ವಾಡಿ (ಚಿತ್ತಾಪುರ): ಸ್ವಾತಂತ್ರ್ಯ ಸಿಕ್ಕು ಐವತ್ತು ವರ್ಷಗಳ ನಂತರವೂ ಕಚೇರಿಗಳ ಮೇಲೆ ತ್ರೀವರ್ಣ ಬಾವುಟ ಹಾರಿಸದ ಆರ್ ಎಸ್ ಎಸ್ ಪಕ್ಕಾ ದೇಶದ್ರೋಹಿಗಳಿರುವ ಸಂಘಟನೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ಚಿತ್ತಾಪುರ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಲಾಗಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಮಾರಂಭದ ಬಹಿರಂಗ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ತಿರಂಗಾ ಅಪಶಕುನ ಎಂದು ಭಾವಿಸಿ ಆರ್ ಎಸ್ಸೆಸ್ಸ್ ಧ್ವಜಾರೋಹಣ ಮಾಡಿರಲಿಲ್ಲ. ಕೋಮುವಾದಿಗಳು ಇತ್ತೀಚೆಗೆ ದೇಶಭಕ್ತಿಯ ಮಾತನಾಡಲು ಶುರುಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಕೊಡುಗೆಯನ್ನು ದೇಶದ ಜನತೆ ಮರೆತಿಲ್ಲ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಸ್ಮರಿಸುತ್ತಲೇ ಸಾವರ್ಕರ್ ರನ್ನು ದೇಶಭಕ್ತ ಎಂದು ಬಿಂಬಿಸಲು ಹೊರಟಿರುವ ಬಿಜೆಪಿಗೆ ಸ್ವಾತಂತ್ರ್ಯ ಸಂಭ್ರಮಾಚರಿಸುವ ಯಾವ ನೈತಿಕತೆಯೂ ಇಲ್ಲ. ನಿಜವಾದ ದೇಶಭಕ್ತರು ನಾವು ಕಾಂಗ್ರೆಸ್ ನವರು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಶಾಸಕ ಡಾ.ಅಜಯಸಿಂಗ್, ಮಾಜಿ ಸಚಿವ ಬಾಬುರಾವ ಚವ್ಹಾಣ, ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಅಲ್ಲಮಪ್ರಭು ಪಾಟೀಲ, ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಭೀಮಣ್ಣ ಸಾಲಿ, ಸೈಯದ್ ಮಹೆಮೂದ್ ಸಾಹೇಬ ಸೇರಿದಂತೆ ಎರಡು ಸಾವಿರ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…