ಆಗಸ್ಟ್ 20ರಂದು ಡಿ. ದೇವರಾಜ ಅರಸುರವರ ೧೦೭ನೇ ಜನ್ಮ ದಿನಾಚರಣೆ

0
16

ಕಲಬುರಗಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಇವುಗಳ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಾಮಾಜಿಕ ಪರಿವರ್ತನೆಯ ಹರಿಕಾರ ಡಿ. ದೇವರಾಜ ಅರಸುರವರ ೧೦೭ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ ೨೦ ರಂದು ಶನಿವಾರ ಬೆಳಿಗ್ಗೆ ೧೦ ಗಂಟೆಗೆ ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಘನ ಉಪಸ್ಥಿತಿ ವಹಿಸುವರು. ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಮುರುಗೇಶ ಆರ್. ನಿರಾಣಿ ಅವರು ಡಿ. ದೇವರಾಜ ಅರಸುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಹಾಗೂ ಬೀದರ ಸಂಸದರಾದ ಭಗವಂತ ಖೂಬಾ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ ರೇವೂರ ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.

Contact Your\'s Advertisement; 9902492681

ಜೇವರ್ಗಿ ಶಾಸಕರು ಹಾಗೂ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯಸಿಂಗ್, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ ಪಾಟೀಲ್ ಸೇಡಂ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ-ಯಾದಗಿರಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರು ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಶಾಸಕರು ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಹಾಗೂ ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಿ. ಜಾಧವ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ವಿಧಾನಸಭೆ ಶಾಸಕರುಗಳಾದ ಪ್ರಿಯಾಂಕ ಖರ್ಗೆ, ಎಂ.ವೈ.ಪಾಟೀಲ, ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮಡು, ಖನೀಜ್ ಫಾತೀಮಾ, ಡಾ. ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ಸಾಬಣ್ಣ ತಳವಾರ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದ್ರಕಾಂತ ಜಿ. ಪಾಟೀಲ (ಚಂದು ಪಾಟೀಲ), ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಧರ್ಮಣ್ಣ ದೊಡ್ಡಮನಿ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ವಿದ್ಯಾಸಾಗರ ಎ. ಶಹಾಬಾದಿ, ಕಲಬುರಗಿ ನೀರಾವರಿ ಯೋಜನೆಗಳ ವಲಯದ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹರ್ಷವರ್ಧನ್ ಗುಂಡಪ್ಪ ಗುಗಳೆ, ಬೆಂಗಳೂರಿನ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಡಾ. ಎನ್.ವಿ. ಪ್ರಸಾದ್, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕ ಮನೀಷ ಖರ್ಬಿಕರ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಆರ್. ವೆಂಕಟೇಶಕುಮಾರ್, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಪಾಂಡ್ವೆ, ಕಲಬುರಗಿ ವಿಭಾಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಗರಿಮಾ ಪನ್ವಾರ್ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎನ್. ರಾಚಪ್ಪ ವಿಶೇಷ ಆಹ್ವಾನಿತರಾಗಿ ಆಗಮಿಸುವರು.

ಭವ್ಯ ಮೆರವಣಿಗೆ: ಇದಕ್ಕೂ ಮುನ್ನ ಬೆಳಿಗ್ಗೆ ೮.೩೦ ಗಂಟೆಗೆ ಕಲಬುರಗಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ವಿವಿಧ ಕಲಾತಂಡನ್ನೊಳಗೊಂಡ ಡಿ. ದೇವರಾಜ ಅರಸುರವರ ಭಾವಚಿತ್ರದ ಭವ್ಯ ಮೆರವಣಿಗೆಯನ್ನು ಏರ್ಪಡಿಸಲಾಗಿದೆ. ಈ ಭವ್ಯ ಮೆರವಣಿಗೆಯು ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಆರಂಭಗೊಂಡು ಡಾ. ಎಸ್.ಎಂ. ಪಂಡಿತ ರಂಗಮಂದಿರಕ್ಕೆ ಬಂದು ಕೊನೆಗೊಳ್ಳಲಿದೆ.

ಕಾರ್ಯಕ್ರಮದಲ್ಲಿ ಡಿ. ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಸಾಹಿತಿ ಹಾಗೂ ಉಪನ್ಯಾಸಕರಾದ ಡಾ. ಚಿ.ಸಿ. ನಿಂಗಣ್ಣ ಅವರು ವಿಶೇಷ ಉಪನ್ಯಾಸ ನೀಡುವರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಆಗಸ್ಟ್ ೨೧ರಂದು ಬೆಳಿಗ್ಗೆ ೧೧ ಗಂಟೆಗೆ ವಸತಿ ನಿಲಯಗಳ ವಿದ್ಯಾರ್ಥಿಗಳು ಹಾಗೂ ವಸತಿ ಶಾಲಾ ಮಕ್ಕಳಿಂದ ಯೋಗ, ಕರಾಟೆ ಪ್ರದರ್ಶನ ಹಾಗೂ ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಆಗಸ್ಟ್ ೨೨ ರಂದು ಬೆಳಿಗ್ಗೆ ೧೧ ಗಂಟೆಗೆ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಸತಿ ನಿಲಯ, ಶಾಲೆಗಳಲ್ಲಿ ನಸಿ ನೆಡುವ ಕಾರ್ಯಕ್ರಮ, ಮಧ್ಯಾಹ್ನ ೩ ಗಂಟೆಗೆ ಸಮಾರೋಪ ಸಮಾರಂಭ, ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಣೆ, ಛಾಯಾಚಿತ್ರ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಪ್ರದರ್ಶನ ಹಾಗೂ ಮಾರಾಟ ಮೇಳ: ಡಿ. ದೇವರಾಜ ಅರಸುರವರ ೧೦೭ನೇ ಜನ್ಮ ದಿನಾಚರಣೆ ಅಂಗವಾಗಿ ಇದೇ ಆಗಸ್ಟ್ ೨೦ ರಿಂದ ೨೨ ರವರೆಗೆ ಕಲಬುರಗಿ ನಗರದ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಮೂರು ದಿನಗಳ ಕಾಲ ಹಿಂದುಳಿದ ವರ್ಗಗಳ ವಿವಿಧ ಕಾಯಕ ಸಮುದಾಯದವರ ಕುಲ ಕಸಬುಗಳ ವೃತ್ತಿ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here