಆಶಾ, ಕು.ಶೈಲಜಾ, ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ನಾಗರಾಜ ಪಟ್ಟಣಕರ, ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಆನಂದತೀರ್ಥ ಜೋಶಿ, ಇತಿಹಾಸ ಪ್ರಾಧ್ಯಾಪರಾದ ಡಾ. ಶ್ರೀಕಾಂತ ಗೋಣಿ, ಸಮಾಜಶಾಸ್ತ್ರ ಪ್ರಾಧ್ಯಾಪಕರಾದ ಅನುರಾಧಾ ಮದ್ರಿ, ಕನ್ನಡ ಪ್ರಾಧ್ಯಾಪಕರಾದ ಪ್ರಿಯಾಂಕಾ ಕರ್ಣಿಕ, ಇಂಗ್ಲಿಷ್ ಪ್ರಾಧ್ಯಾಪಕರಾದ ಅಮರ ಹಾಗಾರಗಿ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ವ್ಹಿ.ಎನ್.ಹಿರೇಮಠ,ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಅಶ್ವಿನಿ ಪಾಟೀಲ, ಆಡಳಿತ ಅಧಿಕಾರಿಯಾದ ರಾಧಿಕಾ ಗುತ್ತೆದಾರ, ಗ್ರಂಥಪಾಲಕರಾದ ಅನ್ನಪೂರ್ಣ ಪಸಾರ, ಎನ್ ಎಸ್ ಎಸ್ ಅಧಿಕಾರಿಗಳಾದ ಮಂಜುನಾಥ ಬನ್ನೂರ, ಪ್ರಜ್ನ್ಯಾ, ಶ್ರುತಿ,ಅಂಬಿಕಾ, ಮಾಯಾ, ಕಾಶಿಬಾಯಿ ಇದ್ದರು.
Imprashnt
ImKannada