ಹಿಂದುಳಿದ ಸಮುದಾಯಗಳ ಆಶಾಕಿರಣವಾಗಿದ್ದರು ದೇವರಾಜ ಅರಸ್: ಬಿಲಗುಂದಿ

ಶಹಾಬಾದ: ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಹಿಂದುಳಿದ ಸಮುದಾಯಗಳ ಆಶಾಕಿರಣವಾಗಿದ್ದರು ಎಂದು ನಗರಸಭೆಯ ಪೌರಾಯುಕ್ತ ಅಶೋಕ ಬಿಲಗುಂದಿ ಹೇಳಿದರು.

ಅವರು ಶನಿವಾರ ನಗರಸಭೆಯಲ್ಲಿ ದೇವರಾಜ ಅರಸು ೧೦೭ನೇ ಜಯಂತಿಯ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗೇಣಿ ಶಾಸನ,ಎಲ್.ಜಿ.ಹಾವನೂರು ಆಯೋಗ ದಂತಹ ಪ್ರಮುಖ ನಿರ್ಧಾರಗಳನ್ನು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ತೆಗೆದುಕೊಂಡ ಹಿನ್ನೆಲೆಯಲ್ಲಿ ಅದರ ಪ್ರತಿಫಲ ಇಂದಿನ ಪೀಳಿಗೆಗೆ ಆಗುತ್ತಿದೆ. ಗೇಣಿ ಹೋರಾಟದ ಅನು?ನ ಆಗದಿದ್ದರೆ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಾವನೂರು ಆಯೋಗ ರಚಿಸದಿದ್ದರೆ ಈವರೆವಿಗೂ ಬಹುಸಂಖ್ಯಾತರಿಗೆ ನ್ಯಾಯ ಸಿಗುತ್ತಿರಲಿಲ್ಲ. ಆದರೆ ದೇವರಾಜ ಅರಸು ಅವರು ತಮ್ಮ ಕಟು ನಿರ್ಧಾರದಿಂದ ಮುಂದಿನ ಬದುಕಿನ ದೂರದೃಷ್ಠಿಯಿಂದ ಕ್ರಾಂತಿಕಾರಿ ಹೆಜ್ಜೆಗಳನ್ನು ಇಟ್ಟಿದ್ದರು. ಅವರ ದೂರದೃಷ್ಟಿಯ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ದೇವರಾಜ ಅರಸರು ಕೃಷಿಕ ಕುಟುಂಬದಿಂದ ಬಂದು ಸಾಹಿತ್ಯ, ಶೈಕ್ಷಣಿಕ ಕ್ಷೇತ್ರಗಳ ಬಗ್ಗೆ ಅರಿತುಕೊಂಡು ರಾಜಕೀಯ ಮಟ್ಟದಲ್ಲೂ ಉನ್ನತ ಮಟ್ಟಕ್ಕೆ ಏರಿದರು. ಉಳುವನ ಸಂಕಷ್ಟವನ್ನು ಪರಿಹರಿಸಲು ಎಷ್ಟೇ ವಿರೋಧಗಳ ನಡುವೆಯೂ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುವುದರ ಮೂಲಕ ಉಳುವನೇ ಭೂಮಿಯ ಒಡೆಯ ಆಗುವಂತಹ ಭೂ ಸುಧಾರಣೆ ಕಾನೂನನ್ನು ಜಾರಿಗೆ ತಂದು ಹಿಂದುಳಿದ ಹಾಗೂ ಶೋಷಿತ ಸಮುದಾಯದವರು ನೆಮ್ಮದಿಯ ಜೀವನ ನಡೆಸಲು ಅರಸರೇ ಕಾರಣಿಭೂತರು ಎಂದರು.

ನಗರಸಭೆಯ ಉಪಾಧ್ಯಕ್ಷೆ ಸಲೀಮಾಬೇಗಂ, ನಗರಸಭೆಯ ವ್ಯವಸ್ಥಾಪಕ ಶಂಕರಗೌಡ ಪಾಟೀಲ, ಎಇಇ ಮುಜಾಮಿಲ್, ಎಇ ಶಾಂತರೆಡ್ಡಿ ದಂಡಗುಲಕರ್, ಆರೋಗ್ಯ ನಿರೀಕ್ಷಕ ಮೈನೊದ್ದಿನ್, ಪ್ರಾಣೇಶ ಕುಲಕರ್ಣಿ, ಸಮುದಾಯ ಸಂಘಟಕ ಅಧಿಕಾರಿ ರಘುನಾಥ ನರಸಾಳೆ,ಶಬಾನಾಬೇಗಂ, ಶಿವಾನಂದ ಜಾಮಗೊಂಡ ಇತರರು ಇದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

1 hour ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

1 hour ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

1 hour ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

1 hour ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

1 hour ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420