ಇಂದ್ರಾಗಾಂಧಿ ವಸತಿ ನಿಲಯಕ್ಕೆ ಅಧಿಕಾರಿ ಶುಭಾ ಭೇಟಿ

ವಾಡಿ: ಕಳಪೆ ಊಟ ವಸತಿ ಸೌಲಭ್ಯದಿಂದ ಬೇಸತ್ತು ವಿದ್ಯಾರ್ಥಿಗಳು ಎಐಡಿಎಸ್‌ಒ ನೇತೃತ್ವದಲ್ಲಿ ಹೋರಾಟಕ್ಕಿಳಿದ ಬಳಿಕ ಎಚ್ಚೆತ್ತುಕೊಂಡಿರುವ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಸ್ಥರದ ಅಧಿಕಾರಿಗಳು, ಸ್ಥಳೀಯ ಇಂದಿರಾಗಾಂಧಿ ವಸತಿ ಶಾಲೆಗೆ ಭೇಟಿ ನೀಡುವ ಮೂಲಕ ಮಕ್ಕಳ ಸಮಸ್ಯೆ ಆಲಿಸಲು ಮುಂದಾಗಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆಯ ನಂತರ ಬುಧವಾರ ಸಂಜೆ ವಸತಿ ನಿಲಯಕ್ಕೆ ಹಟಾತ್ ಭೇಟಿ ನೀಡಿದ್ದ ಸಮಾಜ ಕಲ್ಯಾಣ ಇಲಾಖೆಯ ಚಿತ್ತಾಪುರ ತಾಲೂಕು ಅಧಿಕಾರಿ ಚೇತನ್ ಗುರಿಕಾರ, ನಿಲಯದ ಮಕ್ಕಳೊಂದಿಗೆ ಮಾತುಕತೆ ನಡೆಸಿ ಅಲ್ಲಿನ ಅವ್ಯವಸ್ಥೆ ಅರಿಯುವ ಪ್ರಯತ್ನ ಮಾಡಿದ್ದರು. ಶಿಕ್ಷಕರು ಮತ್ತು ಅಡುಗೆಯವರೊಂದಿಗೆ ಮಾತನಾಡಿ ಸಮಸ್ಯೆಗಳ ಬಗ್ಗೆ ತಿಳಿಸಿದುಕೊಂಡು ವರದಿ ದಾಖಲಿಸಿಕೊಂಡಿದ್ದರು.

ಗುರುವಾರ ಬೆಳಗ್ಗೆ ಇತರ ಅಧಿಕಾರಿಗಳೊಂದಿಗೆ ಇದೇ ಇಂದಿರಾಗಾಂಧಿ ವಸತಿ ನಿಲಯಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕಿ ಪಿ.ಶುಭಾ, ನಿಲಯದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಕಣ್ಣಾರೆ ಪರೀಕ್ಷಿಸಲು ಮುಂದಾದರು. ಮಕ್ಕಳು ವಾಸವಿರುವ ಬಾಡಿಗೆ ಶಾಲಾ ಕಟ್ಟಡವನ್ನು ಅವಲೋಕಿಸಿದರು. ಪಾಠದ ಕೋಣೆ, ವಸತಿ ಕೋಣೆ, ಶೌಚಾಲಯ ಅವ್ಯವಸ್ಥೆ ಗಮನಿಸಿದರು. ಊಟಕ್ಕೆ ಬಳಸುವ ಆಹಾರ ಧಾನ್ಯಗಳ ಗುಣಮಟ್ಟ ನೋಡಿದರು. ಅಡುಗೆ ಸಹಾಯಕರೊಂದಿಗೆ ಚರ್ಚಿಸಿ ತರಾಟೆಗೆ ತೆಗೆದುಕೊಂಡರು. ಉಂಟಾದ ಮಕ್ಕಳ ಅನಾನುಕೂಲಕರ ಸಮಸ್ಯೆಗೆ ವಿಷಾಧ ವ್ಯಕ್ತಪಡಿಸಿದರು.

ಮಕ್ಕಳಿಂದ ದೂರು ಸ್ವೀಕರಿಸಿದ ಅಧಿಕಾರಿ ಶುಭಾ, ಸೋಮವಾರವೆ ಎಲ್ಲಾ ವಿದ್ಯಾರ್ಥಿಗಳನ್ನು ವಾಡಿ ನಗರದ ಖಾಸಗಿ ಕಟ್ಟಡದಿಂದ ಸ್ಥಳಾಂತರಿಸಿ ಕರದಾಳ ಗ್ರಾಮದಲ್ಲಿನ ನೂತನ ವಸತಿ ಶಾಲೆ ಕಟ್ಟಡಕ್ಕೆ ಕರೆದೊಯ್ಯಲಾಗುವುದು ಎಂದು ಭರವಸೆ ನೀಡಿದರು. ಅಧಿಕಾರಿಗಳ ಆಶಾದಾಯಕ ಭರವಸೆಗೆ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದರು. ಇದೇ ವೇಳೆ ಕರದಾಳ ನೂತನ ಕಟ್ಟಡವನ್ನೂ ವೀಕ್ಷಿಸಿದರು.

ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಚೇತನ್ ಗುರಿಕಾರ, ಗುರುಪಾದಪ್ಪ ನೀಲಗಿ, ನಿಲಯದ ಪ್ರಾಂಶುಪಾಲರು ಹಾಗೂ ಶಿಕ್ಷಕರು ಹಾಜರಿದ್ದರು.

emedialine

Recent Posts

ಕೆಬಿಎನ ಆಸ್ಪತ್ರೆಯಲ್ಲಿ ಉಚಿತ ಇಸಿಜಿ ತಪಾಸಣೆ

ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…

57 mins ago

ವಿದ್ಯಾರ್ಥಿಗಳ ಕೌಶಲ್ಯ ಉತ್ತೇಜನ ಕಾರ್ಯಕ್ರಮ (Technical event)

ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್‌ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…

1 hour ago

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

15 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

15 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

15 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420