ಬೆಂಗಳೂರು: 2016ರಿಂದ ಸಿದ್ದರಾಮಯ್ಯ ಸರಕಾರದ ವತಿಯಿಂದ ಆಚರಣೆ ಮಾಡಲಾಗುತ್ತಿದ್ದ ಟಿಪ್ಪು ಜಯಂತಿ ಯಡಿಯೂರಪ್ಪ ನೇತೃತ್ವದ ಸರಕಾರ ರದ್ದುಗೊಳಿಸಿದೆ.
ಬಿಜೆಪಿ 2018ರ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿ ರದ್ದುಗೊಳಿಸುವುದಾಗಿ ಹೇಳಿತ್ತು. 2016 ನವೆಂಬರ್ 10 ರಂದು ಟಿಪ್ಪು ಜಯಂತಿ ಆಚರಣೆಯನ್ನು ಸಿದ್ದರಾಮಯ್ಯ ಅವರ ಸರ್ಕಾರ ಜಾರಿಗೆ ತಂದಿತ್ತು. ಮೊದಲು ಟಿಪ್ಪು ಜಯಂತಿಯನ್ನ ಅಲ್ಪಸಂಖ್ಯಾತ ಇಲಾಖೆಯಿಂದ ಆಚರಣೆ ಮಾಡಲಾಗುತ್ತಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಅವರ ಮೈತ್ರಿ ಸರಕಾರ ಕನ್ನಡ ಸಂಸ್ಕೃಂತಿ ಇಲಾಖೆಯಿಂದ ಜಯಂತಿ ಆಚರಣೆಯನ್ನು ಮುಂದುವರಿಸಿತ್ತು.
— CM of Karnataka (@CMofKarnataka) July 30, 2019