ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಯಿಂದ ಸ್ಥಳದಲ್ಲಿಯೇ ಪರಿಹಾರ

0
48

ಶಹಾಬಾದ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಎನ್ನುವ ಈ ಕಾರ್ಯಕ್ರಮ ಅತ್ಯಂತ ಯಶಸ್ವೀ ಕಾರ್ಯಕ್ರಮವಾಗಿದ್ದು ಸಂಪೂರ್ಣ ಆಡಳಿತವೇ ಹಳ್ಳಿಗೆ ಬಂದು ತಮ್ಮ ಸಮಸ್ಯೆಗಳಿಗೆ ಅಲ್ಲಿಯೇ ಪರಿಹಾರ ನೀಡುವಂತಹ ಕಾರ್ಯಕ್ರಮವಾಗಿದೆ ಎಂದು ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.

ಅವರು ಶನಿವಾರ ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾಮದಲ್ಲಿ ಆಯೋಜಿಸಲಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

ಈ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದು ಅವರವರ ಇಲಾಖೆಗಳ ಸಮಸ್ಯೆಗಳಿದ್ದರೆ ಅವರು ಇಲ್ಲಿಯೇ ಪರಿಹಾರ ದೊರಕಿಸಿಕೊಡುತ್ತಾರೆ. ಕಂದಾಯ ಇಲಾಖೆಯ ಸಮಸ್ಯೆಗಳಿದ್ದರೆ, ಪಿಂಚಣಿ, ವಿಧವಾ ವೇತನ, ಅಂಗವಿಕಲರ ವೇತನ, ಪಹಣಿಯಲ್ಲಿನ ದೋ?, ಆಧಾರ್ ಕಾರ್ಡ ತಿದ್ದುಪಡಿ ಇತ್ಯಾದಿ ಯಾವುದೇ ಇದ್ದರೂ ಸಹ ಅವುಗಳನ್ನು ಸ್ಥಳದಲ್ಲಿಯೇ ಮಾಡಿಕೊಡಲಾಗುವುದು ಎಂದರು.
ಜಿಲ್ಲಾಡಳಿತ ಪ್ರತಿನಿಧಿಸುವ ತಾಲೂಕಾ ಆಡಳಿತದಿಂದ ಕುಂದು ಕೊರತೆಗಳನ್ನು ನಿವಾರಿಸುವತ್ತ ಎಲ್ಲಾ ಪ್ರಯತ್ನ ಮಾಡುತ್ತೇವೆ. ನೀವ? ಅಲ್ಲ ನಿಮ್ಮಲ್ಲಿ ಇನ್ಯಾರಾದರೂ ಸಮಸ್ಯೆಯಿದ್ದವರಿದ್ದರೆ ಅವರಿಗೂ ಹೇಳಿ ಕಳುಹಿಸಿಕೊಡಿ ಎಂದು ಕೋರಿದರು.

ಗ್ರೇಡ್-೨ ತಹಸೀಲ್ದಾರ ಗುರುರಾಜ ಸಂಗಾವಿ ಮಾತನಾಡಿ, ಜನತೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಲ್ಲಿ ಇಲ್ಲಿ ಸಾಧ್ಯವಿರುವ ಎಲ್ಲಾ ಸಮಸ್ಯೆಗಳಿಗೂ ಇಲ್ಲಿಯೇ ಪರಿಹಾರ ನೀಡುತ್ತೇವೆ. ಕೆಲವೊಂದು ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಪಟ್ಟ ಇಲಾಖೆಗಳಿಗೆ ಅರ್ಜಿಯನ್ನು ಕಳುಹಿಸಿ ಮಾಡಲಾಗುವುದು ಎಂದರು.

ತೊನಸನಹಳ್ಳಿ(ಎಸ್) ಗ್ರಾಪಂ ಅಧ್ಯಕ್ಷೆ ತಾಪಂ ಕಾವೇರಿ ಮಹಾಲಿಂಗ ಮದ್ರಿಕಿ, ತಾಪಂ ಇಓ ಡಾ.ಬಸಲಿಂಗಪ್ಪ ಡಿಗ್ಗಿ, ಪ್ರಭು ಮುತ್ಯಾ,ಪಶು ಇಲಾಖೆಯ ಡಾ.ನೀಲಪ್ಪ ಪಾಟೀಲ,ರೈತ ಸಂಪರ್ಕ ಕೇಂದ್ರದ ಅಧಿಕಾರಿ ರವೀಂದ್ರ, ಸಿಡಿಪಿಓ ಇಲಾಖೆಯ ಅಧಿಕಾರಿ ಬಿ.ಎಸ್.ಹೊಸಮನಿ, ಸಮಾಜ ಕಲ್ಯಾಣ ಇಲಾಖೆಯಿಂದ ರವಿ ಮುತ್ತಗಾ, ಶಿಕ್ಷಣ ಸಂಯೋಜಕ ಶ್ರೀಧರ ರಾಠೋಡ, ಕಂದಾಯ ಅಧಿಕಾರಿ ಹಣಮಂತರಾವ ಪಾಟೀಲ ಸೇರಿದಂತೆ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಒಟ್ಟು ೩೧ ಅರ್ಜಿಗಳು ಬಂದಿದ್ದು, ಅದರಲ್ಲಿ ೨೦ ಅರ್ಜಿಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಯಿತು. ಉಳಿದ ೧೧ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗೆ ವರ್ಗಾಯಿಸಲಾಯಿತು.

ನಂತರ ಅಂಗನವಾಡಿಗೆ ಬೇಟಿ ನೀಡಿದ ತಹಸೀಲ್ದಾರ ಮಕ್ಕಳಲ್ಲಿ ಪೋಷಕಾಂಶ ಹೆಚ್ಚಿಸಲು ಸೇವಿಸುವ ಆಹಾರ ಪದಾರ್ಥಗಳನ್ನು ಅನಾವರಣಗೊಳಿಸಲಾಗಿತ್ತು.ಅಂಗನವಾಡಿಯಿಂದ ನೀಡಲಾಗುವ ಆಹಾರ ಧಾನ್ಯಗಳಿಂದ ಮಕ್ಕಳಿಗೆ ರುಚಿಕರ ತಿನಸು ಮಾಡಬಹುದು ಎಂದು ತಿಳಿಸುವ ವಸ್ತು ಪ್ರದರ್ಶನ ಎಲ್ಲರ ಗಮನ ಸೆಳೆಯುತ್ತಿತ್ತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here